ಮೈಸೂರು ಕೊಡಗು ಕ್ಷೇತ್ರದಲ್ಲಿ ನಾನು ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತದೆ: ಪ್ರತಾಪ್ ಸಿಂಹ

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರವಾದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಯೇ ಕಾಂಗ್ರೆಸ್​​ಗೆ ದೊಡ್ಡ ಸವಾಲಾಗಿ ಪರಿಣಮಿಸಿರುವಾಗ ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈ ತಪ್ಪಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ಚಾಮುಂಡಿ ನನ್ನ ಕೈ ಬಿಡಲ್ಲ ಎಂದರು.

ಮೈಸೂರು ಕೊಡಗು ಕ್ಷೇತ್ರದಲ್ಲಿ ನಾನು ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತದೆ: ಪ್ರತಾಪ್ ಸಿಂಹ
ಮೈಸೂರು ಕೊಡಗು ಕ್ಷೇತ್ರದಲ್ಲಿ ನಾನು ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತದೆ ಎಂದ ಪ್ರತಾಪ್ ಸಿಂಹ
Follow us
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi

Updated on:Mar 09, 2024 | 7:53 PM

ಮೈಸೂರು, ಮಾ.9: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಗೊಂದಲದ ಗೂಡಾಗಿದೆ. ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈ ತಪ್ಪಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ಕಾಯಲು ಬೆಟ್ಟದ ಮೇಲೆ ತಾಯಿ ಇದ್ದಾಳೆ. ಚಾಮುಂಡಿ ನನ್ನ ಕೈ ಬಿಡಲ್ಲ ಎಂದರು. ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್​ಗೆ ಬೆಂಬಲಿಸುವ ವಿಚಾರವಾಗಿ ಮಾತನಾಡಿದ ಅವರು, ನಾನು ಗೆದ್ದರೆ ಸಿದ್ದರಾಮಯ್ಯ (Siddaramaiah) ಅವರು ಸೀಟು ಅಲುಗಾಡುತ್ತದೆ. ಪ್ರತಾಪ್ ಸಿಂಹ ಸೋಲಿಸಲು ಆಗಲ್ಲ ಎಂದು ಕಾಂಗ್ರೆಸ್‌ಗೆ ಗೊತ್ತಿದೆ. ಹೀಗಿರುವಾಗ ಕಾಂಗ್ರೆಸ್‌ಗೆ ನಮ್ಮ ಪಕ್ಷದವರು ಹೇಗೆ ಸಪೋರ್ಟ್ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಸಂಸದರ ಟಿಕೆಟ್ ನಿರ್ಧಾರ ಮಾಡುವುದು ಜನರು. ರಾಜ್ಯದಲ್ಲಿ 28 ಮಂದಿ ಸಂಸದರು ಇದ್ದಾರೆ. ಅವರ ಕೆಲಸಗಳನ್ನು ನೋಡಿ ಟಿಕೆಟ್ ನೀಡುತ್ತಾರೆ. ಜನ ಖುಷಿಯಾಗಿದ್ದಾರೆ ಅಂದರೆ ಮೇಲಿನವರು ಅದೇ ನಿರ್ಧಾರ ಮಾಡುತ್ತಾರೆ. ಮೈಸೂರಿನಲ್ಲಿ ನಾನು ಇಂತಾ ಕೆಲಸ ಮಾಡಿಲ್ಲ ಎಂದು ಹೇಳಲಿ. ಯಾರೋ ಒಂದಷ್ಟು ಜನ ಅಸೂಯೆಗೆ ಮಾತನಾಡುತ್ತಾರೆ. ಆದರೆ, ಕಾಯಲು ಬೆಟ್ಟದ ಮೇಲೆ ಒಬ್ಬಳು ತಾಯಿ ಇದ್ದಾಳೆ ಎಂದರು.

ಮೈಸೂರಿನಲ್ಲಿ ಯಾರೂ ಮಾಡಿರದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಗ್ರೇಟರ್ ಮೈಸೂರು ಮಾಡಲು ನಾನು ಹೊರಟಿದ್ದೇನೆ. ಹಲವು ಅಭಿವೃದ್ಧಿ ಯೋಜನೆಗಳನ್ನು ನಾನು ಮಾಡಿದ್ದೇನೆ. ಹಿಂದುತ್ವದ ಪರ ನಾನು ಕೆಲಸ ಮಾಡಿದ್ದೇನೆ. ಕರ್ನಾಟಕ ಆಳಿದವರಿಂದಲೂ ಔಟರ್ ರಿಂಗ್‌ರೋಡ್ ತರಲು ಆಗಿಲ್ಲ. ನಾನು ರಾಜ್ಯದಲ್ಲಿ ಮೊದಲಾಗಿ ಮೈಸೂರಿಗೆ ಮೊದಲ ಪೆರಿಪೆರಲ್ ರಿಂಗ್ ರೋಡ್ ತರಲು ಹೊರಟಿದ್ದೇನೆ ಎಂದರು.

ಇದನ್ನೂ ಓದಿ: ಕೊಡಗು-ಮೈಸೂರು ಕ್ಷೇತ್ರದಿಂದ ಯದುವೀರ್ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆಯೇ? ಪ್ರತಾಪ್ ಸಿಂಹ ರನೌಟ್?

ಕೆಲಸವೇ ನನಗೆ ಶ್ರೀರಕ್ಷೆ. ಮೈಸೂರು ಕೊಡಗು ಜನರು ನನ್ನ ಕೈ ಹಿಡಿಯುತ್ತಾರೆ. ತಾಯಿ ಚಾಮುಂಡಿ ನನ್ನ ಕೈ ಬಿಡಲ್ಲ. ಈ ಬಾರಿಯೂ ನಾನು 2 ರಿಂದ 3 ಲಕ್ಷ ಮತಗಳಿಂದ ಗೆಲ್ಲುತ್ತೇನೆ. ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ. 10 ವರ್ಷ ನಿಯತ್ತಾಗಿ ಕೆಲಸ ಮಾಡಿದ್ದೇನೆ. ಪ್ರೀತಿಸುವವರು ಅಷ್ಟೇ ಪ್ರಮಾಣದಲ್ಲಿ ಇದೆ. ರಾಜಕೀಯದಲ್ಲಿ ದ್ವೇಷ ಅಸೂಯೆ ಇದ್ದೆ ಇರುತ್ತದೆ. ಆದರೆ, ಮೈಸೂರು ಕೊಡಗು ಜನರ ಪ್ರೀತಿಯ ನಡುವೆ ಅಸೂಯೆ ಯಾವುದು ನಿಲ್ಲಲ್ಲ ಎಂದರು.

ಕಾರ್ಯಕರ್ತರು ಯಾರು ಅಭ್ಯರ್ಥಿ ಆಗಬೇಕೆಂದು ಹೇಳಿದ್ದಾರೆ. ಅದರ ಶೀಟ್ ನೋಡಿದರೆ ಗೊತ್ತಾಗುತ್ತದೆ. ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾದಗ ನಿಂತಿದ್ದು ನಾನು. ಬಿಜೆಪಿ ಕಾರ್ಯಕರ್ತರು ಖುಷಿ ಪಡುವ ಸಂಸದ ಇದ್ದರೆ ಅದು ನಾನೇ. ಈ ವಿಚಾರವಾಗಿ ಪ್ರತಾಪ್ ಸಿಂಹ ಎರಡು ಕೇಸ್ ಹಾಕಿಸಿಕೊಂಡಿದ್ದಾನೆ. ಪ್ರತಾಪ್ ಸಿಂಹ ರೂಲರ್ ಅಲ್ಲ, ಕೆಲಸಗಾರ. ಈ ಭಾಗದಲ್ಲಿ ಹನುಮ ಜಯಂತಿ ಆಗುತ್ತಿದ್ದರೆ ಅದಕ್ಕೆ ಪ್ರತಾಪ್ ಸಿಂಹ ಕಾರಣ ಎಂದರು.

ಜನರು ನನ್ನ ಕೈ ಹಿಡಿಯಲು ರೆಡಿ ಇದ್ದಾರೆ. ಪಕ್ಷ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ. ಜನರಿಗೆ ರೂಲರ್ ಬೇಡಾ, ಬೇಕಿರೋದು ಕೆಲಸಗಾರ. ಪತ್ರಕರ್ತನಾಗಿದ್ದವನನ್ನು ಎರಡು ಬಾರಿ ಎಂಪಿ ಮಾಡಿದ್ದು ಬಿಜೆಪಿ. ಕಾಂಗ್ರೆಸ್ ಅವರಿಗೆ ಅಭ್ಯರ್ಥಿ ಹುಡುಕಲು ಆಗುತ್ತಿಲ್ಲ. ಇದರಿಂದ ಪ್ರತಾಪ್ ಸಿಂಹ ಶಕ್ತಿ ಏನು ಅಂತಾ ಕಾಂಗ್ರೆಸ್ ಅವರಿಗೆ ಗೊತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 pm, Sat, 9 March 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್