ಸರ್ಕಾರಿ ದಾಖಲೆಗಳನ್ನು ತಿದ್ದಿ ಅಕ್ರಮ: ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ ಎಫ್​ಐಆರ್

ಸರ್ಕಾರಿ ದಾಖಲೆಗಳನ್ನು ತಿದ್ದಿ ಅಕ್ರಮ ಎಸಗಿರುವ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶದಂತೆ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರಸಭೆ ಹಿಂದಿನ ಪೌರಾಯುಕ್ತ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸರ್ಕಾರಿ ದಾಖಲೆಗಳನ್ನು ತಿದ್ದಿ ಅಕ್ರಮ: ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ ಎಫ್​ಐಆರ್
ನಂಜನಗೂಡು ನಗರಸಭಾ ಕಾರ್ಯಾಲಯ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Feb 19, 2024 | 8:06 AM

ಮೈಸೂರು, ಫೆ.19: ಸರ್ಕಾರಿ ದಾಖಲೆಗಳನ್ನು ತಿದ್ದಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಹಿನ್ನೆಲೆ ಪೌರಾಯುಕ್ತ, ಕಂದಾಯ ಸಿಬ್ಬಂದಿಯ ವಿರುದ್ಧ ಸೆಕ್ಷನ್ 420 ಅಡಿ ಪ್ರಕರಣ ದಾಖಲಾಗಿದೆ. ಸರ್ಕಾರಿ ದಾಖಲೆಗಳನ್ನು (Government Documents) ತಿದ್ದಿ ಕೆಲವು ಕಡತಗಳನ್ನು ನಾಪತ್ತೆ ಮಾಡಲಾಗಿದೆ. ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನು ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಲಾಗಿದೆ. ಈ ಹಿನ್ನೆಲೆ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ (Nanjangud Town Police Station) ಎಫ್​ಐಆರ್ ದಾಖಲಾಗಿದೆ.

ಹಾಲಿ ಪೌರಾಯುಕ್ತ ನಂಜುಂಡಸ್ವಾಮಿ ದೂರು ಹಿನ್ನೆಲೆ ನಗರಸಭೆ ಹಿಂದಿನ ಪೌರಾಯುಕ್ತ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಂಜನಗೂಡು ತಾಲೂಕು ದೇಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಭಾರೀ ಅಕ್ರಮ ನಡೆದಿದೆ. ದೇವೀರಮ್ಮನಹಳ್ಳಿ ಸರ್ವೆ ನಂ 58,59 ರ ವಿಸ್ತೀರ್ಣ 3.16 ಬಿ.ಬಸಪ್ಪ ಎಂಬುವರಿಗೆ ಸೇರಿದೆ. ಕೈಗಾರಿಕಾ ಉದ್ದೇಶಕ್ಕಾಗಿ ಉಪವಿಭಾಗಾಧಿಕಾರಿಗಳು ಅನ್ಯಕ್ರಾಂತ ಮಂಜೂರು ಮಾಡಿದ್ದಾರೆ. ನಂತರ ವಸತಿ ಬಡಾವಣೆ ನಿರ್ಮಿಸಲು ಬದಲಾವಣೆ ಸಹ ಆದೇಶ ಮಾಡಿದ್ದಾರೆ. ವಸತಿ ಮನೆ ನಿರ್ಮಿಸಬೇಕಿದ್ದಲ್ಲಿ ಮೈಸೂರು-ನಂಜನಗೂಡು ಯೋಜನಾ ಪ್ರಾಧಿಕಾರದಿಂದ ಅಧಿಕೃತ ಬಡಾವಣೆ ನಕ್ಷೆ ಅನುಮೋದನೆ ಪಡೆಯಬೇಕಿತ್ತು. ಸಕ್ಷಮ ಪ್ರಾಧಿಕಾರದಿಂದ ನಕ್ಷೆ ಅನುಮೋದನೆ ಆಗಿಲ್ಲ. ಹಿಂದಿನ ಪೌರಾಯುಕ್ತ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕರಾದ ಡಿ.ಎನ್.ನರಸಿಂಹಮೂರ್ತಿ ಸಂಖ್ಯೆ 106 ರ ಆಸ್ತಿ ವಹಿಯಲ್ಲಿ ನಿವೇಶನ ಸಂಖ್ಯೆ 1 ರಿಂದ 48 ರವರೆಗೆ ವಿವಿಧ ಅಸೆಸ್ ಮೆಂಟ್​ಗಳಲ್ಲಿ ವಿವಿಧ ಅಳತೆಗಳನ್ನು ನಮೂದಿಸಿ ಗಂಗಮ್ಮ ಎಂಬುವರ ಹೆಸರಿಗೆ ಖಾತೆ ದಾಖಲಿಸಿದ್ದಾರೆ.

ಇದನ್ನೂ ಓದಿ: Dharmasthala: ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳ್ಳರ ಕೈಚಳಕ, ಒಂದೇ ದಿನ 3 ಬೈಕ್ ಕಳವು

ಇವೆಲ್ಲಾ ಪ್ರಕ್ರಿಯೆಗಳನ್ನು ನಡೆಸುವಾಗ ಭಾರಿ ಅಕ್ರಮ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವ ವೇಳೆ ಕೆಲವೆಡೆ ಹೆಸರುಗಳನ್ನು ಖಾಲಿ ಬಿಡಲಾಗಿದೆ. ಕೆಲವೆಡೆ ತಿದ್ದಿ ಬರೆದಿದ್ದಾರೆ. ಮತ್ತೆ ಕೆಲವು ಕಡತಗಳೇ ನಾಪತ್ತೆಯಾಗಿವೆ. ಈ ಹಿನ್ನಲೆ ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶದಂತೆ ದೂರು ನೀಡಲಾಗಿದ್ದು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು