Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಡಿಸಿ ಕಚೇರಿಯಲ್ಲೂ ಖರೀದಿಸಬಹದು ಜಂಬೂಸವಾರಿ, ಟಾರ್ಚ್​​ ಲೈಟ್​ ಟಿಕೆಟ್

ಆನ್​ಲೈನ್​ನಲ್ಲಿ ಜಂಬೂಸವಾರಿ ಟಾರ್ಚ್​​ ಲೈಟ್ ಟಿಕೆಟ್​ಗೆ ಬೇಡಿಕೆ ಹೆಚ್ಚಿರುವ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲೂ ಟಿಕೆಟ್ ಖರೀದಿಗೆ ಅವಕಾಶ ನೀಡಲಾಗಿದೆ. ಡಿಸಿ ಕಚೇರಿಯ ಸ್ಪಂದನ ಕೇಂದ್ರದಲ್ಲಿ ಟಿಕೆಟ್ ಖರೀದಿ ಮಾಡಬಹುದು. ಈ ಬಗ್ಗೆ ದಸರಾ ವಿಶೇಷಾಧಿಕಾರಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಮೈಸೂರು ಡಿಸಿ ಕಚೇರಿಯಲ್ಲೂ ಖರೀದಿಸಬಹದು ಜಂಬೂಸವಾರಿ, ಟಾರ್ಚ್​​ ಲೈಟ್​ ಟಿಕೆಟ್
ದಸರಾ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on:Oct 06, 2024 | 9:38 AM

ಮೈಸೂರು, ಅ.06: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರಲ್ಲಿ (Mysuru Dasara 2024) ಜಂಬೂಸವಾರಿ ಮತ್ತು ಟಾರ್ಚ್​​ ಲೈಟ್​ ಶೂಗಳ ಟಿಕೆಟ್​ಗೆ ಬೇಡಿಕೆ ಹೆಚ್ಚಿದೆ. ಹೀಗಾಗಿ ನೇರವಾಗಿ ಟಿಕೆಟ್ ಖರೀದಿ ಮಾಡಲು ಜಿಲ್ಲಾಡಳಿತ ಅವಕಾಶ ನೀಡಿದೆ. ಆನ್​ಲೈನ್​ನಲ್ಲಿ ಜಂಬೂಸವಾರಿ ಟಾರ್ಚ್​​ ಲೈಟ್ ಟಿಕೆಟ್​ಗೆ ಬೇಡಿಕೆ ಹೆಚ್ಚಿರುವ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲೂ ಟಿಕೆಟ್ ಖರೀದಿಗೆ ಅವಕಾಶ ನೀಡಲಾಗಿದೆ. ಡಿಸಿ ಕಚೇರಿಯ ಸ್ಪಂದನ ಕೇಂದ್ರದಲ್ಲಿ ಟಿಕೆಟ್ ಖರೀದಿ ಮಾಡಬಹುದು. ಈ ಬಗ್ಗೆ ದಸರಾ ವಿಶೇಷಾಧಿಕಾರಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇನ್ನು ಒಂದು ದಸರಾ ಗೋಲ್ಡ್ ಕಾರ್ಡ್ ನಲ್ಲಿ ಜಂಬೂಸವಾರಿ ಮೆರವಣಿಗೆ, ಪಂಜಿ‌ನ ಕವಾಯತು, ಚಾಮುಂಡಿಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಟಿಕೆಟ್ ದರ 3500 ರೂಪಾಯಿ ನಿಗದಿಪಡಿಸಲಾಗಿದೆ. ಇನ್ನು ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ 1000 ರೂಪಾಯಿ ನಿಗದಿಪಡಿಸಲಾಗಿದೆ.

ಯುವ ದಸರಾಗೂ ಟಿಕೆಟ್‌

ಈ ಬಾರಿಯ ದಸರಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 40 ಕೋಟಿ ರೂ. ಅನುದಾನ ನೀಡಲಾಗುವುದೆಂದು ಘೋಷಣೆ ಮಾಡಿದ್ದಾರೆ. ಆದರೂ ಕೆಲ ಕಾರ್ಯಕ್ರಮಗಳಿಗೆ ಟಿಕೆಟ್ ದರ ತುಸು ಹೆಚ್ಚಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.’ಯುವ ದಸರೆ’ಗೆ ಇದೇ ಮೊದಲ ಬಾರಿಗೆ ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮುಂಭಾಗದ ಗ್ಯಾಲರಿ 1ರಲ್ಲಿ ಕುಳಿತು ಯುವ ದಸರಾ ನೋಡಲು 8 ಸಾವಿರ ರೂ. ದರ ನಿಗದಿಪಡಿಸಲಾಗಿದೆ. ಅದೇ ರೀತಿ ಗ್ಯಾಲರಿ 2ರಲ್ಲಿ ಕುಳಿತು ವೀಕ್ಷಿಸಲು 5 ಸಾವಿರ ರೂ. ಜೊತೆಗೆ 2500, 1500 ರೂ. ಪ್ರತ್ಯೇಕ ದರವನ್ನೂ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ದಸರಾ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ!

ಈ ಬಾರಿ ನಗರದ ಪ್ರಮುಖ ರಸ್ತೆಗಳನ್ನು ಒಳಗೊಂಡಂತೆ 130 ಕಿ.ಮೀ. ಉದ್ದದಲ್ಲಿ ದೀಪಾಲಂಕಾರ ಇದೆ. 100 ವೃತ್ತಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಡಬಲ್‌ ಡೆಕ್ಕರ್‌ ಬಸ್‌ನಲ್ಲಿಅ. 3ರಿಂದ 21ರವರೆಗೆ ದೀಪಾಲಂಕಾರದ ಸೊಬಗನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಬಹುದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:34 am, Sun, 6 October 24

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ