AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷಗಳಲ್ಲಿ ಶೇ.75ರಷ್ಟು ಹುಲಿಗಳ ಸಂಖ್ಯೆ ಏರಿಕೆ, ವನ್ಯಜೀವಿ ರಕ್ಷಣೆಗೆ ಪ್ರಧಾನಿ ಮೋದಿ ಕರೆ

ಮೈಸೂರಿನಲ್ಲಿ ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ,,ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಮೋದಿ, ಮುಂದಿನ ದಿನಗಳಲ್ಲಿ ವನ್ಯಜೀವಿ ರಕ್ಷಣೆಗೆ ಮತ್ತಷ್ಟು ಕಾರ್ಯಗಳನ್ನು ಮಾಡೋಣ ಎಂದು ಕರೆ ನೀಡಿದರು.

10 ವರ್ಷಗಳಲ್ಲಿ ಶೇ.75ರಷ್ಟು ಹುಲಿಗಳ ಸಂಖ್ಯೆ ಏರಿಕೆ, ವನ್ಯಜೀವಿ ರಕ್ಷಣೆಗೆ ಪ್ರಧಾನಿ ಮೋದಿ ಕರೆ
Follow us
ರಮೇಶ್ ಬಿ. ಜವಳಗೇರಾ
|

Updated on:Apr 09, 2023 | 2:03 PM

ಮೈಸೂರು: ‘ಪ್ರಾಜೆಕ್ಟ್ ಟೈಗರ್’ (Project Tiger) 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಇಂದು(ಏಪ್ರಿಲ್ 09) ಮೈಸೂರಿನ(Mysuru) ಕೆಎಸ್​ಒಯು ಘಟಿಕೋತ್ಸವ ಭವನದಲ್ಲಿ ಏರ್ಪಡಿಸಲಾದ ಹುಲಿ ಯೋಜನೆಯ ಸುವರ್ಣಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ(Nagendra Modi) ಭಾಗವಹಿಸಿದರು. ಈ ವೇಳೆ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಮೋದಿ, 2022ರಲ್ಲಿ ದೇಶದಲ್ಲಿ ಹುಲಿಗಳ ಸಂಖ್ಯೆ 3,167ಕ್ಕೆ ಏರಿಕೆಯಾಗಿದ್ದು, 10 ವರ್ಷಗಳಲ್ಲಿ ಶೇ.75ರಷ್ಟು ಹುಲಿಗಳ ಸಂಖ್ಯೆ ಹೆಚ್ಚಾಗಿದೆ. ಭಾರತದಲ್ಲಿ ಹುಲಿಗಳ ಸಂತತಿ ಹೆಚ್ಚಿರುವುದು ಗೌರವದ ಕ್ಷಣ ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: PM Modi Mysore Visit Live: ಹುಲಿ ಸಂರಕ್ಷಣಾ ಸುವರ್ಣ ಮಹೋತ್ಸವದಲ್ಲಿ ಮೋದಿ ಮಾತು

ವಿಶ್ವದಲ್ಲೇ ಅತಿ ಹೆಚ್ಚು ಹುಲಿಗಳು ಭಾರತದಲ್ಲಿ ಇದ್ದು, ಅವುಗಳ ಸಂತತಿ ಶೇ 75ರಷ್ಟಿದೆ. ಭಾರತದಲ್ಲಿ 75 ಚದರ ಕಿ.ಮೀ ಹುಲಿ ಸಂರಕ್ಷಣೆಯ ಪ್ರದೇಶವಿದೆ. ವಿಶ್ವದ ಹಲವೆಡೆ ಹುಲಿಗಳ ಸಂಖ್ಯೆ ಸ್ಥಿರವಾಗಿದೆ ಮತ್ತು ಇಳಿಯುತ್ತಿದೆ. ಆದರೆ, ಭಾರತದಲ್ಲಿ ಮಾತ್ರ ಹುಲಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಮೋದಿ ತಿಳಿಸಿದರು.

ಭಾರತ ಮತ್ತು ಹುಲಿ ನಡುವಿನ ಸಂಬಂಧ ಬಹಳ ಪುರಾತನಾವದದ್ದು. ದೇಶದ ಅನೇಕ ಸಮುದಾಯಗಳು ಹುಲಿಗಳನ್ನು ಪೂಜಿಸುತ್ತಿದ್ದು, ಭಾರತದ ಅನೇಕ ಜನರು ಹುಲಿಯನ್ನು ಬಂಧು ಎಂದು ತಿಳಿದಿದ್ದಾರೆ. ಹುಲಿಗಳು ನಮ್ಮ ಸಂಕೃತಿಯ ಒಂದು ಭಾಗವಾಗಿವೆ. ದುರ್ಗಾ ದೇವಿ ಮತ್ತು ಸ್ವಾಮಿ ಅಯ್ಯಪ್ಪ ಸ್ವಾಮಿ ವಾಹನ ಹುಲಿ. ಭಾರತ ಜಗತ್ತಿನ ಅತಿ ದೊಡ್ಡ ಹುಲಿ ಸಂರಕ್ಷಣಾ ದೇಶ, ಹಾಗೇ ಆನೆ ಸಂರಕ್ಷಣಾ ದೇಶ. ಭಾರತದಲ್ಲಿ ಸಿಂಹಗಳ ಸಂಖ್ಯೆ ಹೆಚ್ಚಿದೆ. ಚಿರತೆಗಳ ಸಂತತಿ 4 ವರ್ಷಗಳಲ್ಲಿ ಶೇ 60 ರಷ್ಟು ಹೆಚ್ಚಿದೆ. ಈ ಎಲ್ಲ ಸಾಧನೆಗಳಿಗೆ ಜನರ ಸಹಕಾರ ಕಾರಣ. ಸಿಂಹಗಳಿದ್ದರೇ ನಾವು ಇದ್ದ ಹಾಗೆ, ನಾವು ಇದ್ದರೇ ಸಿಂಹಗಳ ಇದ್ದಂಗೆ ಎಂದು ಹೇಳಿದರು.

ದಶಕಗಳ ಹಿಂದೆಯೇ ಭಾರತದಲ್ಲಿ ಚಿರತೆಗಳು ಅಳಿದು ಹೋಗಿದ್ದವು. ನಾವು ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಚಿರತೆಗಳನ್ನು ಭಾರತಕ್ಕೆ ತಂದಿದ್ದೇವೆ. ಹಾಗೇ ಸುಮಾರು 30,000 ಆನೆಗಳನ್ನು ಹೊಂದಿದ್ದು, ವಿಶ್ವದ ಅತಿದೊಡ್ಡ ಏಷ್ಯಾಟಿಕ್ ಆನೆ ಶ್ರೇಣಿಯ ದೇಶವಾಗಿದೆ ಎಂದರು.

ಪಶ್ಚಿಮ ಘಟ್ಟಗಳಲ್ಲಿ ಅನೇಕ ಬುಡಕಟ್ಟು ಸಮುದಾಯ ವಾಸಿಸುತ್ತಿವೆ. ಪ್ರಕೃತಿಯಿಂದ ನಾವು ಎಷ್ಟು ಪಡೆದಿದ್ದೇವೋ ಅಷ್ಟು ನಾವು ವಾಪಸ್​ ನೀಡಬೇಕು. ಇದನ್ನು ನಾವು ಆದಿವಾಸಿಗಳಲ್ಲಿ ಕಾಣಬಹುದಾಗಿದೆ. ಪ್ರಕೃತಿಯೊಂದಿಗೆ ಜೀವನ ಮಾಡುವುದನ್ನು ಆದಿವಾಸಿಗಳಿಂದ ನೋಡಿ ಕಲಿಯಬೇಕು. ನಮ್ಮ ಸಮಾಜ ಆದಿವಾಸಿಗಳಿಂದ ಈ ಗುಣವನ್ನು ಕಲಿಯಬೇಕು. ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಎಲಿಫೆಂಟ್ ವಿಸ್ಪರ್ಸ್ ಸಾಕ್ಷ್ಯಚಿತ್ರವು ಪ್ರಕೃತಿ ಮತ್ತು ಜೀವಿಗಳ ನಡುವಿನ ಅದ್ಭುತ ಸಂಬಂಧದ ನಮ್ಮ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ಮುಂದಿನ ದಿನಗಳಲ್ಲಿ ವನ್ಯಜೀವಿ ರಕ್ಷಣೆಗೆ ಮತ್ತಷ್ಟು ಕಾರ್ಯಗಳನ್ನು ಮಾಡೋಣ ಎಂದು ಕರೆ ನೀಡಿದರು.

Published On - 1:50 pm, Sun, 9 April 23

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ