AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Kumaraswamy: ನೀವು ಮಣ್ಣಿನ ಮಕ್ಕಳಲ್ಲ, ಕಲ್ಲಿನ ಮಕ್ಕಳು; ಡಿಕೆ ಶಿವಕುಮಾರ್​ಗೆ ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ

ಕನಕಪುರದ ಕಡೆ ನಿಮಗೆ ಕಲ್ಲಿನ ಮಕ್ಕಳು ಅಂತಲೇ ಕರೆಯುವುದು ಎಂದು ನಮಗೆ ಗೊತ್ತಿದೆ. ಈಗೇನೋ ಕೊನೆಯ ಹಂತದಲ್ಲಾದರೂ ಮಣ್ಣಿನ ಮಕ್ಕಳಾಗಬೇಕೆಂಬ ಬುದ್ಧಿ ಬಂತಲ್ಲ ಎಂದು ಡಿಕೆ ಶಿವಕುಮಾರ್​​ಗೆ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಕಾಲೆಳೆದಿದ್ದಾರೆ.

HD Kumaraswamy: ನೀವು ಮಣ್ಣಿನ ಮಕ್ಕಳಲ್ಲ, ಕಲ್ಲಿನ ಮಕ್ಕಳು; ಡಿಕೆ ಶಿವಕುಮಾರ್​ಗೆ ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
TV9 Web
| Updated By: ಸುಷ್ಮಾ ಚಕ್ರೆ|

Updated on: Feb 23, 2022 | 6:01 PM

Share

ಮೈಸೂರು: ಜೆಡಿಎಸ್​ನವರು ಮಾತ್ರ ಮಣ್ಣಿನ ಮಕ್ಕಳಾ? ನಾವ್ಯಾರೂ ಮಣ್ಣಿನ ಮಕ್ಕಳಲ್ಲವಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನಿನ್ನೆ ಮಂಡ್ಯದಲ್ಲಿ ಭಾಷಣ ಮಾಡಿದ್ದಾರೆ. ನಮಗೆ ಜನರೇ ಮಣ್ಣಿನ ಮಕ್ಕಳು ಎಂದು ಕರೆಯುತ್ತಾರೆಯೇ ಹೊರತು ನಾವಾಗೇ ಬೋರ್ಡ್​ ಹಾಕಿಕೊಂಡು ತಿರುಗಾಡುತ್ತಿಲ್ಲ. ನೀವು ಮಣ್ಣಿನ ಮಕ್ಕಳಲ್ಲ, ಕಲ್ಲಿನ ಮಕ್ಕಳು ಎಂದು ಜನರಿಗೂ ಗೊತ್ತಿದೆ. ಕೊನೆ ಹಂತದಲ್ಲಿ ಈಗ ನೀವು ಮಣ್ಣಿನ ಮಕ್ಕಳಾಗಬೇಕೆಂದು ಬಯಸಿದ್ದೀರಿ, ಅದೂ ಆಗಿಬಿಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್​.ಡಿ. ಕುಮಾರಸ್ವಾಮಿ (HD Kumaraswamy) ಲೇವಡಿ ಮಾಡಿದ್ದಾರೆ.

ನೀವೇ ಮಣ್ಣಿನ ಮಕ್ಕಳು ಅಂತ ಬೋರ್ಡ್​ ಹಾಕಿಕೊಂಡು ತಿರುಗಾಡಿ, ನಾವೇನೂ ಬೇಡ ಅಂದಿಲ್ಲ. ಜೆಡಿಎಸ್​ನವರು ಮಣ್ಣಿನ ಮಕ್ಕಳು ಅಂತ ನಾವ್ಯಾರೂ ಬೋರ್ಡ್​ ಹಾಕಿಕೊಂಡು ಓಡಾಡಿಲ್ಲ. ಹಿಂದಿನಿಂದಲೂ ನಮ್ಮ ಪಕ್ಷ ರೈತರ ಬಗ್ಗೆ ಹೋರಾಟಗಳನ್ನು ಮಾಡಿಕೊಂಡು ಬಂದಿರುವುದರಿಂದ ನಮಗೆ ಒಂದು ಇತಿಹಾಸ ಇದೆ. ಅದರಿಂದ ಜನರೇ ನಮ್ಮನ್ನು ಮಣ್ಣಿನ ಮಕ್ಕಳು ಅಂತಾರೆ. ಆದ್ರೆ ನಿಮಗೆ ಜನ ಕಲ್ಲಿನ ಮಕ್ಕಳು ಅಂತ ಬೋರ್ಡ್​ ಹಾಕಿದ್ದಾರೆ. ಕನಕಪುರದ ಕಡೆ ನಿಮಗೆ ಕಲ್ಲಿನ ಮಕ್ಕಳು ಅಂತಲೇ ಕರೆಯುವುದು ಎಂದು ನಮಗೆ ಗೊತ್ತಿದೆ. ಈಗೇನೋ ಮಣ್ಣಿನ ಮಕ್ಕಳಾಗಲು ಹೊರಟಿದ್ದೀರ. ನಿಮಗೆ ಒಳ್ಳೆಯದಾಗಲಿ. ಕೊನೆಯ ಹಂತದಲ್ಲಾದರೂ ಮಣ್ಣಿನ ಮಕ್ಕಳಾಗಬೇಕೆಂಬ ಬುದ್ಧಿ ಬಂತಲ್ಲ ಎಂದು ಡಿಕೆ ಶಿವಕುಮಾರ್​​ಗೆ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಕಾಲೆಳೆದಿದ್ದಾರೆ.

ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಮುಖಭಂಗ ಅನುಭವಿಸುವಂತಾಗಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ʼವಿಕೃತ ಕೇಕೆʼ ಹಾಕುತ್ತಿವೆ ಎಂದು ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮೂಲಕವೂ ಬಿಜೆಪಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ರಾಜಕೀಯ ಕೊರೊನಾವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು. ಕಾಂಗ್ರೆಸ್​ನ ಸ್ವಪ್ರತಿಷ್ಠೆ, ಬಿಜೆಪಿಯ ಅಸಮರ್ಥತೆಗೆ ವಿಧಾನ ಕಲಾಪ ಆಪೋಶನವಾಯಿತು. ಜೆಡಿಎಸ್ ಎಂದೂ ಸಹ ಸದನದ ಕಲಾಪ ಅಡ್ಡಿಪಡಿಸಿಲ್ಲ. ಬಾವುಟ ತಂದವರು ಇವರೇ ಅಂತೆ, ಮಾತಾಡುವ ಸ್ವಾತಂತ್ರ್ಯ ಕೊಟ್ಟವರು ಇವರೇ ಅಂತೆ. ಅವತ್ತು ಹೋರಾಟ ಮಾಡಿದವರು ಬೇರೆ, ಇವರೇ ಬೇರೆ. ಅವತ್ತಿನ ಹೋರಾಟವನ್ನು ಹೈಜಾಕ್ ಮಾಡಿಕೊಂಡವರು ಇವರು. ಕಾಂಗ್ರೆಸ್ ಹೋರಾಟಕ್ಕೆ ಅವಾರ್ಡ್ ಇದ್ದರೆ ಸ್ಪೀಕರ್ ಕೊಡಲಿ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಕೊರೊನಾ ಬಂದಿದೆ. ಬಿಜೆಪಿ, ಕಾಂಗ್ರೆಸ್ ಒಂದೇ ನಾಣ್ಯದ 2 ಮುಖಗಳು ಎಂದು ಮೈಸೂರಿನಲ್ಲಿ ಮಾಜಿ ಮುುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಪಕ್ಷಗಳು ರಾಜ್ಯದ ಪ್ರತಿಷ್ಠೆಗೆ ಕೊಳ್ಳಿ ಇಟ್ಟಿವೆ: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಸರಣಿ ಟ್ವೀಟ್

ಯುವಕನ ಹತ್ಯೆ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ: ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?