AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Israel-Hamas War: ಮೈಸೂರಿನಲ್ಲಿ ಪ್ಯಾಲೆಸ್ಟೈನ್ ಪರ ರ‍್ಯಾಲಿ ನಡೆಸಲು ಎಸ್​ಡಿಪಿಐ ನಿರ್ಧಾರ: 144 ಸೆಕ್ಷನ್ ಜಾರಿ

ಬೆಳಗ್ಗೆ 9 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಒಂದು ವೇಳೆ ರ‍್ಯಾಲಿ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಏನದಾರೂ ಮಾಹಿತಿ ಹಂಚಿಕೊಂಡರೂ ಕ್ರಮ ಕೈಗೊಳ್ಳಲಾಗುವುದು ಎಂದು ​ನಗರ ಪೊಲೀಸ್​​ ಆಯುಕ್ತ ಡಾ. ರಮೇಶ್ ಹೇಳಿದ್ದಾರೆ.

Israel-Hamas War: ಮೈಸೂರಿನಲ್ಲಿ ಪ್ಯಾಲೆಸ್ಟೈನ್ ಪರ ರ‍್ಯಾಲಿ ನಡೆಸಲು ಎಸ್​ಡಿಪಿಐ ನಿರ್ಧಾರ: 144 ಸೆಕ್ಷನ್ ಜಾರಿ
ಎಸ್​ಡಿಪಿಐ
ರಾಮ್​, ಮೈಸೂರು
| Edited By: |

Updated on: Oct 31, 2023 | 12:38 PM

Share

ಮೈಸೂರು ಅ.31: ಇಸ್ರೇಲ್​ ಮತ್ತು ಪ್ಯಾಲೆಸ್ಟೈನ್​ನ ಹಮಾಸ್ (Israel-Hamas War) ​ಉಗ್ರರ ನಡುವೆ ಯುದ್ಧ ನಡೆದಿದೆ. ರಾಜ್ಯದಲ್ಲಿ ಪ್ಯಾಲೆಸ್ಟೈನ್​ನ ಹಮಾಸ್ ​ಉಗ್ರರರ ಪರವಾದ ಹೇಳಿಕೆ ಮತ್ತು ಘೋಷಣೆಗಳು ಕೇಳಿಬರುತ್ತಿವೆ. ಅದೇರೀತಿಯಾಗಿ ಮೈಸೂರಿನ (Mysore) ಮಿಲಾದ್ ಪಾರ್ಕ್​​​ ಬಳಿ ಪ್ಯಾಲೆಸ್ಟೈನ್ ಪರವಾಗಿ ರ‍್ಯಾಲಿ ನಡೆಸಲು ನಿರ್ಧರಿಸಿದ್ದ ಎಸ್​ಡಿಪಿಐ (SDPI) ಸಂಘಟನೆಗೆ ನಗರ ಪೊಲೀಸ್​​ ಆಯುಕ್ತ ಡಾ. ರಮೇಶ್ ಅನುಮತಿ ನೀಡಿಲ್ಲ. ಬದಲಿಗೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಒಂದು ವೇಳೆ ರ‍್ಯಾಲಿ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಏನದಾರೂ ಮಾಹಿತಿ ಹಂಚಿಕೊಂಡರೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ಯಾಲೆಸ್ಟೈನ್​ಗೆ ಹಣ ನೀಡುವಂತೆ ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್ ಕರೆ

ಪ್ಯಾಲೆಸ್ಟೈನ್ ಮೇಲೆ ಇಸ್ರೇಲ್ ದಾಳಿ ಮಾಡಿದ್ದನ್ನು ಖಂಡಿಸಿ ಮುಸ್ಲಿಂ ಯೂಥ್ ಫೆಡರೇಶನ್ ಭಟ್ಕಳದ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ರದ್ದು ಮಾಡಿತ್ತು. ಯುದ್ಧ ಮುಗಿಯುವವರೆಗೆ ಭಟ್ಕಳದ ಮುಸ್ಲಿಮರು ಮದುವೆ, ಮನರಂಜನೆಯನ್ನು ರದ್ದು ಮಾಡುವಂತೆ ಕರೆ ನೀಡಿತ್ತು.

ಇದನ್ನೂ ಓದಿ: ಗೆಲ್ಲುವವರೆಗೆ ಯುದ್ಧ ಮುಂದುವರೆಯುತ್ತೆ, ಕದನ ವಿರಾಮ ಕುರಿತು ತನ್ನ ನಿಲುವು ಸ್ಪಷ್ಟಪಡಿಸಿದ ಇಸ್ರೇಲ್

ಅವುಝ ಭಟ್ಕಳ ಕ್ರಿಕೆಟ್ ಲೀಗ್-5 ನವೆಂಬರ್​ 3 ರಿಂದ ಒಂದು ತಿಂಗಳಕಾಲ ಐಪಿಎಲ್ ಮಾದರಿಯಲ್ಲಿ ನಡೆಯಬೇಕಿತ್ತು. ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್ ಕಳೆದ ತಿಂಗಳು 200 ಆಟಗಾರರನ್ನು ಗುರುತಿಸಿ ಹರಾಜು ಹಾಕಿ 12 ತಂಡವನ್ನು ಆಯ್ಕೆ ಮಾಡಿತ್ತು. ಮುಸ್ಲಿಮರ ಹತ್ಯೆ ವಿರೋಧಿಸಿ ಕ್ರಿಕೇಟ್ ಪಂದ್ಯಾವಳಿಯನ್ನು ರದ್ದು ಮಾಡಲಾಗಿದೆ. ಹಣ ಉಳಿಸಿ ಪ್ಯಾಲೆಸ್ಟೈನ್​ಗೆ ಸಹಾಯ ಮಾಡಲು ಭಟ್ಕಳ ಮುಸ್ಲಿಮರಿಗೆ ಸಂಘಟನೆ ಮನವಿ ಮಾಡಿತ್ತು.

ಪ್ಯಾಲೆಸ್ಟೈನ್ ​ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಮುಸ್ಲಿಂ ಯುವಕ

ಪ್ಯಾಲೆಸ್ತೀನ್​ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಹೊಸಪೇಟೆಯ ಆಲಂ ಬಾಷಾ ವಿರುದ್ಧ ಸುಮುಟೋ ಪ್ರಕರಣ ದಾಖಲು ಮಾಡಲಾಗಿತ್ತು. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ PSI ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ CRPC 108-151 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಯುವಕನನ್ಮು ಪೊಲೀಸರು ವಶಕ್ಕೆ ಪಡೆದಿದ್ದರು.

ಆಲಂ ಬಾಷಾ ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿಯ ನಿವಾಸಿ ಆಗಿದ್ದು, ಅಲ್ಪಸಂಖ್ಯಾತ ಇಲಾಖೆ ಕಚೇರಿಯಲ್ಲಿ ಅಟೆಂಡರ್​ ಕೆಲಸ ಮಾಡುತ್ತಿದ್ದ. ವಾಟ್ಸಾಪ್​​​ ಸ್ಟೇಟಸ್​ನಲ್ಲಿ ಯುದ್ಧ ಪೀಡಿತ ಪ್ಯಾಲೆಸ್ತೀನ್ ಭಾವಚಿತ್ರ ಹಾಕಿ ವಿಡಿಯೋ ಹಂಚಿಕೊಂಡಿದ್ದು, ನಾವು ಪ್ಯಾಲೆಸ್ಟೈನ್ ಪರವಾಗಿದ್ದೇವೆ. ಪ್ಯಾಲೆಸ್ಟೈನ್ ಜಿಂದಾಬಾದ್ ಅಂತ ಬರೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ