AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿದ್ದಾಗಲೇ, ಪಕ್ಷದ ಚಟುವಟಿಕೆಗಳಲ್ಲೇ ನನ್ನ ಸಂಪರ್ಕದಲ್ಲಿ ಇರಲಿಲ್ಲ ಪ್ರಜ್ವಲ್: ಹೆಚ್​ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಚಟುವಟಿಕೆಗಳ ಸಂದರ್ಭದಲ್ಲೇ ನನ್ನ ಜತೆ ಸಂಪರ್ಕದಲ್ಲಿರದ ಪ್ರಜ್ವಲ್ ರೇವಣ್ಣ ಈಗ ವಿದೇಶದಲ್ಲಿರುವಾಗ ಸಂಪರ್ಕದಲ್ಲಿರುತ್ತಾನೆಯೇ? ಹೀಗೆಂದು ಮಾಧ್ಯಮಗಳಿಗೇ ಮರು ಪ್ರಶ್ನೆ ಹಾಕಿದ್ದಾರೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ. ಪ್ರಜ್ವಲ್ ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯ ನಡೆಯನ್ನು ಪ್ರಶ್ನಿಸಿರುವ ಅವರು, ಎಸ್ಐಟಿ ಅನವಶ್ಯಕವಾಗಿ ಕೆಲವರನ್ನು ಬಂಧಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿದ್ದಾಗಲೇ, ಪಕ್ಷದ ಚಟುವಟಿಕೆಗಳಲ್ಲೇ ನನ್ನ ಸಂಪರ್ಕದಲ್ಲಿ ಇರಲಿಲ್ಲ ಪ್ರಜ್ವಲ್: ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ರಾಮ್​, ಮೈಸೂರು
| Edited By: |

Updated on: May 16, 2024 | 1:53 PM

Share

ಮೈಸೂರು, ಮೇ 16: ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ನನ್ನ ಸಂಪರ್ಕದಲ್ಲಿ ಇಲ್ಲ. ಆತ ಮೊದಲಿನಿಂದಲೂ ಪಕ್ಷದ ಚಟುವಟಿಕೆಗಳ ಸಂದರ್ಭದಲ್ಲಿಯೂ ನನ್ನ ಸಂಪರ್ಕದಲ್ಲಿ ಇರಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು. ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ರಾಜ್ಯದಲ್ಲಿದ್ದಾಗಲೇ ನನ್ನ ಸಂಪರ್ಕದಲ್ಲಿರದ ಪ್ರಜ್ವಲ್ ವಿದೇಶದಲ್ಲಿರುವಾಗ ಹೇಗೆ ನನ್ನ ಜೊತೆ ಸಂಪರ್ಕದಲ್ಲಿರುತ್ತಾನೆ ಎಂದು ಪ್ರಶ್ನಿಸಿದರು.

ಇನ್ನು ಪ್ರಜ್ವಲ್ ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯ ನಡೆಯನ್ನು ಪ್ರಶ್ನಿಸಿರುವ ಅವರು, ಎಸ್ಐಟಿ ಅನವಶ್ಯಕವಾಗಿ ಕೆಲವರನ್ನು ಬಂಧಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ದೇವೇರಾಜೇಗೌಡರನ್ನು ಪ್ರಕರಣ ದಾಖಲಾಗಿ ಒಂದು ತಿಂಗಳ ನಂತರ ಬಂಧಿಸಿದ್ದು ಯಾಕೆ? ಎಸ್ಐಟಿಯವರಿಗೆ ದೇವೇರಾಜೇಗೌಡರಿಂದ ಏನು ಮಾಹಿತಿ ಬೇಕಿದೆ? ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಮಾಹಿತಿನಾ? ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿನಾ? ಈ ಪ್ರಕರಣದ ಆಡಿಯೋ ತುಣುಕು ಬಿಡುಗಡೆಯಾಗಿತ್ತಲ್ಲ ಅದರ ಮಾಹಿತಿನಾ? ಏತಕ್ಕಾಗಿ ಎಸ್ಐಟಿ ನಾಲ್ಕು ದಿನದಿಂದ ವಶಕ್ಕೆ ಪಡೆದುಕೊಂಡು ಇಟ್ಟುಕೊಂಡಿದೆ ಎಂದು ಅವರು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ಎರಡು ಭಾಗ ಇದೆ. ಒಂದು ವಿಡಿಯೋ ಮಾಡಿಕೊಂಡವನ ಅಪರಾಧ. ಮತ್ತೊಂದು ಆ ವಿಡಿಯೋವನ್ನು ವೈರಲ್ ಮಾಡಿ ಕುಟುಂಬಗಳನ್ನು ಬೀದಿಗೆ ತಂದವರದ್ದು. ಇದು ಕೂಡ ಘೋರ ಅಪರಾಧ. ಆದರೆ ಎಸ್ಐಟಿ ವೈರಲ್ ಮಾಡಿದವರನ್ನು ಬಂಧಿಸುವಲ್ಲಿ ವಿಫಲವಾಗಿದೆ. ಆರೋಪಿ ಖಾಸಗಿ ಚಾನೆಲ್‌ಗೆ ಸಂದರ್ಶನ ನೀಡುತ್ತಾನೆ. ಆದರೆ ಎಸ್ಐಟಿಗೆ ಸಿಗುತ್ತಿಲ್ಲ ಅಂದರೆ ಏನು ಅರ್ಥ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಎಸ್ಐಟಿ ಸೂಕ್ತವಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಅವರು ಆರೋಪಿಸಿದರು.

ದೇವರಾಜೇಗೌಡ ಪೊಲೀಸ್ ಕಸ್ಟಡಿ ವಿಸ್ತರಣೆ

ಮತ್ತೊಂದೆಡೆ, ಅತ್ಯಾಚಾರ ಆರೋಪ ಕೇಸ್​ನಲ್ಲಿ ಬಂಧನಕ್ಕೊಳಗಾಗಿರುವ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿ ಒಂದು ದಿನದ ಮಟ್ಟಿಗೆ ವಿಸ್ತರಣೆಯಾಗಿದೆ. ದೇವರಾಜೇಗೌಡರನ್ನು ಮೇ 14ರಂದು ಹೊಳೆನರಸೀಪುರ ಪೊಲೀಸರು ಕಸ್ಟಡಿಗೆ ಪಡೆದಿದ್ದರು. ಇಂದು ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದ್ದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಒಮ್ಮೆ ಟಿಕೆಟ್ ರದ್ದು, ಮತ್ತೆ ಟಿಕೆಟ್ ಕಾಯ್ದಿರಿಸಿ ವಿಮಾನ ಏರದ ಪ್ರಜ್ವಲ್: ಎಸ್​ಐಟಿ ಅಧಿಕಾರಿಗಳು ಬೇಸ್ತು

ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ ಮತ್ತೆ ನಾಳೆ, ಅಂದ್ರೆ ಶುಕ್ರವಾರ ಹಾಜರುಪಡಿಸಲು ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ