ಯಡಿಯೂರಪ್ಪ, ನನ್ನ ನಡುವೆ ಬಿರುಕು ಉಂಟು ಮಾಡಲು ಯತ್ನ; ಹೆಚ್​ಡಿ ಕುಮಾರಸ್ವಾಮಿ

ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದ್ದು, ಇಂದು ತೆರೆ ಬಿಳಲಿದೆ. ಈ ಹಿನ್ನಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯುತ್ತಿದ್ದು,​ ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ‘ಖಾಕಿ ಚಡ್ಡಿ ಹಾಕಿದ್ದಾರೆಂದು ನನ್ನ ಬಗ್ಗೆ ಹೇಳಿದ್ದಾರೆ. ಆದ್ರೆ, ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಯಡಿಯೂರಪ್ಪ, ನನ್ನ ನಡುವೆ ಬಿರುಕು ಉಂಟು ಮಾಡಲು ಯತ್ನ; ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 10, 2024 | 3:50 PM

ಮೈಸೂರು, ಆ.10: ನನ್ನ, ಯಡಿಯೂರಪ್ಪ ನಡುವೆ ಬಿರುಕು ಉಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೆಚ್​.ಡಿ.ಕುಮಾರಸ್ವಾಮಿ(H. D. Kumaraswamy)ಹೇಳಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ, ಜೆಡಿಎಸ್​ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ, ಬಿಎಸ್​ವೈ ನಡುವಿನ ಟಾಕ್​ವಾರ್​ ರಾಜಕೀಯವಾದದ್ದು, ಬಿಜೆಪಿ, ಜೆಡಿಎಸ್​​ನವರು ಉತ್ತಮವಾದ ಆಡಳಿತ ನೀಡಿದ್ದೇವೆ. ಆದರೆ, ವೈಯಕ್ತಿಕವಾಗಿ ಟೀಕೆ ಮಾಡಿಲ್ಲ ಎಂದರು.

ಲೋಕಸಭೆಯಲ್ಲಿ ಕಾಂಗ್ರೆಸ್​ನವರು 9ನೇ ಸ್ಥಾನವನ್ನು ಹೇಗೆ ಗೆದ್ದಿದ್ದಾರೆ ಗೊತ್ತಿದೆ?

ಇನ್ನು ನನ್ನ ನೇತೃತ್ವದಲ್ಲಿ 136 ಸ್ಥಾನ ಗೆದ್ದಿದ್ದೇವೆ. ಸಿದ್ದರಾಮಯ್ಯಗೆ ಕಲ್ಲುಬಂಡೆಯಾಗಿ ನಿಂತಿದ್ದೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಹಿಂದೆ ನನಗೂ ಇದೇ ರೀತಿ ಡಿಕೆಶಿ ಹೇಳಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್​ನವರು 9ನೇ ಸ್ಥಾನವನ್ನು ಹೇಗೆ ಗೆದ್ದಿದ್ದಾರೆ ಗೊತ್ತಿದೆ. ಅದಕ್ಕೆ ನಾನು 8 ಸ್ಥಾನ ಎಂದು ಹೇಳುತ್ತೇನೆ. ನನ್ನ ಕಂಡರೆ ಹೊಟ್ಟೆಉರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಒಳ್ಳೆಯ ಆಡಳಿತ ನೀಡಿದರೆ ನಮಗೆ ಯಾಕೆ ಹೊಟ್ಟೆಉರಿ. ನನ್ನ ಮೇಲೆ ಒಂದು ಕಪ್ಪುಚುಕ್ಕೆ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಸಿದ್ದರಾಮಯ್ಯ ಹಿಂದುಳಿದ ವರ್ಗದ ಮುಖ್ಯಮಂತ್ರಿ ಅಲ್ಲ, ಆರೂವರೆ ಕೋಟಿ ಜನರ ಮುಖ್ಯಮಂತ್ರಿ.

ಇದನ್ನೂ ಓದಿ:ಬಿಜೆಪಿ-ಜೆಡಿಎಸ್​​ ಮೈಸೂರು ಚಲೋ ಪಾದಯಾತ್ರೆಗೆ ಇಂದು ತೆರೆ, ಲೈವ್​ ಇಲ್ಲಿದೆ

ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ

ಖಾಕಿ ಚಡ್ಡಿ ಹಾಕಿದ್ದಾರೆಂದು ಎಂದು ನನ್ನ ಬಗ್ಗೆ ಹೇಳಿದ್ದಾರೆ. ಆದ್ರೆ, ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಸೈಟ್​ ಪಡೆದ ಬಗ್ಗೆ ಪ್ರಶ್ನೆ ಮಾಡ್ತಿದ್ದೇವೆ. ಅರಿಶಿಣ ಕುಂಕುಮ ರೀತಿ ಭೂಮಿ ದಾನ ಮಾಡಿದ್ದು ತಪ್ಪಾ ಎಂದಿದ್ದಾರೆ. ಆದ್ರೆ, ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ಪ್ರಶ್ನೆ ಮಾಡ್ತಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೊಟ್ಟಿರುವುದು ಸರ್ಕಾರದ ಭೂಮಿ. ಸಿಎಂ ಮೂಗಿನ ನೇರವಾಗಿ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಈಗಲೂ ನಾನು 14 ಸೈಟ್​ ವಾಪಸ್​ ಕೊಡಲು ಸಿದ್ಧ ಎಂದಿದ್ದಾರಂತೆ. ಸೈಟ್ ವಾಪಸ್​ ಕೊಟ್ಟರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವಾ?. ಎಂದು ಮೈಸೂರಿನಲ್ಲಿ ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ