ಪ್ರೇಮ ವೈಫಲ್ಯ; ವಿಡಿಯೋ ಮಾಡಿ ವಿಷ ಸೇವಿಸಿದ್ದ ಯುವಕ ಸಾವು

ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಚಿಕ್ಕ ಚಿಕ್ಕ ವಿಷಯಗಳಿಗೆ ಬದುಕನ್ನು ಅಂತ್ಯವಾಗಿಸಿಕೊಳ್ಳುತ್ತಿದ್ದಾರೆ. ಇದೀಗ ಪ್ರೇಮ ವೈಫಲ್ಯ ಹಿನ್ನಲೆ ಮೈಸೂರು ತಾಲೂಕಿನ ಹಡಜನ ಗ್ರಾಮದಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಪೋಷಕರು ಕಣ್ಣೀರಿಡುತ್ತಿದ್ದಾರೆ.

ಪ್ರೇಮ ವೈಫಲ್ಯ; ವಿಡಿಯೋ ಮಾಡಿ ವಿಷ ಸೇವಿಸಿದ್ದ ಯುವಕ ಸಾವು
ಮಧುಸೂಧನ್ ಮೃತ ಯುವಕ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 23, 2024 | 4:06 PM

ಮೈಸೂರು, ಆ.23: ಪ್ರೇಮ ವೈಫಲ್ಯ ಹಿನ್ನಲೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ತಾಲೂಕಿನ ಹಡಜನ ಗ್ರಾಮದಲ್ಲಿ ನಡೆದಿದೆ. ಮಧುಸೂಧನ್ ಮೃತ ಯುವಕ. ಇತ ಮೊನ್ನೆ ವಿಡಿಯೋ ಮಾಡಿ ವಿಷ ಸೇವಿಸಿದ್ದ. ಕೂಡಲೇ ಆತನನ್ನು ಪೋಷಕರು ಆಸ್ಪತ್ರೆಗೆ ಸೇರಿಸಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನರ್ಸಿಂಗ್ ಸ್ಟಾಪ್ ನೇಣಿಗೆ ಶರಣು

ವಿಜಯಪುರ: ನನ್ನ ಸಾವಿಗೆ ಸಹೋದ್ಯೋಗಿಗಳು ಕಾರಣವೆಂದು ಆರೋಪಿಸಿ ನರ್ಸಿಂಗ್ ಸ್ಟಾಪ್ ನೇಣಿಗೆ ಶರಣಾಗಿದ್ದಾರೆ. ತಾಳಿಕೋಟಿ ಸಮುದಾಯ ಆರೋಗ್ಯ ಕೇಂದ್ರದ ಸ್ಟಾಪ್ ನರ್ಸ್ ಶಶಿಕಾಂತ ಬೆಣ್ಣೂರು (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ಎರಡು ದಿನಗಳ ಹಿಂದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಹಿನ್ನಲೆ ವಿವಿಧ ಸಂಘಟನೆಗಳಿಂದ ತಾಳಿಕೋಟಿ ಪಟ್ಟಣ ಬಂದ್​ಗೆ ಕರೆ ನೀಡಲಾಗಿದ್ದು, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ರಸ್ತೆಗಳು ಬಿಕೋ ಎನ್ನುತ್ತಿದೆ. ಸ್ಟಾಪ್ ನರ್ಸ್ ಶಶಿಕಾಂತ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.

ಇದನ್ನೂ ಓದಿ:ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; 300 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ ಅಧಿಕಾರಿಗಳು

ಲಾರಿ ಡಿಕ್ಕಿಯಾಗಿ ರಸ್ತೆಯಲ್ಲಿ ತೆರಳುತ್ತಿದ್ದ ಬಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಸ್ತೆಯಲ್ಲಿ ನಡೆದು ಬರುತ್ತಿದ್ದ ಬಾಲಕನಿಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಸಾನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಕಳಿ ಬಳಿ ಸಂಭವಿಸಿದೆ. ಪಶ್ಚಿಮ ಬಂಗಾಳ ಮೂಲದ ಬಾಲಕ ಶಕೀಲ್(11) ಮೃತ ಬಾಲಕ. ಗುಲಾಮ್ ನೂರ್ ಹಾಗೂ ಹಂಗೀನಾ ದಂಪತಿಯ 3ನೇ ಪುತ್ರ ಈ ಶಕೀಲ್, ಇವರು ಹಾರೋಕ್ಯಾತನಹಳ್ಳಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್