ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಾರ್ಯಕ್ರಮದ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ; ಕಾಂಗ್ರೆಸ್​​​ ಪ್ರತಿಭಟನೆ

ಜೂನ್​ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ  ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ‌ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಕಾರ್ಯಕ್ರಮದ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡದಿರುವುದಕ್ಕೆ ಯದುವೀರ ಭಾವಚಿತ್ರ ಹಿಡಿದು ಕಾಂಗ್ರೆಸ್ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ.

ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಾರ್ಯಕ್ರಮದ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ; ಕಾಂಗ್ರೆಸ್​​​ ಪ್ರತಿಭಟನೆ
ಸಾಂಧರ್ಬಿಕ ಚಿತ್ರImage Credit source: The Times of India
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 14, 2022 | 5:39 PM

ಮೈಸೂರು: ಜೂನ್​ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ‌ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಕಾರ್ಯಕ್ರಮದ ವೇದಿಕೆಯಲ್ಲಿ  ಯದುವಂಶದವರಿಗೆ ಅವಕಾಶ ನೀಡದಿರುವುದಕ್ಕೆ ಮೈಸೂರು ಜಿಲ್ಲಾ ಪಂಚಾಯತಿ ಬಳಿ ಯದುವೀರ ಭಾವಚಿತ್ರ ಹಿಡಿದು ಕಾಂಗ್ರೆಸ್ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಸಂಸದ ಪ್ರತಾಪಸಿಂಹ ಹಾಗೂ ಯೋಗ ಸಮಿತಿ ವಿರುದ್ದ ಘೋಷಣೆ ಕೂಗಿದ್ದಾರೆ.

ರಾಜಮನೆತನದವರಿಗೆ ಕರೆಯದೆ‌ ಅವಮಾನ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಪೋಸ್ಟರ್ ಚಳುವಳಿ ಮಾಡಲಾಗುವುದು. ಮೈಸೂರಿನ ಯಾರಿಗೂ ಅವಕಾಶ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿ: ಯೋಗ ದಿನಾಚರಣೆಯ ಮಾಹಿತಿ ವಿಚಾರದಲ್ಲೂ ರಾಜಕಾರಣ: ಸಂಸದ ಪ್ರತಾಪ್​ ಸಿಂಹ-ಶಾಸಕ ರಾಮದಾಸ್ ನಡುವೆ ಜಟಾಪಟಿ

ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಜೂನ್​​ 21ರಂದು ಮೈಸೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ.  ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡುತ್ತಿದೆ.

ಯೋಗಾಭ್ಯಾಸದಲ್ಲಿ 15,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಸಂಬಂಧ ಸಿದ್ದತಾ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಈಗಾಗಲೆ ಕೆಲ ಸೂಚನೆ ನೀಡಿದ್ದಾರೆ. ಜೂ.13ರೊಳಗೆ ಯೋಗಪಟುಗಳ ಆಯ್ಕೆ ಪೂರ್ಣಗೊಳಿಸಿ, ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ಮಾಡಿ. ಯೋಗಪಟುಗಳಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ವ್ಯವಸ್ಥೆ ಮಾಡಿ. ಕುಡಿಯುವ ನೀರು ಸೇರಿ ಎಲ್ಲ ವ್ಯವಸ್ಥೆ ಮಾಡಿ. ಕಾರ್ಯಕ್ರಮದ ಯಶಸ್ಸಿಗೆ ಒಟ್ಟು 14 ಸಮಿತಿಗಳ ರಚನೆ ಮಾಡಿ ಎಂದು ಸೂಚನೆ ನೀಡಿದ್ದಾರೆ. ಹಾಗೇ ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾವ ಶಾಸಕರಿಗೂ ವೇದಿಕೆ ಮೇಲೆ ಅವಕಾಶವಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಯೋಗ (Yoga) ಮಾಡುವ ವೇದಿಕೆ ರಾಜಕೀಯ ವೇದಿಕೆಯಲ್ಲ. ಸಭಾ ಕಾರ್ಯಕ್ರಮದಲ್ಲಿ ನನಗೂ ಅವಕಾಶವಿಲ್ಲ. ಯಾವುದೇ ಸ್ಥಳೀಯ ಶಾಸಕರಿಗೂ ಅವರ ವೇದಿಕೆಯಲ್ಲಿ ಸ್ಥಾನ ಇರುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೋದಿ ಅವರ ಜೊತೆ ಮುಖ್ಯಮಂತ್ರಿ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಅವಕಾಶವಿದೆ. ನಾವೆಲ್ಲರೂ ವೇದಿಕೆಯ ಕೆಳಭಾಗದ ಒಂದು ಬದಿಯಲ್ಲಿರುತ್ತೇವೆ. ಇದರಲ್ಲಿ ಯಾವ ಬದಲಾವಣೆಗಳು ಇಲ್ಲ ಎಂದು ಹೇಳಿದರು. ನನ್ನ ಮತ್ತು ರಾಮದಾಸ್ ನಡುವೆ ಈ ವಿಚಾರದಲ್ಲಿ ಕ್ರೆಡಿಟ್ ವಾರ್ ನಡೆಯುತ್ತಿಲ್ಲ. ಮೋದಿ ಅವರ ವೇದಿಕೆ ಮುಂಭಾಗ 7 ಸಾವಿರ ಜನಕ್ಕೆ ಅವಕಾಶ ಇರುತ್ತದೆ. ಒಟ್ಟಾರೆ ಅರಮನೆಯ ಎಲ್ಲಾ ಭಾಗವೂ ಸೇರಿ 15 ಸಾವಿರ ಜನಕ್ಕೆ ಅವಕಾಶವಾಗಬಹುದು. ಆದರೆ ಎಲ್ಲರಿಗೂ ಮೋದಿ ಅವರು ಕಾಣುವುದಿಲ್ಲ ಎಂದು ಮೈಸೂರು ಸಂಸದ ಪ್ರತಾಪ ಸಿಂಹಾ ಹೇಳಿದ್ದಾರೆ.

ಫ್ಲೆಕ್ಸ್​ ಹಾಕಿ ನಗರದ ಸೌಂದರ್ಯ ಹಾಳುಮಾಡಬೇಡಿ

ಯೋಗ ದಿನದಲ್ಲಿ ಪಾಲ್ಗೊಳ್ಳಲು ಈಗಾಗಲೇ ನೊಂದಣಿ ಆರಂಭವಾಗಿದೆ. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯೋಗ ಮಾಡಲು ಅವಕಾಶ ನೀಡಲಾಗುತ್ತದೆ. ಮೋದಿ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್​ಗಳನ್ನ ಯಾರು ಹಾಕಬೇಡಿ. ಸರ್ಕಾರವೇ ಮೋದಿ ಅವರ ಸ್ವಾಗತದ ಬ್ಯಾನರ್​ಗಳನ್ನು ಹಾಕುತ್ತದೆ. ನಮ್ಮ ಪಕ್ಷದವರೇ ಇರಲಿ ಅಥವಾ ಇತರ ಯಾವುದೇ ಸಂಘ ಸಂಸ್ಥೆಗಳೇ ಇರಲಿ, ಯಾವುದೇ ಫ್ಲೆಕ್ಸ್​ಗಳನ್ನ ಹಾಕಿ ನಗರದ ಸೌಂದರ್ಯ ಹಾಳುಮಾಡಬೇಡಿ ಎಂದು ಕಿವಿಮಾತು ಹೇಳಿದರು.

ಮೋದಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ

ಜೂನ್​ 21ರಂದು ಮೈಸೂರಿನಲ್ಲಿವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿರುವ ಹಿನ್ನಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ಮೋದಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜೂ 21 ರಂದು ಮೈಸೂರಿಗೆ ಮೋದಿ ಆಗಮಿಸುತ್ತಿದ್ದು, ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಅರಮನೆ ಆವರಣದಲ್ಲಿ‌ ಯೋಗ ಫೆಡರೇಶನ್‌ನಿಂದ ತಾಲೀಮು ನಡೆಯುತ್ತಿದ್ದು, ಸಂಸದ ಪ್ರತಾಪಸಿಂಹ, ಶಾಸಕ ಎಸ್​.ಎ ರಾಮದಾಸ್ ಸೇರಿ ಹಲವರು ಭಾಗಿಯಾಗಲಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Tue, 14 June 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ