ಗುಪ್ತಚರ ದಳದ ನಿವೃತ್ತ ಅಧಿಕಾರಿ ಕೊಲೆ ಪ್ರಕರಣದ ತನಿಖೆ ಚುರುಕು, ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ವಾಯುವಿಹಾರಕ್ಕೆ ನಿಷೇಧ
ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಕೊಲೆ ಬಗ್ಗೆ ವಿಶೇಷ ತಂಡದಿಂದ ತನಿಖೆ ನಡೆಯುತ್ತಿದೆ. ಪೊಲೀಸರು ಈ ಪ್ರಕರಣವನ್ನು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಮೈಸೂರು: ನವೆಂಬರ್ 4ರಂದು ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ(Manasa Gangothri) ಆವರಣದಲ್ಲಿ ಶುಕ್ರವಾರ ಸಂಜೆ ಅಪರಿಚಿತ ವಾಹನ ಡಿಕ್ಕಿಯಾಗಿ ಕೇಂದ್ರ ಗುಪ್ತಚರ ದಳದ(Intelligence Bureau-IB) ನಿವೃತ್ತ ಅಧಿಕಾರಿ ಮೃತಪಟ್ಟಿದ್ದರು. ಈ ಕೇಸ್ ಸಂಬಂಧ ಘಟನಾ ಸ್ಥಳದಲ್ಲಿ ಸಿಕ್ಕ ಮಾಹಿತಿ ಆಧರಿಸಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಆದ್ರೆ ಇನ್ನೂ ಕೂಡ ಆರೋಪಿಗಳ ಸುಳಿವು ಪತ್ತೆಯಾಗಿಲ್ಲ.
ಪೊಲೀಸರು ಈ ಪ್ರಕರಣವನ್ನು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಕೊಲೆ ಬಗ್ಗೆ ವಿಶೇಷ ತಂಡದಿಂದ ತನಿಖೆ ನಡೆಯುತ್ತಿದೆ. ತನಿಖೆ ವೇಳೆ ಪಕ್ಕದ ಮನೆಯ ಮಾದಪ್ಪ ಮತ್ತು R.N.ಕುಲಕರ್ಣಿ ನಡುವೆ ಮನೆ ಕಟ್ಟುವ ವಿಚಾರವಾಗಿ ಗಲಾಟೆ ನಡೆದಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದ್ದು ಈ ಸಂಬಂಧ ವಿಶೇಷ ತಂಡ ತನಿಖೆ ಮುಂದುವರಿಸಿದೆ. ಇನ್ನು ನಿವೃತ್ತರಾದ ನಂತರ ಕುಲಕರ್ಣಿ ಅವರು ಕೆಲ ಪುಸ್ತಕಗಳನ್ನು ಬರೆದಿದ್ದರು. Sim of Nation conscience ಮತ್ತು Facets Of Terrorism. ಹೀಗಾಗಿ ಈ ಆಯಾಮದಲ್ಲೂ ತನಿಖೆ ಮುಂದುವರೆದಿದೆ.
ಇನ್ನು ಮತ್ತೊಂದೆಡೆ ಮಾನಸ ಗಂಗೋತ್ರಿಯಲ್ಲಿ ವಾಯುವಿಹಾರಕ್ಕೆ ನಿಷೇಧ ಹೇರಿ ಮೈಸೂರು ವಿವಿ ಕುಲ ಸಚಿವ ಪ್ರೊ ಆರ್ ಶಿವಪ್ಪ ಆದೇಶ ಹೊರಡಿಸಿದ್ದಾರೆ. ಮಾನಸ ಗಂಗೋತ್ರಿಯಲ್ಲಿ ಬೆಳಗ್ಗೆ ಮತ್ತು ಸಂಜೆ ವಾಯುವಿಹಾರಕ್ಕೆ ಬ್ರೇಕ್ ಹಾಕಲಾಗಿದೆ.
ಇದನ್ನೂ ಓದಿ: ಜಗತ್ತಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ವಿಜ್ಞಾನಿ
ಘಟನೆ ಹಿನ್ನೆಲೆ
ಮೈಸೂರು: ಕೇಂದ್ರ ಗುಪ್ತಚರ ಇಲಾಖೆ (Intelligence Bureau-IB) ನಿವೃತ್ತ ಅಧಿಕಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ (Manasagangotri university)ಕ್ಯಾಂಪಸ್‌ನಲ್ಲಿ ನಡೆದಿದೆ. ಆರ್.ಎಸ್.ಕುಲಕರ್ಣಿ (83) ಮೃತ ನಿವೃತ್ತ ಅಧಿಕಾರಿ. ನ. 4 ರ ಸಂಜೆ ಆರ್.ಎಸ್.ಕುಲಕರ್ಣಿ ಅವರು ಕ್ಯಾಂಪಸ್ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ವಾಕ್ ಮಾಡುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿದೆ. ಇದರಿಂದ ಗಾಯಗೊಂಡಿದ್ದ ಆರ್.ಎಸ್.ಕುಲಕರ್ಣಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಲಕರ್ಣಿ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡಿದ್ದರು. ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ಅಪಘಾತ ಮಾಡಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿವೃತ್ತ ಅಧಿಕಾರಿ ಪಕ್ಕಕ್ಕೆ ಹೋದರು, ಡಿಕ್ಕಿ ಹೊಡೆದಿದ್ದಾರೆ. ಅಪಘಾತಕ್ಕೆ ನಂಬರ್ ಪ್ಲೇಟ್ ಇಲ್ಲದ ಕಾರು ಬಳಸಿದ್ದು, ಯೋಜಿತ ಕೊಲೆ ಎಂದು ಶಂಕೆ ವ್ಯಕ್ತವಾಗಿತ್ತು. ಸದ್ಯ ಈಗ ಪೊಲೀಸರು ಇದನ್ನು ಕೊಲೆ ಪ್ರಕರಣ ಎಂದು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Published On - 9:07 am, Mon, 7 November 22