AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಹೋಯ್ತು ಪುಟಾಣಿ: ಕಾಂಗ್ರೆಸ್-ಬಿಜೆಪಿಯನ್ನು ಬೆಸೆದಿದ್ದ ಆನೆ ಮರಿ ಪರಾರಿ; ತಾಯಿ ಮಡಿಲು ಸೇರಿದರೆ ಸಾಕು ಎನ್ನುತ್ತಿರುವ ಜನ

ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆ ಮರಿಗೆ ರಾಹುಲ್ ಗಾಂಧಿ ಮನವಿ ಮೇರೆಗೆ ಆನೆ ಮರಿಯನ್ನು ಹುಡುಕಿ ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದ ಆನೆ ಮರಿ ಇದೀಗ ದಿಢೀರ್ ನಾಪತ್ತೆಯಾಗಿದೆ.

ಎಲ್ಹೋಯ್ತು ಪುಟಾಣಿ: ಕಾಂಗ್ರೆಸ್-ಬಿಜೆಪಿಯನ್ನು ಬೆಸೆದಿದ್ದ ಆನೆ ಮರಿ ಪರಾರಿ; ತಾಯಿ ಮಡಿಲು ಸೇರಿದರೆ ಸಾಕು ಎನ್ನುತ್ತಿರುವ ಜನ
ತಾಯಿ ಮಡಿಲು ಸೇರಿದ ಮರಿ ಆನೆ (ಹಳೆ ಚಿತ್ರ)
TV9 Web
| Edited By: |

Updated on: Oct 17, 2022 | 10:49 AM

Share

ಮೈಸೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ​ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ(Nagarahole Tiger Reserve Park) ಸಫಾರಿಗೆ ತೆರಳಿದ್ದ ವೇಳೆ ಗಾಯಗೊಂಡಿದ್ದ ಆನೆ ಮರಿ ಕಂಡು ಮರುಗಿದ್ದರು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಪತ್ರ ಬರೆದು ಆನೆ ಮರಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಅದರಂತೆಯೇ ಚಿಕಿತ್ಸೆಯಲ್ಲಿದ್ದ ಆನೆ ಮರಿ ಸದ್ಯ ನಾಪತ್ತೆಯಾಗಿದ್ದೆ. ಅಚ್ಚರಿಯಂಬಂತೆ ಆನೆ ಮರಿ ಜೊತೆ ತಾಯಿ ಆನೆ ಕೂಡ ನಾಪತ್ತೆಯಾಗಿದೆ. ತಾಯಿ ಆನೆ ತನ್ನ ಮರಿ ಆನೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದೆ ಎಂದು ಊಹಿಸಲಾಗುತ್ತಿದೆ.

ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆ ಮರಿಗೆ ರಾಹುಲ್ ಗಾಂಧಿ ಮನವಿ ಮೇರೆಗೆ ಆನೆ ಮರಿಯನ್ನು ಹುಡುಕಿ ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದ ಆನೆ ಮರಿ ಇದೀಗ ದಿಢೀರ್ ನಾಪತ್ತೆಯಾಗಿದೆ. ಇನ್ನು ಘಟನೆ ಸಂಬಂಧ ನಾಗರಹೊಳೆ ಡಿಸಿಎಫ್ ಹರ್ಷ ಕುಮಾರ್ ಚಿಕ್ಕನರಗುಂದ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಆನೆ ಮರಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿತ್ತು. ಸಿಎಂ ಸೂಚನೆ ನಂತರ ಆನೆ ಮರಿ ಹಾಗೂ ತಾಯಿ ಆನೆಯನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಿದ್ದೆವು. ಆನೆ ಮತ್ತು ಆನೆ ಮರಿಯನ್ನು ಸೆರೆ ಹಿಡಿದಿರಲಿಲ್ಲ. ಚಿಕಿತ್ಸೆ ನೀಡಿ ನಿಗಾದಲ್ಲಿ ಇಡಲಾಗಿತ್ತು. ತಾಯಿ ಆನೆಗೆ ಮರಿ ಮೇಲೆ ಅಪಾರ ಪ್ರೀತಿ. ಸಾಕಷ್ಟು ಹರಸಾಹಸದಿಂದ 1 ಗಂಟೆಗೂ ಹೆಚ್ಚು ಕಾಲ ಮರಿಗೆ ಚಿಕಿತ್ಸೆ ನೀಡಿದ್ದೀವಿ. ಆನೆ ಮರಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿತ್ತು. ಈ ಬಗ್ಗೆ ನಿರಂತರವಾಗಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತಿತ್ತು. ಚಿಕಿತ್ಸೆ ನಂತರ ಆನೆ ಮತ್ತು ಮರಿಯನ್ನು ಕಾಡಿನಲ್ಲಿ ನಿಗಾದಲ್ಲಿ ಇರಿಸಲಾಗಿತ್ತು. ಈಗ ಆನೆ ಮತ್ತು ಮರಿ ಕಾಣಿಸುತ್ತಿಲ್ಲ ಅರಣ್ಯದ ಒಳಗೆ ಹೋಗಿರಬಹುದು. ಗಸ್ತು ತಿರುಗುವ ವೇಳೆ ಈ ಬಗ್ಗೆ ನಿಗಾ ವಹಿಸಲು ಸೂಚಿಸಲಾಗಿದೆ. ಮರಿ ಮತ್ತು ತಾಯಿಯ ಚಲನವಲನದ ಬಗ್ಗೆ ಕಾಡಿನಲ್ಲೇ ನಿರಂತರವಾಗಿ ನಿಗಾ ಇಡಲಾಗುವುದು ಎಂದರು. ಇದನ್ನೂ ಓದಿ: ನಿಮ್ಮ ಮನವಿ ನನಗೆ ತಲುಪಿದೆ, ನಿಮ್ಮ ಕಳಕಳಿಯನ್ನ ಪ್ರಶಂಸಿಸುತ್ತೇನೆ: ರಾಹುಲ್‌ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ

ಘಟನೆ ಹಿನ್ನೆಲೆ

ಭಾರತ್‌ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ನಾಗರಹೊಳೆಯಲ್ಲಿ ಸಫಾರಿಗೆ ತೆರಳಿದ್ದರು. ಈ ವೇಳೆ ರಾಹುಲ್ ಗಾಂಧಿ ಗಾಯಗೊಂಡ ಆನೆ ಮರಿಯನ್ನು ನೋಡಿ ಮರುಗಿ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ತಾಯಿಯ ಜೊತೆಗಿದ್ದ ಆನೆ ಮರಿಯ ಬಾಲ ಮತ್ತು ಸೊಂಡಿಲಿಗೆ ಗಾಯಗಳಾಗಿವೆ. ಅದು ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ. ಈ ಆನೆ ಮರಿಗೆ ತುರ್ತಾಗಿ ವೈದ್ಯಕೀಯ ನೆರವು ಬೇಕಿದೆ. ಆನೆ ಮರಿಗೆ ಚಿಕಿತ್ಸೆ ನೀಡಿ, ಅದನ್ನು ರಕ್ಷಿಸುವ ವಿಚಾರದಲ್ಲಿ ರಾಜಕೀಯ ಗಡಿಗಳನ್ನು ಮೀರಿ ನಾನು ನಿಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ಸರಿಯಾದ ಚಿಕಿತ್ಸೆ ಲಭಿಸಿದರೆ ಆ ಮರಿಯು ಜೀವಂತವಾಗಿ ಉಳಿಯುತ್ತದೆ ಎನ್ನುವ ವಿಶ್ವಾಸವಿದೆ. ಈ ಆನೆ ಮರಿಯ ಜೀವ ಉಳಿಸಲು ನೀವು ಸಕಾಲಕ್ಕೆ ನೆರವು ನೀಡುತ್ತೀರಿ ಎಂಬ ಭರವಸೆ ಇದೆ ಎಂದು ರಾಹುಲ್‌ ಪತ್ರದಲ್ಲಿ ಉಲ್ಲೇಖಿಸಿದ್ದರು.

ಇದಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆನೆ ಮತ್ತು ಆನೆ ಮರಿಯನ್ನು ಹುಡುಕಿ ಚಿಕಿತ್ಸೆ ನೀಡುವಂತೆ ಸೂಚಿಸಿದ್ದರು. ಸಿಎಂ ಸೂಚನೆ ಮೇರೆಗೆ ಸಿಬ್ಬಂದಿ ಆನೆ ಮತ್ತು ಆನೆ ಮರಿಯನ್ನು ಪತ್ತೆ ಮಾಡಿ ಅವುಗಳಿಗೆ ಚಿಕಿತ್ಸೆ ನೀಡಿ ನಿಗಾದಲ್ಲಿ ಇಡಲಾಗಿತ್ತು. ಆದ್ರೆ ಈಗ ಆನೆ ಮತ್ತು ಆನೆ ಮರಿ ಎರಡೂ ನಾಪತ್ತೆಯಾಗಿದೆ ಮರಿ ಆನೆ ತಾಯಿಯ ಮಡಿಲು ಸೇರಿ ತಮ್ಮ ಹೊಸ ಜೀವನ ಆರಂಭಿಸಿವೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್