Pratap Simha: ಚರ್ಚೆಗೆ ಯಾರೇ ಬರಲಿ ಅವರನ್ನು ಸೋಲಿಸುವುದು ನಾನೇ: ಸಂಸದ ಪ್ರತಾಪ್ ಸಿಂಹ
ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಮಾಡುವ ವೇದಿಕೆ ರಾಜಕೀಯ ವೇದಿಕೆಯಲ್ಲಾ. ಅವರ ಜೊತೆ ನನ್ನನ್ನು ಸೇರಿದಂತೆ ಸ್ಥಳೀಯ ಯಾವ ಶಾಸಕರಿಗೂ ಅವರ ವೇದಿಕೆಯಲ್ಲಿ ಸ್ಥಾನ ಇರುವುದಿಲ್ಲ.
ಮೈಸೂರು: ಮೈಸೂರು ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ (Discussion) ಕಾಂಗ್ರೆಸ್ ಆಹ್ವಾನ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ (Pratap Simha) ಪ್ರತಿಕ್ರಿಯಿಸಿದ್ದು, ಒಂದು ಮಾತು ಸತ್ಯ, ಯಾರೇ ಚರ್ಚೆಗೆ ಬರಲಿ ಅವರನ್ನು ಸೋಲಿಸುವುದು ಈ ಪ್ರತಾಪ್ ಸಿಂಹ ಮಾತ್ರ. ಯಾರು ಚರ್ಚೆಗೆ ಬರಬೇಕು, ಏನು ಚರ್ಚೆಯಾಗಬೇಕು ಎಂಬುದನ್ನ ನಾಳೆ ಮಾಧ್ಯಮಗಳ ಮುಂದೆ ಹೇಳುತ್ತೇನೆ. ಇದರ ಬಗ್ಗೆ ನಾಳೆ ಸವಿಸ್ತಾರವಾಗಿ ಮಾಧ್ಯಮಗಳ ಜೊತೆ ಮಾತನಾಡುತ್ತೇನೆ. ಇಂದು ಚುನಾವಣೆ ನಡೆಯುತ್ತಿದೆ. ಹೀಗಾಗಿ ಈ ವಿಚಾರದಲ್ಲಿ ಮಾತನಾಡುವುದಿಲ್ಲ ಎಂದು ಹೇಳಿದರು.
ಯಾವ ಶಾಸಕರಿಗೂ ವೇದಿಕೆ ಮೇಲೆ ಅವಕಾಶವಿಲ್ಲ
ಪ್ರಧಾನಿ ನರೇಂದ್ರ ಮೋದಿ ಅವರು ಯೋಗ (Yoga) ಮಾಡುವ ವೇದಿಕೆ ರಾಜಕೀಯ ವೇದಿಕೆಯಲ್ಲ. ಸಭಾ ಕಾರ್ಯಕ್ರಮದಲ್ಲಿ ನನಗೂ ಅವಕಾಶವಿಲ್ಲ. ಯಾವುದೇ ಸ್ಥಳೀಯ ಶಾಸಕರಿಗೂ ಅವರ ವೇದಿಕೆಯಲ್ಲಿ ಸ್ಥಾನ ಇರುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೋದಿ ಅವರ ಜೊತೆ ಮುಖ್ಯಮಂತ್ರಿ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಅವಕಾಶವಿದೆ. ನಾವೆಲ್ಲರೂ ವೇದಿಕೆಯ ಕೆಳಭಾಗದ ಒಂದು ಬದಿಯಲ್ಲಿರುತ್ತೇವೆ. ಇದರಲ್ಲಿ ಯಾವ ಬದಲಾವಣೆಗಳು ಇಲ್ಲ ಎಂದು ಹೇಳಿದರು. ನನ್ನ ಮತ್ತು ರಾಮದಾಸ್ ನಡುವೆ ಈ ವಿಚಾರದಲ್ಲಿ ಕ್ರೆಡಿಟ್ ವಾರ್ ನಡೆಯುತ್ತಿಲ್ಲ. ಮೋದಿ ಅವರ ವೇದಿಕೆ ಮುಂಭಾಗ 7 ಸಾವಿರ ಜನಕ್ಕೆ ಅವಕಾಶ ಇರುತ್ತದೆ. ಒಟ್ಟಾರೆ ಅರಮನೆಯ ಎಲ್ಲಾ ಭಾಗವೂ ಸೇರಿ 15 ಸಾವಿರ ಜನಕ್ಕೆ ಅವಕಾಶವಾಗಬಹುದು. ಆದರೆ ಎಲ್ಲರಿಗೂ ಮೋದಿ ಅವರು ಕಾಣುವುದಿಲ್ಲ.
ಇದನ್ನೂ ಓದಿ: Viral: ಸಾರ್ವಜನಿಕವಾಗಿ ಕಾಣಿಸಿಕೊಂಡ ಅಪರೂಪದ ಅಲ್ಬಿನೋ ಗ್ಯಾಲಪಗೋಸ್ ದೈತ್ಯ ಆಮೆ
ಫ್ಲೆಕ್ಸ್ ಹಾಕಿ ನಗರದ ಸೌಂದರ್ಯ ಹಾಳುಮಾಡಬೇಡಿ
ಯೋಗ ದಿನದಲ್ಲಿ ಪಾಲ್ಗೊಳ್ಳಲು ಈಗಾಗಲೇ ನೊಂದಣಿ ಆರಂಭವಾಗಿದೆ. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯೋಗ ಮಾಡಲು ಅವಕಾಶ ನೀಡಲಾಗುತ್ತದೆ. ಮೋದಿ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್ಗಳನ್ನ ಯಾರು ಹಾಕಬೇಡಿ. ಸರ್ಕಾರವೇ ಮೋದಿ ಅವರ ಸ್ವಾಗತದ ಬ್ಯಾನರ್ಗಳನ್ನು ಹಾಕುತ್ತದೆ. ನಮ್ಮ ಪಕ್ಷದವರೇ ಇರಲಿ ಅಥವಾ ಇತರ ಯಾವುದೇ ಸಂಘ ಸಂಸ್ಥೆಗಳೇ ಇರಲಿ, ಯಾವುದೇ ಫ್ಲೆಕ್ಸ್ಗಳನ್ನ ಹಾಕಿ ನಗರದ ಸೌಂದರ್ಯ ಹಾಳುಮಾಡಬೇಡಿ ಎಂದು ಕಿವಿಮಾತು ಹೇಳಿದರು.
ಮೋದಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ
ಜೂನ್ 21ರಂದು ಮೈಸೂರಿನಲ್ಲಿವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿರುವ ಹಿನ್ನಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ಮೋದಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜೂ 21 ರಂದು ಮೈಸೂರಿಗೆ ಮೋದಿ ಆಗಮಿಸುತ್ತಿದ್ದು, ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಅರಮನೆ ಆವರಣದಲ್ಲಿ ಯೋಗ ಫೆಡರೇಶನ್‌ನಿಂದ ತಾಲೀಮು ನಡೆಯುತ್ತಿದ್ದು, ಸಂಸದ ಪ್ರತಾಪಸಿಂಹ, ಶಾಸಕ ಎಸ್.ಎ ರಾಮದಾಸ್ ಸೇರಿ ಹಲವರು ಭಾಗಿಯಾಗಲಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.