AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕೆ.ಆರ್. ಕ್ಷೇತ್ರದಲ್ಲಿ ಶೇಕಡಾ 100ರಷ್ಟು ಲಸಿಕೆ ನೀಡಿಕೆ; ಅತಿ ಹೆಚ್ಚು ಲಸಿಕೆ ನೀಡಿರುವ ರಾಜ್ಯದ ಮೊದಲ ಕ್ಷೇತ್ರ

Mysuru: ಕೆಲ ಗ್ರಾಮ, ಗುಡ್ಡಗಾಡು ಪ್ರದೇಶದಲ್ಲಿ ಲಸಿಕೆ ಅಭಿಯಾನ ಆಗಬೇಕಿದೆ. ಅಲ್ಲಿ ಜನರು ಮುಂದೆ ಬಂದು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಅವರಿಗೂ ಲಸಿಕೆ ಅರಿವು ಮೂಡಿಸಿ ಲಸಿಕೆ ನೀಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಮೈಸೂರು: ಕೆ.ಆರ್. ಕ್ಷೇತ್ರದಲ್ಲಿ ಶೇಕಡಾ 100ರಷ್ಟು ಲಸಿಕೆ ನೀಡಿಕೆ; ಅತಿ ಹೆಚ್ಚು ಲಸಿಕೆ ನೀಡಿರುವ ರಾಜ್ಯದ ಮೊದಲ ಕ್ಷೇತ್ರ
ಡಾ. ಕೆ. ಸುಧಾಕರ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Sep 30, 2021 | 3:56 PM

Share

ಮೈಸೂರು: ಕೆ.ಆರ್. ಕ್ಷೇತ್ರದಲ್ಲಿ ಶೇಕಡಾ 100ರಷ್ಟು ಲಸಿಕೆ ನೀಡಲಾಗಿದೆ. ಅತಿ ಹೆಚ್ಚು ಕೊವಿಡ್ ಲಸಿಕೆ ಈ ಕ್ಷೇತ್ರದಲ್ಲಿ ನೀಡಲಾಗಿದೆ. ಶಾಸಕ ರಾಮದಾಸ್ ನೇತೃತ್ವದಲ್ಲಿ ಲಸಿಕಾ ಅಭಿಯಾನ ನಡೆಸಲಾಗಿದೆ. ಅಭಿಯಾನಕ್ಕೆ ಹಲವು ಸಂಘ ಸಂಸ್ಥೆಗಳು ಸಾಥ್ ನೀಡಿವೆ ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಶೇಕಡಾ 80ರಷ್ಟು ಲಸಿಕೆ ನೀಡಲಾಗಿದೆ. ಮೈಸೂರಿನ ಕೆ.ಆರ್. ಕ್ಷೇತ್ರದಲ್ಲಿ ಶೇಕಡಾ 100 ಲಸಿಕೆ ನೀಡಿಕೆ ಆಗಿದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲೇ ಮೊದಲ ಅತಿ ಹೆಚ್ಚು ಲಸಿಕೆ ಕ್ಷೇತ್ರ ಕೆ.ಆರ್.ಕ್ಷೇತ್ರ. ಶಾಸಕ ರಾಮದಾಸ್ ನೇತೃತ್ವದಲ್ಲಿ‌ ಬೃಹತ್ ಲಸಿಕಾ ಅಭಿಯಾನ ನಡೆದಿದೆ. ಇದಕ್ಕೆ ಹಲವು ಸಂಘ ಸಂಸ್ಥೆಗಳು ಕೂಡ ಸಹಕಾರ ನೀಡಿವೆ. ರಾಜ್ಯದಲ್ಲಿಯು ಕೂಡ ಶೇ.80 ರಷ್ಟು ಲಸಿಕೆ ಆಗಿದೆ. ಆದರೆ ಕೆಲ ಗ್ರಾಮ, ಗುಡ್ಡಗಾಡು ಪ್ರದೇಶದಲ್ಲಿ ಲಸಿಕೆ ಅಭಿಯಾನ ಆಗಬೇಕಿದೆ. ಅಲ್ಲಿ ಜನರು ಮುಂದೆ ಬಂದು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಅವರಿಗೂ ಲಸಿಕೆ ಅರಿವು ಮೂಡಿಸಿ ಲಸಿಕೆ ನೀಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ರಾಮದಾಸ್‌ಗೆ ಮಂತ್ರಿಯಾಗುವ ಎಲ್ಲ ಅರ್ಹತೆ ಇದೆ. ಆದರೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧರಿಸುತ್ತೆ. ರಾಮದಾಸ್ ಮಾರ್ಗದರ್ಶನದಲ್ಲಿ ದಸರಾ ನಡೆಯುತ್ತೆ. ಇದರಲ್ಲಿ ಬೇರೆ ವಿಶೇಷವಾದ ಅರ್ಥ ಏನೂ ಇಲ್ಲ. ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹಿರಿಯರಿದ್ದಾರೆ. ಹೀಗಾಗಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಡಾ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಅವಕಾಶ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021 ರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಅವಕಾಶ ನೀಡಬೇಕು ಎಂದಿದೆ. ತಾಂತ್ರಿಕಾ ಸಲಹಾ ಸಮಿತಿಗೆ ಈ ಬಗ್ಗೆ ವರದಿ ನೀಡಿದ್ದೇವೆ. ಜಂಬೂಸವಾರಿ ವೀಕ್ಷಣೆಗೆ ಅರಮನೆಯಲ್ಲಿ ಅವಕಾಶ ಕೊಡುವ ಬಗ್ಗೆ ಚಿಂತನೆ ನಡೆಸಲಾಗಿದೆ. 3.5 ಮೀಟರ್ ಅಂತರ ಕಾಯ್ದುಕೊಂಡು ವೀಕ್ಷಣೆಗೆ ಅವಕಾಶ ನೀಡಬೇಕು ಎಂದು ಚರ್ಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಗೆ ಈ ಬಗ್ಗೆ ವರದಿ ನೀಡಲಾಗಿದೆ. ವರದಿಗೆ ಅನುಮತಿ ಕೊಟ್ಟ ಬಳಿಕ ಗೈಡ್‌ಲೈನ್ಸ್ ಜಾರಿ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: SM Krishna: ಮೈಸೂರು ದಸರಾ ಉದ್ಘಾಟನೆಗೆ ಆಮಂತ್ರಿಸಿದ ಹಿನ್ನೆಲೆ; ಪತ್ರದ ಮುಖೇನ ಧನ್ಯವಾದ ತಿಳಿಸಿದ ಎಸ್.ಎಂ ಕೃಷ್ಣ

ಇದನ್ನೂ ಓದಿ: ದಸರಾ ಸಂಭ್ರಮಕ್ಕೂ ಮುನ್ನ ಕೊವಿಡ್ ಎಚ್ಚರಿಕೆಯ ಸಂದೇಶ ರವಾನಿಸಿದ ಕೇಂದ್ರ ಗೃಹ ಕಾರ್ಯದರ್ಶಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ