AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಮೋದಿ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ ವಿವಾದ: ಪ್ರತಾಪ ಸಿಂಹ ಸ್ಪಷ್ಟನೆ

ಜೂನ್ 21ರಂದು ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ  ಪ್ರಧಾನಿ ನರೇಂದ್ರ  ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಐವರಿಗೆ ಮಾತ್ರ ಅವಕಾಶ ನೀಡಿರುವ ವಿವಾದಕ್ಕೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ಮೈಸೂರು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಮೋದಿ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ ವಿವಾದ: ಪ್ರತಾಪ ಸಿಂಹ ಸ್ಪಷ್ಟನೆ
ಸಾಂಧರ್ಬಿಕ ಚಿತ್ರImage Credit source: The Times of India
ವಿವೇಕ ಬಿರಾದಾರ
|

Updated on:Jun 14, 2022 | 7:13 PM

Share

ಮೈಸೂರು:  ಜೂನ್ 21ರಂದು ಮೈಸೂರಿನಲ್ಲಿ (Mysore) ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಅಂಗವಾಗಿ  ಪ್ರಧಾನಿ ನರೇಂದ್ರ  ಮೋದಿ ( PM Narendra Modi) ಕಾರ್ಯಕ್ರಮದ ವೇದಿಕೆಯಲ್ಲಿ ಐವರಿಗೆ ಮಾತ್ರ ಅವಕಾಶ ನೀಡಿರುವ ವಿವಾದಕ್ಕೆ ಸಂಸದ ಪ್ರತಾಪ್ ಸಿಂಹ (Pratap Simha) ಸ್ಪಷ್ಟನೆ ನೀಡಿ ನಾನು ಹೇಳಿರುವುದು ಜನಪ್ರತಿನಿಧಿಗಳ ವಿಚಾರ, ಗಣ್ಯರ ಪಟ್ಟಿ ಸಿದ್ಧವಾಗುತ್ತಿದೆ. ಮಹಾರಾಜರ ಕೊಡುಗೆ ಹಿನ್ನೆಲೆ ಅರಮನೆ ಆವರಣದಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಮಹಾರಾಜರು, ರಾಜಮಾತೆ, ಯತಿಗಳು ಮೈಸೂರಿನಲ್ಲೇ ಇದ್ದಾರೆ. ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಗಣ್ಯರ ಪಟ್ಟಿ ಅಂತಿಮವಾಗಿಲ್ಲ. ನಾನು ಅಂದು ಹೇಳಿದ್ದು ವೇದಿಕೆಯ ಜನಪ್ರತಿನಿಧಿಗಳ ಬಗ್ಗೆ ಮಾತ್ರ. ನಾನು ಹೇಳಿರುವುದನ್ನು ಬೇರೆ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಮೈಸೂರು ಮಹಾರಾಜರನ್ನು ಬಿಟ್ಟು ಕಾರ್ಯಕ್ರಮವೆಂದು ಗಾಳಿ ಸುದ್ದಿ. ಇಂತಹ ಗಾಳಿ ಸುದ್ದಿಗೆ ಕಿವಿಗೊಡದಂತೆ ಮನವಿ ಮಾಡಿದ್ದಾರೆ.

ವಿವಾದದ ಹಿನ್ನಲೆ

ಜೂನ್​ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ‌ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಕಾರ್ಯಕ್ರಮದ ವೇದಿಕೆಯಲ್ಲಿ  ಯದುವಂಶದವರಿಗೆ ಅವಕಾಶ ನೀಡದಿರುವುದಕ್ಕೆ ಮೈಸೂರು ಜಿಲ್ಲಾ ಪಂಚಾಯತಿ ಬಳಿ ಯದುವೀರ ಭಾವಚಿತ್ರ ಹಿಡಿದು ಕಾಂಗ್ರೆಸ್ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ಇದನ್ನು ಓದಿ: ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಾರ್ಯಕ್ರಮದ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ; ಕಾಂಗ್ರೆಸ್​​​ ಪ್ರತಿಭಟನೆ

ಯಾವ ಶಾಸಕರಿಗೂ ವೇದಿಕೆ ಮೇಲೆ ಅವಕಾಶವಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಯೋಗ (Yoga) ಮಾಡುವ ವೇದಿಕೆ ರಾಜಕೀಯ ವೇದಿಕೆಯಲ್ಲ. ಸಭಾ ಕಾರ್ಯಕ್ರಮದಲ್ಲಿ ನನಗೂ ಅವಕಾಶವಿಲ್ಲ. ಯಾವುದೇ ಸ್ಥಳೀಯ ಶಾಸಕರಿಗೂ ಅವರ ವೇದಿಕೆಯಲ್ಲಿ ಸ್ಥಾನ ಇರುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೋದಿ ಅವರ ಜೊತೆ ಮುಖ್ಯಮಂತ್ರಿ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಅವಕಾಶವಿದೆ. ನಾವೆಲ್ಲರೂ ವೇದಿಕೆಯ ಕೆಳಭಾಗದ ಒಂದು ಬದಿಯಲ್ಲಿರುತ್ತೇವೆ. ಇದರಲ್ಲಿ ಯಾವ ಬದಲಾವಣೆಗಳು ಇಲ್ಲ ಎಂದು ಹೇಳಿದರು. ನನ್ನ ಮತ್ತು ರಾಮದಾಸ್ ನಡುವೆ ಈ ವಿಚಾರದಲ್ಲಿ ಕ್ರೆಡಿಟ್ ವಾರ್ ನಡೆಯುತ್ತಿಲ್ಲ. ಮೋದಿ ಅವರ ವೇದಿಕೆ ಮುಂಭಾಗ 7 ಸಾವಿರ ಜನಕ್ಕೆ ಅವಕಾಶ ಇರುತ್ತದೆ. ಒಟ್ಟಾರೆ ಅರಮನೆಯ ಎಲ್ಲಾ ಭಾಗವೂ ಸೇರಿ 15 ಸಾವಿರ ಜನಕ್ಕೆ ಅವಕಾಶವಾಗಬಹುದು. ಆದರೆ ಎಲ್ಲರಿಗೂ ಮೋದಿ ಅವರು ಕಾಣುವುದಿಲ್ಲ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:10 pm, Tue, 14 June 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?