ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಮೈಸೂರು ರೈಲು ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿಯಿಂದ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಆಂಧ್ರಪ್ರದೇಶದ ಅನಾಮಿಕ ವ್ಯಕ್ತಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ. ಪೊಲೀಸರು, ರೈಲ್ವೇ ಅಧಿಕಾರಿಗಳು ಮತ್ತು ಬಾಂಬ್ ನಿಷ್ಕ್ರಿಯ ದಳವು ರೈಲು ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದರು. ಆಗತಾನೇ ಬಂದು ನಿಂತಿದ್ದ ವಂದೇ ಭಾರತ್ ರೈಲಿನಲ್ಲೂ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಮೈಸೂರು, ಮಾರ್ಚ್ 09: ಮೈಸೂರು ರೈಲು ನಿಲ್ದಾಣಕ್ಕೆ (Mysore Railway Station) ಹುಸಿ ಬಾಂಬ್ ಬೆದರಿಕೆ ಕರೆ (Hoax Bomb Call) ಬಂದಿದೆ. ಅನಾಮಿಕ ವ್ಯಕ್ತಿಯೋರ್ವ ಆಂಧ್ರ ಪ್ರದೇಶದಿಂದ ಕರೆ ಮಾಡಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ್ದಾನೆ. ಬೆದರಿಕೆ ಕರೆ ಬರುತ್ತಿದ್ದಂತೆ ಮೈಸೂರು ರೈಲ್ವೆ ನಿಲ್ದಾಣದ ಪೋಲೀಸರು, ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಅಲರ್ಟ್ ಆಗಿದ್ದಾರೆ. ರೈಲ್ವೆ ಫ್ಲಾಟ್ಫಾರಂ ಹಾಗೂ ರೈಲುಗಳನ್ನು ಪರಿಶೀಲನೆ ನಡೆಸಿದರು.
10 ಪ್ರಕರಣಗಳು ದಾಖಲು
ಬಾಂಬ್ ಬೆದರಿಕೆ ಕರೆ ಸಂಬಂಧ 2024ರಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ 10 ಪ್ರಕರಣಗಳು ದಾಖಲಾಗಿದ್ದವು. ಈ ಎಲ್ಲ ಪ್ರಕರಣಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದಕ್ಕೆ ದಾಖಲಾಗಿವೆ. 2024ರ ಅಕ್ಟೋಬರ್ 22 ರಿಂದ 26ರವರೆಗೆ ನಿರಂತರವಾಗಿ ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದರು.
ವೆಬ್ಸೈಟ್ ಮತ್ತು ಎಕ್ಸ್ ಖಾತೆ ಮುಖಾಂತರ ವಿಮಾನ ನಿಲ್ದಾಣ ಮತ್ತು ಇಂಡಿಗೋ ಏರ್ಲೈನ್ಸ್ ಸೇರಿದಂತೆ ಹಲವು ಏರ್ಲೈನ್ಸ್ಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದರು. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಇದನ್ನೂ ಓದಿ: ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ
ಬೆಂಗಳೂರು ಟು ಅಯೋಧ್ಯೆ ವಿಮಾನಕ್ಕೆ ಬಾಂಬ್ ಬೆದರಿಕೆ
2024ರ ಅಕ್ಟೋಬರ್ 27 ರಂದು ಬೆಂಗಳೂರಿನಿಂದ ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಬಾಂಬ್ ಬೆದರಿಕೆ ಸಂದೇಶ ಬರುತ್ತಿದ್ದಂತೆ ವಿಮಾನ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶವಾಗಿತ್ತು. ವಿಮಾನದಲ್ಲಿ ಪರಿಶೀಲನೆ ನಡೆಸಿದಾಗ ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಖಾತರಿಯಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:29 pm, Sun, 9 March 25