Mysuru News: ಟಿ ನರಸೀಪುರ ಬಳಿ ಖಾಸಗಿ ಬಸ್, ಕಾರು ಡಿಕ್ಕಿ; ಕಾರಿನಲ್ಲಿದ್ದ 10 ಮಂದಿ ದುರ್ಮರಣ

ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ಹತ್ತು ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ.

Follow us
| Updated By: ರಶ್ಮಿ ಕಲ್ಲಕಟ್ಟ

Updated on:May 29, 2023 | 6:27 PM

ಮೈಸೂರು: ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ (Kollegal – T Narasipura Road) ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 10 ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರು ಪೈಕಿ ಕೆಲವರು ಬಳ್ಳಾರಿ ಸಂಗನಕಲ್ ನಿವಾಸಿಗಳಾಗಿದ್ದಾರೆ. ಇವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಮೃತರಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳಾಗಿದ್ದಾರೆ. 16 ಮಂದಿ ಗಾಯಾಳುಗಳಿಗೆ ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಮೃತಪಟ್ಟವರು ಯಾರೆಲ್ಲ?

ಬಿಳ್ಯಾಳ ಮಂಜುನಾಥ್ (35), ಇವರ ಪತ್ನಿ ಪೂರ್ಣಿಮಾ (30), ಮಗ ಪವನ (10), ಕಾರ್ತಿಕ (08), ಸಂದೀಪ (24), ತಾಯಿ ಸುಜಾತ ( 40), ತಂದೆ ಕೊಟ್ರೇಶ್ (45), ಪತ್ನಿ ಗಾಯತ್ರಿ (35), ಮಗಳು ಶ್ರಾವ್ಯ ( 03) ಹಾಗೂ ಇನೋವಾ ಚಾಲಕ ಮೈಸೂರಿನ ಆದಿತ್ಯ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರಗೆ ರವಾನಿಸಲು ಸಿದ್ಧತೆ ಮಾಡಲಾಗುತ್ತಿದೆ. ಸದ್ಯ ಚಾಮರಾಜನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವಾಸಕ್ಕೆ ಹೋಗಿದ್ದವರಿಗೆ ಹೊಂಚುಹಾಕಿದ್ದ ಜವರಾಯ

ಒಂದೇ ಕುಟಂಬದವರು ಎಲ್ಲರೂ ಇನೋವಾ ಕಾರಿನಲ್ಲಿ ಪ್ರವಾಸ ತೆರಳಿದ್ದರು. ಶನಿವಾರ ಮೈಸೂರಿಗೆ ಹೊರಟಿದ್ದರು. ಪ್ರವಾಸಕ್ಕೆ ಹೋಗಿದ್ದವರು ಮರಳಿ ಬರುವುದಿಲ್ಲ ಎಂದು ತಿಳಿದು ಸಂಗನಕಲ್​ನಲ್ಲಿ ಸ್ಮಶಾನ ಮೌನ ಆವರಿಸಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

ಡಿಕ್ಕಿಯ ರಭಸಕ್ಕೆ ಇನ್ನೋವಾ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಪ್ರಯಾಣಿಕರನ್ನು ಹೊರ ತೆಗೆಯಲು ಸ್ಥಳೀಯರು ಪರದಾಡುವಂತಾಯಿತು. ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಲೋಹದ ಕಟರ್ ಬಳಸಿ ಕಾರಿನಿಂದ ಶವಗಳನ್ನು ಹೊರತೆಗೆದರು.

ಇದನ್ನೂ ಓದಿ: Mysore News: ಸಾಲಭಾದೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ

ಇನೋವಾದಲ್ಲಿ 13 ಜನರು ಇದ್ದರು ಮತ್ತು ಆ ಪೈಕಿ 10 ಜನರು ಸಾವನ್ನಪ್ಪಿದ್ದಾರೆ ಎಂದು ಮೈಸೂರು ಎಸ್ಪಿ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

“ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಉಳಿದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 13 ಮಂದಿ ರಜೆಯಲ್ಲಿ ಬಂದಿದ್ದರು. ಚಾಮುಂಡಿ ಬೆಟ್ಟ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗ ಬೆಟ್ಟಗಳಿಗೆ ಭೇಟಿ ನೀಡಿ ಮೈಸೂರಿಗೆ ಹಿಂತಿರುಗುತ್ತಿದ್ದರು. ಇವರೆಲ್ಲರೂ ಬಳ್ಳಾರಿ ಸಮೀಪದ ಸಂಗನಕಲ್ ಗ್ರಾಮದಿಂದ ಬಂದಿದ್ದರು. ಸೋಮವಾರ ಸಂಜೆ 5 ಗಂಟೆಗೆ ರೈಲಿನಲ್ಲಿ ಬಳ್ಳಾರಿಗೆ ತೆರಳಬೇಕಿತ್ತು. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Mon, 29 May 23

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು