ಮೈಸೂರಿನ ಹುಣಸೂರು‌ ಬಿಜೆಪಿ‌ ಅಭ್ಯರ್ಥಿಗೆ ಪಿತೃ ವಿಯೋಗ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ತಂದೆ ನಿಧನರಾಗಿದ್ದಾರೆ. ಇಂದು (ಏಪ್ರಿಲ್ 25) ಮಧ್ಯಾಹ್ನ 12 ಗಂಟೆಗೆ ದೇವಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮೈಸೂರಿನ ಹುಣಸೂರು‌ ಬಿಜೆಪಿ‌ ಅಭ್ಯರ್ಥಿಗೆ ಪಿತೃ ವಿಯೋಗ
ಅಣ್ಣೇಗೌಡ, ಸೋಮಶೇಖರ್ ಅವರ ತಂದೆ

Updated on: Apr 25, 2023 | 7:42 AM

ಮುಖ್ಯಾಂಶಗಳು

  • ಹುಣಸೂರು‌ ಬಿಜೆಪಿ‌ ಅಭ್ಯರ್ಥಿಗೆ ಪಿತೃ ವಿಯೋಗ
  • ಹುಣಸೂರು‌ ಬಿಜೆಪಿ‌ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್ ತಂದೆ ವಿಧಿವಶ
  • ವಯೋ ಸಹಜ‌ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಣ್ಣೇಗೌಡ

ಮೈಸೂರು: ಜಿಲ್ಲೆಯ ಹುಣಸೂರು ವಿಧಾನಸಭಾ ಕ್ಷೇತ್ರದ‌ ಬಿಜೆಪಿ‌ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್ ತಂದೆ ವಿಧಿವಶರಾಗಿದ್ದಾರೆ. ವಯೋ ಸಹಜ‌ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಣ್ಣೇಗೌಡ (70) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು (ಏಪ್ರಿಲ್ 25) ಮಧ್ಯಾಹ್ನ 12 ಗಂಟೆಗೆ ದೇವಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ದೇವರಹಳ್ಳಿ ಸೋಮಶೇಖರ್, ಈ ಬಾರಿ ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರ ಮಧ್ಯ ತಂದೆ ನಿಧನ ಅವರಿಗೆ ಆಘಾತವಾಗಿದೆ.

 

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us