ಮೈಸೂರು: ಮಳೆಯಿಂದಾಗಿ ಮರ ಉರುಳಿ ಬಿದ್ದು ಆಟೋ ಚಾಲಕ ಸಾವು

| Updated By: ganapathi bhat

Updated on: Sep 30, 2021 | 11:23 PM

Mysuru News: ಮರ ಉರುಳಿ ಅನಾಹುತ ಸಂಭವಿಸಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಎನ್.ಆರ್. ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪಾಲಿಕೆ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆ ನಡೆದಿದೆ.

ಮೈಸೂರು: ಮಳೆಯಿಂದಾಗಿ ಮರ ಉರುಳಿ ಬಿದ್ದು ಆಟೋ ಚಾಲಕ ಸಾವು
ಮರ ಉರುಳಿ ಬಿದ್ದು ಆಟೋ ಚಾಲಕ ಸಾವು
Follow us on

ಮೈಸೂರು: ಮಳೆಯಿಂದಾಗಿ ಮರ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿದ ಘಟನೆ ಮೈಸೂರು- ಬೆಂಗಳೂರು ರಸ್ತೆಯ ಫೈವ್​​​ ಲೈಟ್ ವೃತ್ತದಲ್ಲಿ ನಡೆದಿದೆ. ಮೈಸೂರಿನಲ್ಲಿ ಸಂಜೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಮರ ಉರುಳಿ ಅನಾಹುತ ಸಂಭವಿಸಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಎನ್.ಆರ್. ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪಾಲಿಕೆ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆ ನಡೆದಿದೆ.

ಚಾಮರಾಜನಗರ: ಮಳೆ ಅವಾಂತರ; ಲಕ್ಷಾಂತರ ಮೌಲ್ಯದ ವಸ್ತುಗಳು ನೀರುಪಾಲು
ಭಾರಿ ಮಳೆಯಿಂದಾಗಿ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಉಂಟಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಮಳೆ ಅವಾಂತರದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ನೀರುಪಾಲು ಆಗಿದೆ. ಅವೈಜ್ಞಾನಿಕ ಕಾಮಗಾರಿಯಿಂದ ನೀರು ನುಗ್ಗಿರುವ ಆರೋಪ ಕೇಳಿಬಂದಿದೆ. ಗುತ್ತಿಗೆದಾರನ ಎಡವಟ್ಟಿನಿಂದ ಅಂಗಡಿಗಳಿಗೆ ನೀರು‌ ನುಗ್ಗಿದೆ ಎಂದು ಹೇಳಲಾಗಿದೆ.

ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದ ನೀರಿನ ಪರಿಣಾಮವಾಗಿ ಲಕ್ಷಾಂತರ ರುಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ನೀರು ಪಾಲಾಗಿದೆ. ಗುತ್ತಿಗೆದಾರನ ಎಡವಟ್ಟಿನಿಂದ ಅಂಗಡಿ ಮುಂಗಟ್ಟುಗಳಿಗೆ ನೀರು‌ ನುಗ್ಗಿದೆ ಎಂದು ಹೇಳಲಾಗಿದೆ. ಕಾಮಗಾರಿಗಾಗಿ ತೆಗೆದ ಗುಂಡಿ, ನಿರ್ಮಿಸಿದ ತಡೆಗೋಡಿಯಿಂದ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 766 ರಸ್ತೆ ಇಕ್ಕೆಲಗಳಲ್ಲಿ ಚರಂಡಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಗುತ್ತಿಗೆದಾರನ ಎಡವಟ್ಟಿನಿಂದ ಹೀಗಾಗಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ: ಕೆಎಸ್​ಆರ್​ಟಿಸಿ ಬಸ್ ನಿಲ್ದಾಣ ಜಲಾವೃತ
ಭಾರಿ ಮಳೆಯಿಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ಕೆ.ಆರ್. ಪೇಟೆ ಕೆಎಸ್​​ಆರ್​ಟಿಸಿ ಬಸ್ ನಿಲ್ದಾಣ ಜಲಾವೃತವಾಗಿದೆ. ಬಸ್​ಗೆ ಕಾದು ಕುಳಿತಿದ್ದ ಪ್ರಯಾಣಿಕರು ತೀವ್ರ ಪರದಾಟ ಪಡುವಂತಾಗಿದೆ. ಪ್ರಯಾಣಿಕರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡುತ್ತಿದ್ದಾರೆ. ಮಳೆ ನೀರಿನಲ್ಲಿ ಬಂದ ಹಾವುಗಳು ಪ್ರಯಾಣಿಕರಲ್ಲಿ ಭೀತಿ ಹುಟ್ಟಿಸಿವೆ. ಹೀಗಾಗಿ ಪ್ರಯಾಣಿಕರು ಬಸ್ ನಿಲ್ದಾಣದ ಕಂಬಗಳು ಹಾಗೂ ಚೇರ್​​ಗಳ ಮೇಲೆ ನಿಂತಿರುವ ದೃಶ್ಯ ಕಂಡುಬಂದಿದೆ.

ಇದನ್ನೂ ಓದಿ: ಮಳೆಯಲ್ಲಿ ನೆನೆಯುತ್ತಿದ್ದ ಚಿರತೆ ಮರಿಯನ್ನು ರಕ್ಷಿಸಿ ಕರ್ತವ್ಯ ಮೆರೆದ ಪ್ರಾಣಿ ರಕ್ಷಕರು; ಕಂಬಳಿ ಹೊದ್ದು ಚಿರತೆ ಮರಿ ಮಲಗಿರುವ ದೃಶ್ಯ ನೋಡಿ

ಇದನ್ನೂ ಓದಿ: ಮೈಸೂರು: ಕೆ.ಆರ್. ಕ್ಷೇತ್ರದಲ್ಲಿ ಶೇಕಡಾ 100ರಷ್ಟು ಲಸಿಕೆ ನೀಡಿಕೆ; ಅತಿ ಹೆಚ್ಚು ಲಸಿಕೆ ನೀಡಿರುವ ರಾಜ್ಯದ ಮೊದಲ ಕ್ಷೇತ್ರ

Published On - 10:24 pm, Thu, 30 September 21