ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯ್ತು: ಡಿಕೆಶಿ ಬುಡಕ್ಕೆ ತಂದಿಟ್ಟ ಕುಮಾರಸ್ವಾಮಿ

ಮುಡಾ ಹಗರಣ ಬಯಲಿಗೆ ಬಂದ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಗರಣದ ಬಗ್ಗೆ ಬಿಜೆಪಿ ಪ್ರತಿಭಟನೆ ಮಾಡುತ್ತಿರಬಹುದು, ಆದರೆ ಅದು ಬಯಲಿಗ ಬಂದದ್ದೇ ಬೇರೆಯವರಿಂದ. ಕೆಪಿಸಿಸಿ ಅಧ್ಯಕ್ಷರಿಂದಲೇ ಹಗರಣ ಬಯಲಿಗೆ ಬಂದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯ್ತು: ಡಿಕೆಶಿ ಬುಡಕ್ಕೆ ತಂದಿಟ್ಟ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us
ರಾಮ್​, ಮೈಸೂರು
| Updated By: Ganapathi Sharma

Updated on: Jul 05, 2024 | 11:10 AM

ಮೈಸೂರು, ಜುಲೈ 5: ಮುಖ್ಯಮಂತ್ರಿ ಖರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾತನಾಡಿದ ಅವರು, ಸಿಡಿ ಫ್ಯಾಕ್ಟರಿ ಈಗ ಬಂದ್ ಆಗಿದೆ. ಮುಡಾ ಫ್ಯಾಕ್ಟರಿ ಶುರುವಾಗಿದೆ. ಅವರ ಪಕ್ಷದ ಅಧ್ಯಕ್ಷರೇ ಮುಡಾ ಹಗರಣ ಹೊರತಂದಿದ್ದಾರೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದ್ದಾರೆ. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ ಎಂದು ಅವರು ಟೀಕಿಸಿದ್ದಾರೆ.

‘ಕಾಂಗ್ರೆಸ್‌ ಕುಮ್ಮಕ್ಕಿನಿಂದಲೇ ಹಗರಣ ಬಯಲಿಗೆ’

ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಸಿದ್ದರಾಮಯ್ಯ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ಕೇಂದ್ರ ಸಚಿವರಾದ ಬಳಿಕ ಮೊಲದ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: ಸಿಎಂ ಪಾಳೆಯದ ಸಚಿವರಿಗೆ ಹೈಕಮಾಂಡ್ ಮಟ್ಟದಲ್ಲಿ ಟಕ್ಕರ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್!

ಇದೀಗ ಮಂಡ್ಯಕ್ಕೆ ತೆರಳುತ್ತಿರುವ ಕುಮಾರಸ್ವಾಮಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮುನ್ನ ಮಂಡ್ಯದ ಕಾಳಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಗೆಲುವಿಗಾಗಿ ಕಟ್ಟಿದ್ದದ ಗಂಟನ್ನ ಬಿಚ್ಚಲಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ‌ಗೆಲವು ಸಾಧಿಸಲಿ‌ ಎಂದು ಬಿಲ್ವ ಪತ್ರೆ ಮರಕ್ಕೆ ಹರಕೆ ಗಂಟು ಕಟ್ಟಲಾಗಿತ್ತು. ಇದೀಗ ಕುಮಾರಸ್ವಾಮಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಹರಕೆ ಗಂಟು ಬಿಚ್ಚಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ