AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾದಲ್ಲಿ ಸಚಿವರನ್ನ ಎಸ್ಪಿ ತಡೆದಿರುವ ಹಿಂದಿನ ಕಾರಣ ಬಯಲು!

ಈ ಬಾರಿಯ ಮೈಸೂರು ದಸರಾ ವಿಜೃಂಭಣೆಯಿಂದ ಮುಕ್ತಾಯವಾಗಿದೆ. ಅಂಬಾರಿ ಹೊತ್ತ ಪ್ರಶಾಂತ ಎಲ್ಲವನ್ನ ಶಾಂತ ಚಿತ್ತದಿಂದ ನಿರ್ವಹಿಸಿದ್ದಾನೆ. ಎಲ್ಲವೂ ಸುಸೂತ್ರವಾಗಿ ಮುಗಿತು ಎನ್ನವಷ್ಟರಲ್ಲೇ ಮೂವರು ಸಚಿವರನ್ನು ಎಸ್‌ಪಿ ರಿಷ್ಯಂತ್‌ ತಡೆದಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆರೋಪ ಪ್ರತ್ಯಾರೋಪ ಜೋರಾಗಿವೆ. ಇದರ ಮಧ್ಯೆ ಇದೀಗ ಪ್ರಕರಣದ ಹಿಂದಿನ ಅಸಲಿಯತ್ತು ಬಯಲಿಗೆ ಬಂದಿದೆ. ಹಾಗಾದ್ರೆ, ಎಸ್ಪಿಯವರು ಸಚಿವರನ್ನು ತಡೆದಿದ್ಯಾಕೆ? ತಡೆ ಹಿಡಿಯಲು ಯಾರು ಹೇಳಿದ್ದು? ಎನ್ನುವ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಮೈಸೂರು ದಸರಾದಲ್ಲಿ ಸಚಿವರನ್ನ ಎಸ್ಪಿ ತಡೆದಿರುವ ಹಿಂದಿನ ಕಾರಣ ಬಯಲು!
Minister Dasara
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 22, 2026 | 4:58 PM

Share

ಮೈಸೂರು. (ಅಕ್ಟೋಬರ್ 22): ಜಂಬೂಸವಾರಿ ದಿನ ಅಂದರೆ ನಿನ್ನೆ (ಅ.21) ಮೈಸೂರು ಅರಮನೆ ಆವರಣದಲ್ಲಿ ನಂದಿ ಧ್ವಜದ ಪೂಜೆಗೆ ತೆರಳುತ್ತಿದ್ದ ಮೂವರು ಸಚಿವರಾದ ಶಿವರಾಜ್ ತಂಗಡಗಿ, ನರೇಂದ್ರ ಸ್ವಾಮಿ, ಬಸವಂತಪ್ಪ ಅವರನ್ನು ಎಸ್ಪಿ ಸಿ.ಬಿ.ರಿಷ್ಯಂತ್ ತಡೆದಿದ್ದು, ಈ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಚಿವರನ್ನ ತಡೆದಿದ್ದೇಕೆ? ದಲಿತ ಸಚಿವರು ಎಂಬ ಕಾರಣಕ್ಕೆ ತಡೆಯಲಾಯ್ತಾ ಎಂಬ ವ್ಯಾಪಾಕ ಟೀಕೆ ವ್ಯಕ್ತವಾಗುತ್ತಿದ್ದು, ಇದೀಗ ಅಸಲಿ ಕಾರಣ ಬಯಲಾಗಿದೆ. ನಂದಿ ಧ್ವಜದ ಪೂಜೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾವ ಸಚಿವರಿಗೂ ಅವಕಾಶ ಇಲ್ಲ. ಹೀಗಾಗಿ ಇಬ್ಬರನ್ನು ಹೊರತುಪಡಿಸಿ ಯಾರಿಗೂ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್‌ ಸೂಚಿಸಿದ್ದರು. ಅದರಂತೆ ಎಸ್ಪಿ ರಿಷ್ಯಂತ್ ಸಚಿವರನ್ನು ತಡೆದಿದ್ದಾರೆ ಎನ್ನುವುದು ತಿಳಿದುಬಂದಿದೆ.

ಸಚಿವರಿಗೆ ಅವಕಾಶವಿಲ್ಲ ಎಂದು ಬ್ರೀಫಿಂಗ್ ಮಾಡಿದ್ದ ಕಮಿಷನರ್

ನಂದಿ ಧ್ವಜದ ಪೂಜೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಇಬ್ಬರನ್ನೂ ಹೊರತುಪಡಿಸಿ ಬೇರೆ ಯಾವ ಸಚಿವರಿಗೂ ಅವಕಾಶ ಇಲ್ಲ. ಸಚಿವರು ಅವರಿಗೆ ಮೀಸಲಿಟ್ಟ ಸ್ಥಳದಲ್ಲಿ ಕುಳಿತಿರಬೇಕೆಂದು ತೀರ್ಮಾನಿಸಲಾಗಿತ್ತು. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಕಮಿಷನರ್​​ ಬ್ರೀಫಿಂಗ್ ಮಾಡಿದ್ದರು.ಹೀಗಾಗಿ ಪೊಲೀಸ್ ಹಿರಿಯ ಅಧಿಕಾರಗಳ ತೀರ್ಮಾನದಂತೆ ಕರ್ತವ್ಯ ನಿರ್ವಹಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನಂದಿಧ್ವಜ ಪೂಜೆ ವೇಳೆ ಸಚಿವರನ್ನೇ ತಡೆದ ಪ್ರಕರಣ: ವಿಚಾರಣೆ ನಡೆಸಿ ವರದಿ ನೀಡುವಂತೆ ಸಿಎಸ್​​ಗೆ ಸಿಎಂ ಡಿಕೆ ಶಿವಕುಮಾರ್​​ ಸೂಚನೆ

ನಿನ್ನೆ (ಅ.21) ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಬಿಟ್ಟು ಬೇರೆಯವರಿಗೆ ನಂದಿ ಧ್ವಜ ಪೂಜೆಗೆ ಅವಕಾಶವಿಲ್ಲ. ಸಚಿವರು ಅವರಿಗೆ ಮೀಸಲಿಟ್ಟ ಸ್ಥಳದಲ್ಲಿ ಕುಳಿತಿರಬೇಕೆಂದು ತೀರ್ಮಾನಿಸಲಾಗಿತ್ತು. ಈ ಬಗ್ಗೆ ಬೆಳಗ್ಗೆಯೇ 300ಕ್ಕೂ ಹೆಚ್ಚು ಅಧಿಕಾರಿಗಳಿಗೆ ಕಮಿಷನರ್ ಮಾಹಿತಿ ನೀಡಿದ್ದರು.​ ಈ ವಿಚಾರ ಡಿಜಿ , ಐಜಿಪಿ ಎಂ.ಎ.ಸಲೀಂ ಅವರ ಗಮನಕ್ಕೂ ಇತ್ತು. ಆದರೆ ಸಚಿವರಿಗೆ ನೀವು ಪೂಜೆಗೆ ಬರುವಂತೆ ಇಲ್ಲ ಎಂದು ತಿಳಿಸಿರಲಿಲ್ಲ. ಹೀಗಾಗಿ ನಂದಿ ಪೂಜೆಗೆಂದು ಸಿಎಂ ಜೊತೆಗೆ ಆಗಮಿಸಿದ್ದ ಸಚಿವರನ್ನು ಎಸ್ಪಿ ರಿಷ್ಯಂತ್ ತಡೆದಿದ್ದಾರೆ. ಹೀಗಾಗಿ ಇದೀಗ ಕಮಿಷನ್ ನತ್ತ ಪ್ರಕರಣ ತಿರುಗಿದ್ದು, ಮುಂದೆ ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ತನಿಖೆಗೆ ಆದೇಶಿಸಿರುವ ಸಿಎಂ

ಸದ್ಯ ಪ್ರಕರಣ ಸಂಬಂಧ ಸಿಎಂ ಡಿಕೆ ಶಿವಕುಮಾರ್, ವಿಚಾರಣೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಅದೇಶಿಸಿದ್ದಾರೆ. ಸಿಎಂ ಸೂಚನೆಯಂತೆ ಸಚಿವರಿಗೆ ಕರೆ ಮಾಡಿ ಮಾಹಿತಿ ಪಡೆದಿರೋ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಡಿಜಿ, ಐಜಿಪಿಗೆ ಮುಂದಿನ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದ್ದಾರೆ.

ಸಿಎಂ, ಉಸ್ತುವಾರಿ ಸಚಿವರನ್ನು ಬಿಟ್ಟು ಯಾರನ್ನೂ ಬಿಡಬಾರದು ಅಂತಾ ಸೂಚನೆ ಕೊಟ್ಟಿದ್ಯಾರು? ಸಚಿವರನ್ನು ತಡೆಯುವಂತೆ ಎಸ್​ಪಿ ರಿಷ್ಯಂತ್​ಗೆ ಸೂಚಿಸಿದ್ದು ಯಾರು? ಎನ್ನುವ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಿದೆ. ಆದ್ರೂ ತನಿಖೆಯಿಂದ ಏನು ಹೊರಬರಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Thu, 22 October 26

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ
ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು, ಗುಂಡಿಗಳ ಸಮಸ್ಯೆ
ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು, ಗುಂಡಿಗಳ ಸಮಸ್ಯೆ
ಆಯುಧ ಪೂಜೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡ
ಆಯುಧ ಪೂಜೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡ