AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮಳೆಯಿಂದಾಗಿ ಮರ ಉರುಳಿ ಬಿದ್ದು ಆಟೋ ಚಾಲಕ ಸಾವು

Mysuru News: ಮರ ಉರುಳಿ ಅನಾಹುತ ಸಂಭವಿಸಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಎನ್.ಆರ್. ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪಾಲಿಕೆ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆ ನಡೆದಿದೆ.

ಮೈಸೂರು: ಮಳೆಯಿಂದಾಗಿ ಮರ ಉರುಳಿ ಬಿದ್ದು ಆಟೋ ಚಾಲಕ ಸಾವು
ಮರ ಉರುಳಿ ಬಿದ್ದು ಆಟೋ ಚಾಲಕ ಸಾವು
TV9 Web
| Updated By: ganapathi bhat|

Updated on:Sep 30, 2021 | 11:23 PM

Share

ಮೈಸೂರು: ಮಳೆಯಿಂದಾಗಿ ಮರ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿದ ಘಟನೆ ಮೈಸೂರು- ಬೆಂಗಳೂರು ರಸ್ತೆಯ ಫೈವ್​​​ ಲೈಟ್ ವೃತ್ತದಲ್ಲಿ ನಡೆದಿದೆ. ಮೈಸೂರಿನಲ್ಲಿ ಸಂಜೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಮರ ಉರುಳಿ ಅನಾಹುತ ಸಂಭವಿಸಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಎನ್.ಆರ್. ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪಾಲಿಕೆ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆ ನಡೆದಿದೆ.

ಚಾಮರಾಜನಗರ: ಮಳೆ ಅವಾಂತರ; ಲಕ್ಷಾಂತರ ಮೌಲ್ಯದ ವಸ್ತುಗಳು ನೀರುಪಾಲು ಭಾರಿ ಮಳೆಯಿಂದಾಗಿ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಉಂಟಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಮಳೆ ಅವಾಂತರದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ನೀರುಪಾಲು ಆಗಿದೆ. ಅವೈಜ್ಞಾನಿಕ ಕಾಮಗಾರಿಯಿಂದ ನೀರು ನುಗ್ಗಿರುವ ಆರೋಪ ಕೇಳಿಬಂದಿದೆ. ಗುತ್ತಿಗೆದಾರನ ಎಡವಟ್ಟಿನಿಂದ ಅಂಗಡಿಗಳಿಗೆ ನೀರು‌ ನುಗ್ಗಿದೆ ಎಂದು ಹೇಳಲಾಗಿದೆ.

ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದ ನೀರಿನ ಪರಿಣಾಮವಾಗಿ ಲಕ್ಷಾಂತರ ರುಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ನೀರು ಪಾಲಾಗಿದೆ. ಗುತ್ತಿಗೆದಾರನ ಎಡವಟ್ಟಿನಿಂದ ಅಂಗಡಿ ಮುಂಗಟ್ಟುಗಳಿಗೆ ನೀರು‌ ನುಗ್ಗಿದೆ ಎಂದು ಹೇಳಲಾಗಿದೆ. ಕಾಮಗಾರಿಗಾಗಿ ತೆಗೆದ ಗುಂಡಿ, ನಿರ್ಮಿಸಿದ ತಡೆಗೋಡಿಯಿಂದ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 766 ರಸ್ತೆ ಇಕ್ಕೆಲಗಳಲ್ಲಿ ಚರಂಡಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಗುತ್ತಿಗೆದಾರನ ಎಡವಟ್ಟಿನಿಂದ ಹೀಗಾಗಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ: ಕೆಎಸ್​ಆರ್​ಟಿಸಿ ಬಸ್ ನಿಲ್ದಾಣ ಜಲಾವೃತ ಭಾರಿ ಮಳೆಯಿಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ಕೆ.ಆರ್. ಪೇಟೆ ಕೆಎಸ್​​ಆರ್​ಟಿಸಿ ಬಸ್ ನಿಲ್ದಾಣ ಜಲಾವೃತವಾಗಿದೆ. ಬಸ್​ಗೆ ಕಾದು ಕುಳಿತಿದ್ದ ಪ್ರಯಾಣಿಕರು ತೀವ್ರ ಪರದಾಟ ಪಡುವಂತಾಗಿದೆ. ಪ್ರಯಾಣಿಕರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡುತ್ತಿದ್ದಾರೆ. ಮಳೆ ನೀರಿನಲ್ಲಿ ಬಂದ ಹಾವುಗಳು ಪ್ರಯಾಣಿಕರಲ್ಲಿ ಭೀತಿ ಹುಟ್ಟಿಸಿವೆ. ಹೀಗಾಗಿ ಪ್ರಯಾಣಿಕರು ಬಸ್ ನಿಲ್ದಾಣದ ಕಂಬಗಳು ಹಾಗೂ ಚೇರ್​​ಗಳ ಮೇಲೆ ನಿಂತಿರುವ ದೃಶ್ಯ ಕಂಡುಬಂದಿದೆ.

ಇದನ್ನೂ ಓದಿ: ಮಳೆಯಲ್ಲಿ ನೆನೆಯುತ್ತಿದ್ದ ಚಿರತೆ ಮರಿಯನ್ನು ರಕ್ಷಿಸಿ ಕರ್ತವ್ಯ ಮೆರೆದ ಪ್ರಾಣಿ ರಕ್ಷಕರು; ಕಂಬಳಿ ಹೊದ್ದು ಚಿರತೆ ಮರಿ ಮಲಗಿರುವ ದೃಶ್ಯ ನೋಡಿ

ಇದನ್ನೂ ಓದಿ: ಮೈಸೂರು: ಕೆ.ಆರ್. ಕ್ಷೇತ್ರದಲ್ಲಿ ಶೇಕಡಾ 100ರಷ್ಟು ಲಸಿಕೆ ನೀಡಿಕೆ; ಅತಿ ಹೆಚ್ಚು ಲಸಿಕೆ ನೀಡಿರುವ ರಾಜ್ಯದ ಮೊದಲ ಕ್ಷೇತ್ರ

Published On - 10:24 pm, Thu, 30 September 21

‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್