ಮೈಸೂರು: ಗ್ಯಾಸ್ ಟ್ಯಾಂಕರ್ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಸಾವು

ಸಾವು ಯಾವಾಗ ಬರುತ್ತದೆ ಎಂದು ಹೇಳುವುದು ಕಷ್ಟ. ಅದರಂತೆ ಗ್ಯಾಸ್ ಟ್ಯಾಂಕರ್ ಡಿಕ್ಕಿ (Accident)ಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ಮೈಸೂರು(Mysore) ನಗರದ ಕೂರ್ಗಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ದೇಹ ಛಿದ್ರವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೈಸೂರು: ಗ್ಯಾಸ್ ಟ್ಯಾಂಕರ್ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಸಾವು
ಮೈಸೂರು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 19, 2024 | 3:29 PM

ಮೈಸೂರು, ಜು.19: ಮೈಸೂರು(Mysore) ನಗರದ ಕೂರ್ಗಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಡಿಕ್ಕಿ (Accident)ಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ನಡೆದಿದೆ. ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಚಂದ್ರು, ಪ್ರೇಮಾ ಮೃತರು. ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ದೇಹ ಛಿದ್ರವಾಗಿದ್ದು, ಸ್ಥಳಕ್ಕೆ ವಿ.ವಿ.ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸರ್ಕಾರಿ ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆ

ಬೆಂಗಳೂರು: ಆನೇಕಲ್ ಸರ್ಕಾರಿ ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು ರೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮುನಿಯಲ್ಲಪ್ಪ(46) ಆತ್ಮಹತ್ಯೆ ಮಾಡಿಕೊಂಡವರು. ಇವರು ಇದೇ ಜುಲೈ.16ರಂದು ಅಸ್ತಮಾ, ಹೊಟ್ಟೆನೋವು, ಜ್ವರ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆ ಪಡೆದು ಒಂದೇ ದಿನಕ್ಕೆ ಡಿಸ್ಚಾರ್ಜ್ ಕೂಡ ಆಗಿದ್ದರು. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮುನಿಯಲ್ಲಪ್ಪ, ಇಂದು ಮತ್ತೆ ಆನೇಕಲ್ ತಾಲೂಕು ಆಸ್ಪತ್ರೆಗೆ ಬಂದಿದ್ದ.

ಈ ವೇಳೆ ಅದೇನಾಯ್ತು, ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು, ಆಸ್ಪತ್ರೆ ಬಿಲ್ಡಿಂಗ್​​ನ ಸಜ್ಜಾದ ಮೇಲೆ ಮುನಿಯಲ್ಲಪ್ಪ ಬಿದ್ದಿದ್ದ. ಇದೀಗ ಘಟನಾ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮುನಿಯಲ್ಲಪ್ಪನ ಮೃತದೇಹವನ್ನು ಸ್ಥಳಾಂತರ ಮಾಡಲಾಗಿದೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ:ಕಾರು ಡಿಕ್ಕಿ ಹೊಡೆದು ಕೆಳಗೆ ಬಿದ್ದವನ ಮೇಲೆ ಹರಿದ ಟಿಪ್ಪರ್; ಮಗ ಸಾವು, ತಾಯಿ ಪಾರು

ಚಾಲನಕ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಸರಕಾರಿ ಬಸ್

ಧಾರವಾಡ: ಚಾಲನಕ ನಿಯಂತ್ರಣ ತಪ್ಪಿದ ಹಿನ್ನೆಲೆ ಸರಕಾರಿ ಬಸ್​ವೊಂದು ಹೊಲಕ್ಕೆ ನುಗ್ಗಿದ ಘಟನೆ ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಬಳಿ ನಡೆದಿದೆ. ಧಾರವಾಡದಿಂದ ಕರಡಿಗುಡ್ಡದ ಗ್ರಾಮಕ್ಕೆ ಹೊರಟಿದ್ದ ಬಸ್ ಇದಾಗಿದ್ದು, ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ