ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ವಿರುದ್ಧ ಸಾಹಿತಿ ಎಸ್.ಎಲ್. ಬೈರಪ್ಪ ಸಾತ್ವಿಕ ಸಿಟ್ಟು, ಪ್ರಧಾನಿ ಮೋದಿಗೆ ಪತ್ರ

ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಚಾಮುಂಡಿಬೆಟ್ಟಕ್ಕೆ ತೊಂದರೆಯಾಗುತ್ತದೆ. ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ಇದಾಗಿದೆ. ಈ ಯೋಜನೆಯನ್ನ ಅನುಷ್ಠಾನಗೊಳಿಸಬಾರದು. ಜೊತೆಗೆ ಚಾಮುಂಡಿಬೆಟ್ಟಕ್ಕೆ ಹೋಗುವಂತ ವಾಹನಗಳಿಗೆ ನಿರ್ಬಂಧ ಹಾಕಬೇಕು ಎಂದು ಪತ್ರದಲ್ಲಿ ಎಸ್.ಎಲ್. ಬೈರಪ್ಪ ತಿಳಿಸಿದ್ದಾರೆ.

ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ವಿರುದ್ಧ ಸಾಹಿತಿ ಎಸ್.ಎಲ್. ಬೈರಪ್ಪ ಸಾತ್ವಿಕ ಸಿಟ್ಟು, ಪ್ರಧಾನಿ ಮೋದಿಗೆ ಪತ್ರ
ಹಿರಿಯ ಸಾಹಿತಿ S.L.ಭೈರಪ್ಪ (ಎಡ); ಪ್ರಧಾನಿ ಮೋದಿ(ಬಲ)
Follow us
| Updated By: ಆಯೇಷಾ ಬಾನು

Updated on:Nov 23, 2021 | 12:34 PM

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟ ಉಳಿಸಿ ಅಂತ ಸಾಹಿತಿ ಎಸ್.ಎಲ್. ಬೈರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಸರ್ಕಾರ ಕೈಗೊಂಡಿರುವ ಯೋಜನೆಯನ್ನು ಎಸ್.ಎಲ್. ಬೈರಪ್ಪ ವಿರೋಧಿಸಿದ್ದಾರೆ.

ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಚಾಮುಂಡಿಬೆಟ್ಟಕ್ಕೆ ತೊಂದರೆಯಾಗುತ್ತದೆ. ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ಇದಾಗಿದೆ. ಈ ಯೋಜನೆಯನ್ನ ಅನುಷ್ಠಾನಗೊಳಿಸಬಾರದು. ಜೊತೆಗೆ ಚಾಮುಂಡಿಬೆಟ್ಟಕ್ಕೆ ಹೋಗುವಂತ ವಾಹನಗಳಿಗೆ ನಿರ್ಬಂಧ ಹಾಕಬೇಕು. ಗಣ್ಯವ್ಯಕ್ತಿಗಳ ವಾಹನ ಸೇರಿದಂತೆ ಎಲ್ಲಾ ವಾಹನಗಳಿಗು ನಿರ್ಬಂಧ ವಿಧಿಸಬೇಕು. ಸರ್ಕಾರದಿಂದಲೇ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಗಳನ್ನು ಬಿಡಬೇಕು. ಜೊತೆಗೆ ಚಾಮುಂಡಿ ಬೆಟ್ಟದಲ್ಲಿ ವಾಸ ಇರುವ 4 ಸಾವಿರ ಜನರಿಗೆ ನಗರದಲ್ಲಿ ಸ್ಥಳವಕಾಶ ಮಾಡಿಕೊಡಬೇಕು. ದೇವಸ್ಥಾನದ ಅರ್ಚಕರು ಹಾಗೂ ದೇವಾಲಯದ ಸಿಬ್ಬಂದಿಗೆ ಮಾತ್ರ ಉಳಿಯಲು ಅವಕಾಶಕೊಡಬೇಕು ಎಂದು ಸಾಹಿತಿ ಎಸ್.ಎಲ್. ಬೈರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚಾಮುಂಡಿ ಬೆಟ್ಟದಲ್ಲೀಗಾ ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಮೈಸೂರಿನ ಜನ ಸೇರಿದಂತೆ ಅನೇಕರು ಸರ್ಕಾರದ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿರಂತರ ಮಳೆಯಿಂದಾಗಿ ಚಾಮುಂಡಿ ಬೆಟ್ಟ ಕುಸಿಯುತ್ತಿದೆ. ಈ ನಡುವೆ ಸರ್ಕಾರ ಕಾಮಗಾರಿ ಮಾಡಲು ಹೊರಟಿದೆ. ಸರ್ಕಾರದ ನಡೆಗೆ ಇತಿಹಾಸ ತಜ್ಞರು ಮತ್ತು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಚಾಮುಂಡಿಬೆಟ್ಟ ಉಳಿಸಿ ಅಭಿಯಾನವನ್ನು ಕೈಗೊಂಡಿದ್ದಾರೆ. ಸದ್ಯ ಈ ಬಗ್ಗೆ ಸಾಹಿತಿ ಎಸ್.ಎಲ್. ಬೈರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಚಾಮುಂಡಿ ಬೆಟ್ಟ ಉಳಿಸಿ ಅಭಿಯಾನಕ್ಕೆ ಕೈಜೋಡಿಸಲು ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಒಡೆಯರ್ ಕರೆ

Published On - 12:30 pm, Tue, 23 November 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!