T Narasipura Accident: ಟಿ ನರಸೀಪುರ ಅಪಘಾತದ ಭೀಕರ ವಿಡಿಯೋ
ಮೈಸೂರು: ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದ ದೃಶ್ಯ ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ.
ಮೈಸೂರು: ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ (Kollegal – T Narasipura Road) ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದ ದೃಶ್ಯ ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಇದೀಗ ಅಪಘಾತದ ವಿಡಿಯೋ ಬಹಿರಂಗಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ಏಕಾಏಕಿ ಬಸ್ಗೆ ಡಿಕ್ಕಿಯಾಗಿ ಮುದ್ದೆಯಾದ ದೃಶ್ಯ ಮನಕಲಕುವಂತಿದೆ.
ಬಳ್ಳಾರಿ ಮೂಲದ ಒಂದೇ ಕುಟುಂಬದ ಸದಸ್ಯರು ಶನಿವಾರ ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಚಾಮುಂಡಿ ಬೆಟ್ಟ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗ ಬೆಟ್ಟಗಳಿಗೆ ಭೇಟಿ ನೀಡಿ ಮೈಸೂರಿಗೆ ಹಿಂತಿರುಗುತ್ತಿದ್ದರು. ಇದೇ ವೇಳೆ, ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್ಗೆ ಅಪ್ಪಳಿಸಿದೆ. ಈ ಮಧ್ಯೆ, ಮೃತಪಟ್ಟ 10 ಜನರ ಮನೆಯವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಟ್ವೀಟ್ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: Mysuru News: ಟಿ ನರಸೀಪುರ ಬಳಿ ಖಾಸಗಿ ಬಸ್, ಕಾರು ಡಿಕ್ಕಿ; ಕಾರಿನಲ್ಲಿದ್ದ 10 ಮಂದಿ ದುರ್ಮರಣ
ಈ ಮಧ್ಯೆ, ಘಟನಾ ಸ್ಥಳಕ್ಕೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪೋಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಮಹದೇವಪ್ಪ, ಈ ಘಟನೆ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇನೆ. ಸಿಎಂ ಸಹಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ನಾನು ಸಹ ಆಸ್ಪತ್ರೆಗೆ ಭೇಟಿ ನೀಡುತ್ತೇನೆ.ಈ ಸಂಬಂಧ ಅಧಿಕಾರಿಗಳ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ