ಮೈಸೂರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನೋಂದಣಿ ಮಾಡಿಸುವವರು 2ನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು: ಕೆ ಸುಧಾಕರ

| Updated By: ವಿವೇಕ ಬಿರಾದಾರ

Updated on: Jun 14, 2022 | 8:37 PM

ಜೂನ್​ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನ ಅರಮನೆ ಆವರಣದಲ್ಲಿ ನಡೆಯುವ ಯೋಗ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸುವವರು 2ನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು ಎಂದು ಮೈಸೂರಿನಲ್ಲಿ ಆರೋಗ್ಯ ಇಲಾಖೆಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಮೈಸೂರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನೋಂದಣಿ ಮಾಡಿಸುವವರು 2ನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು: ಕೆ ಸುಧಾಕರ
ಆರೋಗ್ಯ ಸಚಿವ ಕೆ.ಸುಧಾಕರ್
Follow us on

ಮೈಸೂರು: ಜೂನ್​ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನ ಅರಮನೆ ಆವರಣದಲ್ಲಿ ನಡೆಯುವ ಯೋಗ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸುವವರು 2ನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು ಎಂದು ಮೈಸೂರಿನಲ್ಲಿ ಆರೋಗ್ಯ ಇಲಾಖೆಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಲಸಿಕೆ ಪಡೆಯದವರಿಗೆ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ. ಯೋಗ ದಿನಕ್ಕೂ 72 ಗಂಟೆ ಮುಂಚೆ ರಿಪೋರ್ಟ್‌ ಕಡ್ಡಾಯವಾಗಿ ಪಡೆದಿರಬೇಕು. 2 ಡೋಸ್ ಹಾಕಿಸಿಕೊಂಡವರಿಗೆ ನೆಗೆಟಿವ್ ಸರ್ಟಿಫಿಕೆಟ್‌ ಬೇಡ. ಯೋಗದ ವೇಳೆ ಥರ್ಮಲ್‌ ಸ್ಕ್ಯಾನಿಂಗ್‌, ಸ್ಯಾನಿಟೈಸರ್ ವ್ಯವಸ್ಥೆ ಇರುತ್ತೆ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಜೂನ್​​ 21ರಂದು ಮೈಸೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ದಿನಾಚರಣೆಯಲ್ಲಿ ಯೋಗ  ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ.  ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡುತ್ತಿದೆ.

ಇದನ್ನು ಓದಿ: ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಾರ್ಯಕ್ರಮದ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ; ಕಾಂಗ್ರೆಸ್​​​ ಪ್ರತಿಭಟನೆ

ಯೋಗಾಭ್ಯಾಸದಲ್ಲಿ 15,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಸಂಬಂಧ ಸಿದ್ದತಾ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಈಗಾಗಲೆ ಕೆಲ ಸೂಚನೆ ನೀಡಿದ್ದಾರೆ. ಜೂ.13ರೊಳಗೆ ಯೋಗಪಟುಗಳ ಆಯ್ಕೆ ಪೂರ್ಣಗೊಳಿಸಿ, ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ಮಾಡಿ. ಯೋಗಪಟುಗಳಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ವ್ಯವಸ್ಥೆ ಮಾಡಿ. ಕುಡಿಯುವ ನೀರು ಸೇರಿ ಎಲ್ಲ ವ್ಯವಸ್ಥೆ ಮಾಡಿ. ಕಾರ್ಯಕ್ರಮದ ಯಶಸ್ಸಿಗೆ ಒಟ್ಟು 14 ಸಮಿತಿಗಳ ರಚನೆ ಮಾಡಿ ಎಂದು ಸೂಚನೆ ನೀಡಿದ್ದಾರೆ. ಹಾಗೇ ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೋದಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ

ಜೂನ್​ 21ರಂದು ಮೈಸೂರಿನಲ್ಲಿವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿರುವ ಹಿನ್ನಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ಮೋದಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜೂ 21 ರಂದು ಮೈಸೂರಿಗೆ ಮೋದಿ ಆಗಮಿಸುತ್ತಿದ್ದು, ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಅರಮನೆ ಆವರಣದಲ್ಲಿ‌ ಯೋಗ ಫೆಡರೇಶನ್‌ನಿಂದ ತಾಲೀಮು ನಡೆಯುತ್ತಿದ್ದು, ಸಂಸದ ಪ್ರತಾಪಸಿಂಹ, ಶಾಸಕ ಎಸ್​.ಎ ರಾಮದಾಸ್ ಸೇರಿ ಹಲವರು ಭಾಗಿಯಾಗಲಿದ್ದಾರೆ. ಯೋಗ ತಾಲೀಮಿಗೆ  ಸಾವಿರಾರು ವಿದ್ಯಾರ್ಥಿಗಳು ಸಾಥ್ ನೀಡಿದರು.

ಇದನ್ನು ಓದಿ:  ಮೈಸೂರು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಮೋದಿ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ ವಿವಾದ: ಪ್ರತಾಪ ಸಿಂಹ ಸ್ಪಷ್ಟನೆ

ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಸಿಎಂ ಬೊಮ್ಮಾಯಿ

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ 15,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಸಂಬಂಧ ಸಿದ್ದತಾ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಕೆಲ ಸೂಚನೆ ನೀಡಿದ್ದಾರೆ. ಜೂ.13ರೊಳಗೆ ಯೋಗಪಟುಗಳ ಆಯ್ಕೆ ಪೂರ್ಣಗೊಳಿಸಿ, ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ಮಾಡಿ. ಯೋಗಪಟುಗಳಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ವ್ಯವಸ್ಥೆ ಮಾಡಿ. ಕುಡಿಯುವ ನೀರು ಸೇರಿ ಎಲ್ಲ ವ್ಯವಸ್ಥೆ ಮಾಡಿ. ಕಾರ್ಯಕ್ರಮದ ಯಶಸ್ಸಿಗೆ ಒಟ್ಟು 14 ಸಮಿತಿಗಳ ರಚನೆ ಮಾಡಿ ಎಂದು ಸೂಚನೆ ನೀಡಿದ್ದಾರೆ. ಹಾಗೇ ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 pm, Tue, 14 June 22