Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕಾಡು ಪ್ರಾಣಿಗಳ ಹಾವಳಿ: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಬೆಳೆ ನಾಶ ಮಾಡಿದ ಕಾಡಾನೆಗಳು

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನ ವನದಂಚಿನ ಬಿಲ್ಲೇನಹೊಸಹಳ್ಳಿ ಗ್ರಾಮದ ಚಿನ್ನದೊರೆ ಗ್ರಾಮದಲ್ಲಿ ಕಾಡಾನೆ ಹಾವಳಿಗೆ ರಾಗಿ, ಮುಸುಕಿನಜೋಳ, ಮರಗೆಣಸು ಬೆಳೆ ನಾಶವಾಗಿದೆ. ರೈತ ವೆಂಕಟೇಶ್​​​ಗೆ ಸೇರಿದ ಬೆಳೆ ನಾಶವಾಗಿದೆ. ಕಾಡಾನೆಗಳು ಬೆಳೆಯನ್ನು ತಿಂದು, ತುಳಿದು ನಾಶ ಮಾಡಿವೆ.

ಮೈಸೂರಿನಲ್ಲಿ ಕಾಡು ಪ್ರಾಣಿಗಳ ಹಾವಳಿ: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಬೆಳೆ ನಾಶ ಮಾಡಿದ ಕಾಡಾನೆಗಳು
ಕಾಡಾನೆಗಳ ದಾಳಿಗೆ ಬೆಳೆ ನಾಶ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on:Nov 13, 2023 | 9:32 AM

ಮೈಸೂರು, ನ.13: ಮೈಸೂರು (Mysuru) ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಒಂದು ಕಡೆ ಚಿರತೆ (Leopard)  ಸೆರೆಯಾದ್ರೆ ಮತ್ತೊಂದು ಕಡೆ ಕಾಡಾನೆಗಳು (Elephants) ಬೆಳೆಗಳನ್ನು ನಾಶ ಮಾಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಕೆ.ಆರ್.ನಗರ ತಾಲೂಕಿನ ಗುಳುವಿನ ಅತ್ತಿಗುಪ್ಪೆ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ರೈತ ಮಂಜೇಗೌಡ ಜಮೀನಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇಟ್ಟಿದ್ದರು. ಆ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಚಿರತೆ ಸೆರೆಯಿಂದ ಸ್ಥಳೀಯ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ಒಂದು ತಿಂಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿತ್ತು. ಬಟಿಗನಹಳ್ಳಿ, ಮುಂಜನಹಳ್ಳಿ, ಸೋಮನಹಳ್ಳಿ, ಸಂಬ್ರವಳ್ಳಿ, ಹೊಸ ಅಗ್ರಹಾರ ಸೇರಿ ಹಲವು ಕಡೆ ದಾಳಿ ಮಾಡಿತ್ತು. ಕರು ನಾಯಿ ಮೇಕೆ ತಿಂದು ಹಾಕಿತ್ತು. ಮೂರು ದಿನದ ಹಿಂದೆ ರೈತ ಮಂಜೇಗೌಡರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು ಅರಣ್ಯ ಸಿಬ್ಬಂದಿ ಬೋನ್ ಇಟ್ಟಿದ್ದರು. ಸದ್ಯ ಬೋನಿಗೆ ಚಿರತೆ ಬಿದ್ದಿದ್ದು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ವೈನ್​ಶಾಪ್​ಗೆ ಬೆಂಕಿ ಹಚ್ಚಿದ ವ್ಯಕ್ತಿಯ ಬಂಧನ

ಹುಣಸೂರು ತಾಲೂಕಿನ ಗ್ರಾಮದಲ್ಲಿ ಕಾಡಾನೆ ಹಾವಳಿ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನ ವನದಂಚಿನ ಬಿಲ್ಲೇನಹೊಸಹಳ್ಳಿ ಗ್ರಾಮದ ಚಿನ್ನದೊರೆ ಗ್ರಾಮದಲ್ಲಿ ಕಾಡಾನೆ ಹಾವಳಿಗೆ ರಾಗಿ, ಮುಸುಕಿನಜೋಳ, ಮರಗೆಣಸು ಬೆಳೆ ನಾಶವಾಗಿದೆ. ರೈತ ವೆಂಕಟೇಶ್​​​ಗೆ ಸೇರಿದ ಬೆಳೆ ನಾಶವಾಗಿದೆ. ಕಾಡಾನೆಗಳು ಬೆಳೆಯನ್ನು ತಿಂದು, ತುಳಿದು ನಾಶ ಮಾಡಿವೆ. ಜೊತೆಗೆ ವಾಸದ ಮನೆ ಮೇಲೂ ದಾಳಿ ಮಾಡಿದೆ. ಮನೆ ಅಂಗಳದಲ್ಲಿ ಡ್ರಮ್ ನಲ್ಲಿ ತುಂಬಿಸಿಟ್ಟಿದ್ದ ನೀರು ಕುಡಿದಿದೆ. ಆನೆ ಹಾವಳಿಯಿಂದ ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ಕಾಡಾನೆಗಳು ಕೂಟದ ಕಡ ಹಾಗೂ ತಟ್ಟೆ ಹಳ್ಳ ಪಾರೆ ಭಾಗದಿಂದ ಬಂದಿವೆ ಎನ್ನಲಾಗಿದೆ. ರೈಲ್ವೆ ಬ್ಯಾರಿಕೇಡ್ ಬೇಲಿ ದಾಟಿ ಗಜಪಡೆ ಬಂದು ದಾಂದಲೆ ಮಾಡುತ್ತಿವೆ.

ಗಂಧದ ಮರ ಕಳ್ಳತನಕ್ಕೆ ಯತ್ನ

ಇದೆಲ್ಲದರ ಜೊತೆಗೆ ಮೈಸೂರಿನಲ್ಲಿ ಗಂಧದ ಮರ ಕಳ್ಳತನಕ್ಕೆ ಯತ್ನ ನಡೆದಿದೆ. ನಗರದ ಕುಕ್ಕರಹಳ್ಳಿ ಕೆರೆಯ ಆವರಣದಲ್ಲಿ ಶ್ರೀಗಂಧದ ಮರ ಕಳ್ಳತನಕ್ಕೆ ಯತ್ನಿಸಲಾಗಿದೆ. ಶ್ರೀಗಂಧ ಮರವನ್ನು ಕಡಿದು ಸಾಗಿಸಲು ಯತ್ನ ನಡೆದಿದ್ದು ಈ ವೇಳೆ ವಾಯುವಿಹಾರಕ್ಕೆ ಬಂದಿದ್ದ ಸಾರ್ವಜನಿಕರನ್ನು ಕಂಡು ಶ್ರೀಗಂಧದ ಮರವನ್ನು ಸ್ಥಳದಲ್ಲೇ ಬಿಟ್ಟು ಖದೀಮರು ಪರಾರಿಯಾಗಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:28 am, Mon, 13 November 23