ಗರ್ಭಿಣಿ ಪತ್ನಿಯನ್ನು ಕಪಿಲಾ ನದಿಯಲ್ಲಿ ಮುಳುಗಿಸಿ ಹತ್ಯೆ; ಆರೋಪಿ ಪತಿ ಬಂಧನ

ಆರೋಪಿ ರಾಜೇಶ್‌, 5 ತಿಂಗಳ ಗರ್ಭಿಣಿಯಾಗಿದ್ದ ದೇವಿಯನ್ನು ನಂಜನಗೂಡಿನ ಕಪಿಲಾ ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಹಾಗೂ ತನ್ನ ಮತ್ತೊಂದು ಮಗುವನ್ನೂ ಕೊಲೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ.

ಗರ್ಭಿಣಿ ಪತ್ನಿಯನ್ನು ಕಪಿಲಾ ನದಿಯಲ್ಲಿ ಮುಳುಗಿಸಿ ಹತ್ಯೆ; ಆರೋಪಿ ಪತಿ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 15, 2021 | 12:00 PM

ಮೈಸೂರು: ಗರ್ಭಿಣಿ ಪತ್ನಿಯನ್ನು ಕಪಿಲಾ ನದಿಯಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. ದೇವಿ(28) ಕೊಲೆಯಾದ ಗರ್ಭಿಣಿ. ರಾಜೇಶ್‌ ಕೊಲೆ ಮಾಡಿದ ಆರೋಪಿ. ಮುದ್ದಳ್ಳಿಯ ರಾಜೇಶ್‌ ತನ್ನ ಗರ್ಭಿಣಿ ಪತ್ನಿ ದೇವಿ(28) ಕೊಲೆ ಮಾಡಿದ್ದಾನೆ.

ಆರೋಪಿ ರಾಜೇಶ್‌, 5 ತಿಂಗಳ ಗರ್ಭಿಣಿಯಾಗಿದ್ದ ದೇವಿಯನ್ನು ನಂಜನಗೂಡಿನ ಕಪಿಲಾ ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಹಾಗೂ ತನ್ನ ಮತ್ತೊಂದು ಮಗುವನ್ನೂ ಕೊಲೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಸ್ಥಳೀಯರು ಮಗುವನ್ನು ರಕ್ಷಿಸಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂಜನಗೂಡು ಪೊಲೀಸರು ಆರೋಪಿ ರಾಜೇಶ್ನನ್ನು ಅರೆಸ್ಟ್ ಮಾಡಿದ್ದಾರೆ.

ರಸ್ತೆಯಲ್ಲಿ ಓಡಾಡುವ ವಿಚಾರಕ್ಕೆ ಕ್ಯಾತೆ ತೆಗೆದು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಹೊಸಳ್ಳಿಯಲ್ಲಿ ರಸ್ತೆಯಲ್ಲಿ ಓಡಾಡುವ ವಿಚಾರಕ್ಕೆ ಕ್ಯಾತೆ ತೆಗೆದು ಯೋಗೇಶ್ ಎಂಬುವವರ ಮೇಲೆ ಒಂದು ಗುಂಪು ಹಲ್ಲೆ ಮಾಡಿದೆ.

ಗ್ರಾಮದಲ್ಲಿ 2 ಸಮುದಾಯಗಳ ಮಧ್ಯೆ ಅಸಮಾಧಾನ ಭುಗಿಲೆದ್ದಿದೆ. ಘಟನೆಯಲ್ಲಿ ಗ್ರಾಮದ ಯೋಗೇಶ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸೈಕಲ್ ಚೈನ್‌ನಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ. ಗ್ರಾಮಕ್ಕೆ ಮೈಸೂರು ಎಸ್‌ಪಿ ಆರ್.ಚೇತನ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ಪ್ರಕರಣ ಸಂಬಂಧ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕೈಗಾರಿಕಾ ಪ್ರದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಆತಂಕ; ರಾಬರಿ ಗ್ಯಾಂಗ್​ಗೆ ಭಯಭೀತರಾದ ಕಾರ್ಮಿಕರು

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ