ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅನ್ನಭಾಗ್ಯ ನಂತರ ಕ್ಷೀರಭಾಗ್ಯಕ್ಕೆ ಕುತ್ತು: ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲು ಯತ್ನ

ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲೇ ಕ್ಷೀರಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಹೌದು ಹುಣಸೂರು ತಾಲೂಕಿನ ಮಾದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಿಸುತ್ತಿದ್ದನ್ನು ಗ್ರಾಮಸ್ಥರು ಪತ್ತೆ ಹಚ್ಚಿದ್ದಾರೆ.

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅನ್ನಭಾಗ್ಯ ನಂತರ ಕ್ಷೀರಭಾಗ್ಯಕ್ಕೆ ಕುತ್ತು: ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲು ಯತ್ನ
ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲು ಯತ್ನ
Follow us
| Updated By: ವಿವೇಕ ಬಿರಾದಾರ

Updated on: Jan 19, 2024 | 2:49 PM

ಮೈಸೂರು, ಜನವರಿ 19: ಸಿದ್ದರಾಮಯ್ಯ (Siddaramaiah) ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, 2013ರಲ್ಲಿ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದರು. ಇದೀಗ ಅವರ ತವರು ಜಿಲ್ಲೆ ಮೈಸೂರಿನಲ್ಲೇ ಕ್ಷೀರಭಾಗ್ಯದ (Kshirabhagya) ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಹೌದು ಹುಣಸೂರು (Hunasur) ತಾಲೂಕಿನ ಮಾದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಿಸುತ್ತಿದ್ದನ್ನು ಗ್ರಾಮಸ್ಥರು ಪತ್ತೆ ಹಚ್ಚಿದ್ದಾರೆ. ಸರ್ಕಾರ ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳು ಹಾಗೂ ಗರ್ಭಿಣಿಯರಿಗೆ ಹಾಲಿನ ಪುಡಿ ನೀಡುತ್ತದೆ.

ಆದರೆ ದುರುಳರು ಈ ಹಾಲಿನ ಪುಡಿಯನ್ನು ಅಕ್ರವಾಗಿ ಬೇರೆಡೆ ಸಾಗಿಸಲು ಯತ್ನಿಸಿದ್ದರು. ಇದನ್ನು ತಿಳಿದ ಗ್ರಮಾಸ್ಥರು ಅಕ್ರವಾಗಿ ಸಾಗಿಸುತ್ತಿದ್ದ ಹುಣಸೂರಿನ ಶಬ್ಬೀರ್‌ ನಗರದ ಅಪ್ಸರ್ ಪಾಷಾನನ್ನು ರೆಡ್​​ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಅರ್ಧ ಕೆ.ಜಿಯ 40 ಪ್ಯಾಕೆಟ್ ಹಾಲಿನ ಪುಡಿ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕ್ಷೀರಭಾಗ್ಯ: ಹಾಲಿನಿಂದ ವಂಚಿತರಾದ ಅಂಗನವಾಡಿ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರು, ಕಾರಣವೇನು? ಇಲ್ಲಿದೆ ಓದಿ

ಅನ್ನಭಾಗ್ಯ ಅಕ್ಕಿ ದುರುಪಯೋಗ

ಕಳೆದ ವರ್ಷ ನವೆಂಬರ್​ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಯರಗನಹಳ್ಳಿ ಸೇರಿದಂತೆ ಮೈಸೂರಿನ ಹಲವು ಕಡೆ ಖರೀದಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡುವ ಜಾಲ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಅಪ್ರಾಪ್ತರನ್ನೇ ದಂಧೆಗೆ ಇಳಿಸಿದ್ದು, ಬಾಲಕರು ಆಟೋ, ಬೈಕ್​ಗಳಲ್ಲಿ ಬಂದು ಅನ್ನಭಾಗ್ಯ ಅಕ್ಕಿಯನ್ನ ಕೆಜಿಗೆ 15 ರೂಪಾಯಿಯಂತೆ ಖರೀದಿ ಮಾಡುತ್ತಿದ್ದರು. ಕಾಳಸಂತೆಯಲ್ಲಿ 50-60 ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಇದೇ ಅಕ್ಕಿ ಹೋಟೆಲ್​ಗಳಿಗೂ ಸರಬರಾಜಾಗುತ್ತಿತ್ತು.

ಪಡಿತರ ರದ್ದು

ಅಕ್ರಮ ದಂಧೆ ಸಕ್ರಿಯವಾಗಿರುವ ಬಗ್ಗೆ ‘ಟಿವಿ9’ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಮೈಸೂರು ಜಿಲ್ಲಾಡಳಿತ, ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವಂತಿಲ್ಲ. ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಅಕ್ರಮವಾಗಿ ಮಾರಾಟ ಮಾರಿದ್ರೆ ಪಡಿತರ ಚೀಟಿ ರದ್ದುಪಡಿಸ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​