ಮೈಸೂರಿನಲ್ಲಿ ಮರ್ಯಾದಾ ಹತ್ಯೆ; ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಹೆತ್ತವರು

ಪ್ರೀತಿಸುತ್ತಿದ್ದ ಹುಡುಗನೊಂದಿಗೆ ಹೋಗುವುದಾಗಿ ಹಠ ಮಾಡಿ ಕುಳಿತಾಗ ಆಕೆಯ ತಂದೆ ಸುರೇಶ್‌ ಇದಕ್ಕೆ ಒಪ್ಪದೆ ತನ್ನ ಮಗಳ ಕತ್ತು ಹಿಸುಕಿ ಕೊಲೆ ಮಾಡಿ ತನ್ನ ಪತ್ನಿ ಬೇಬಿಯೊಂದಿಗೆ ಸೇರಿ ಆಕೆ ಪ್ರೀತಿಸುತ್ತಿದ್ದ ಹುಡುಗನ ಗ್ರಾಮದ ಜಮೀನೊಂದರ ಬಳಿ ಎಸೆದು ಹೋಗಿದ್ದಾರೆ.

ಮೈಸೂರಿನಲ್ಲಿ ಮರ್ಯಾದಾ ಹತ್ಯೆ; ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಹೆತ್ತವರು
ಮೈಸೂರಿನಲ್ಲಿ ಮರ್ಯಾದಾ ಹತ್ಯೆ
Updated By: ಆಯೇಷಾ ಬಾನು

Updated on: Jun 08, 2022 | 7:48 AM

ಮೈಸೂರು: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತವರೇ ಅಪ್ರಾಪ್ತ ಮಗಳ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಪೋಷಕರಿಂದಲೇ ಶಾಲಿನಿ(17) ಹತ್ಯೆ ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳು ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದುದ್ದಕ್ಕೆ ತಂದೆಯೆ ಮಗಳ ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿದ್ದಾರೆ. ತಂದೆ ಸುರೇಶ್ ಹಾಗೂ ತಾಯಿ ಬೇಬಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಕ್ಕದ ಗ್ರಾಮದ ಮೆಲ್ಲಹಳ್ಳಿ ಬೋರೆ ಗ್ರಾಮದ ಪರಿಶಿಷ್ಟಜಾತಿಗೆ ಸೇರಿದ ಮಂಜು ಎಂಬಾತನನ್ನು ಶಾಲಿನಿ ಪ್ರೀತಿಸುತ್ತಿದ್ದಳು. ಮಂಜು ಹಾಗೂ ಶಾಲಿನಿ ಪಟ್ಟಣದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು, ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇವರಿಬ್ಬರ ಪ್ರೀತಿಗೆ ಶಾಲಿನಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ವಿರೋಧದ ನಡುವೆಯೂ ಮದುವೆಯಾಗಲು ಪ್ರೇಮಿಗಳು ನಿರ್ಧರಿಸಿದ್ದರು. ಪ್ರಿಯಕರನಿಗಾಗಿ ಶಾಲಿನಿ ಮನೆ ಬಿಟ್ಟಿದ್ದಳು. ಇದೇ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಪೊಲೀಸರ ಮುಂದೆ ಶಾಲಿನಿ ಮನೆಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು. ಅಲ್ಲದೆ ಆಕೆಗೆ 18 ವರ್ಷ ತುಂಬಿರದ ಕಾರಣ ಪೊಲೀಸರು ಆಕೆಯನ್ನು ಮೈಸೂರಿನ ಬಾಲಮಂದಿರಕ್ಕೆ ಕಳುಹಿಸಿದ್ದರು. ಇದನ್ನೂ ಓದಿ: ಉಗ್ರ ತಾಲಿಬ್ ಹುಸೇನ್ ಬೆಂಗಳೂರಲ್ಲಿ ಇದ್ದುಕೊಂಡೆ ಕಾಶ್ಮೀರದಲ್ಲಿ ಟೆರರಿಸಮ್ ನಡೆಸಿದ್ದ; ಇಲ್ಲಿದೆ ಮೋಸ್ಟ್ ಡೇಂಜರ್ ಉಗ್ರನ ಭಯಾನಕ ಸತ್ಯ

ಕಳೆದ ಕೆಲವು ದಿನಗಳ ಹಿಂದೆ ಶಾಲಿನಿ ತನ್ನ ಪೋಷಕರಿಗೆ ಕರೆ ಮಾಡಿ ಇಲ್ಲಿಂದ ಕರೆದುಕೊಂಡು ಹೋಗುವಂತೆ ಹೇಳಿದಾಗ ಪೋಷಕರು ಒಪ್ಪಿಗೆ ಪತ್ರ ಬರೆದುಕೊಟ್ಟು ತಮ್ಮ ಮಗಳನ್ನು ಸ್ವಗ್ರಾಮಕ್ಕೆ ಕರೆತಂದಿದ್ದರು. ಸೋಮವಾರ ರಾತ್ರಿ ಶಾಲಿನಿ ಮತ್ತೆ ತನ್ನ ಪೋಷಕರೊಂದಿಗೆ ಪ್ರೀತಿಸುತ್ತಿದ್ದ ಹುಡುಗನೊಂದಿಗೆ ಹೋಗುವುದಾಗಿ ಹಠ ಮಾಡಿ ಕುಳಿತಾಗ ಆಕೆಯ ತಂದೆ ಸುರೇಶ್‌ ಇದಕ್ಕೆ ಒಪ್ಪದೆ ತನ್ನ ಮಗಳ ಕತ್ತು ಹಿಸುಕಿ ಕೊಲೆ ಮಾಡಿ ತನ್ನ ಪತ್ನಿ ಬೇಬಿಯೊಂದಿಗೆ ಸೇರಿ ಆಕೆ ಪ್ರೀತಿಸುತ್ತಿದ್ದ ಹುಡುಗನ ಗ್ರಾಮದ ಜಮೀನೊಂದರ ಬಳಿ ಎಸೆದು ಹೋಗಿದ್ದಾರೆ. ಮಂಗಳವಾರ ಬೆಳಗ್ಗೆ 6.30ರ ಸಮಯದಲ್ಲಿ ಸುರೇಶ್‌ ಪಿರಿಯಾಪಟ್ಟಣ ಪೊಲೀಸ್‌ ಠಾಣೆಗೆ ಬಂದು ಮಗಳನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾರೆ.

ಮೈಸೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ