AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; ಅದೇ ನನ್ನ ಕೊನೆಯ ಹೋರಾಟ: ಹೆಚ್​ಡಿ ಕುಮಾರಸ್ವಾಮಿ

HD Kumaraswamy: ನನ್ನ ಪಂಚರತ್ನ ಯೋಜನೆಗಳ ಮೂಲಕ ಜನರನ್ನ ಸ್ವಾಭಿಮಾನಿಗಳನ್ನಾಗಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; ಅದೇ ನನ್ನ ಕೊನೆಯ ಹೋರಾಟ: ಹೆಚ್​ಡಿ ಕುಮಾರಸ್ವಾಮಿ
ಹೆಚ್.ಡಿ. ಕುಮಾರಸ್ವಾಮಿ
TV9 Web
| Edited By: |

Updated on:Oct 12, 2021 | 3:17 PM

Share

ಮೈಸೂರು: ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಅದೇ ನನ್ನ ಕೊನೆಯ ಹೋರಾಟ. ಜನರ ಕಷ್ಟ ಬಗೆಹರಿಸಲು ಹೋರಾಟ ಮಾಡುತ್ತೇನೆ. 5 ಯೋಜನೆಗಳ ಮೂಲಕ ಜನರ ಕಷ್ಟ ಬಗೆಹರಿಸುತ್ತೇನೆ. ಸ್ವತಂತ್ರವಾಗಿ ಅಧಿಕಾರ ಮಾಡಲು ಅವಕಾಶ ನೀಡಿ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ನಾನು ಆ ಭಾಗ್ಯ ಕೊಡ್ತಿನಿ ಈ ಭಾಗ್ಯ ಕೊಡ್ತಿನಿ ಅಂತ ಹೇಳಲ್ಲ. 10 ಕೆ.ಜಿ ಅಕ್ಕಿ ಕೊಡ್ತಿನಿ ಅಂತ ಹೇಳಲ್ಲ. 10-15 ಕೆ.ಜಿ ಪುಕ್ಕಟೆ ಅಕ್ಕಿ ಕೊಟ್ಟು ಬಿಕ್ಷುಕರನ್ನಾಗಿ ಮಾಡಲ್ಲ. ನಾನು ನಿಮ್ಮನ್ನ ಸ್ವಾವಲಂಬಿಗಳನ್ನಾಗಿ ಮಾಡಬೇಕು. ನನ್ನ ಪಂಚರತ್ನ ಯೋಜನೆಗಳ ಮೂಲಕ ಈ ಕಾರ್ಯ ಮಾಡುತ್ತೇನೆ. ಜನರನ್ನ ಸ್ವಾಭಿಮಾನಿಗಳನ್ನಾಗಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ಜನವರಿಯಿಂದ‌ ರಾಜ್ಯದ ಎಲ್ಲಾ ಹಳ್ಳಿಗಳಿಗೂ‌ ಹೋಗುತ್ತೇನೆ. ನನ್ನ ಪಂಚರತ್ನ ಯೋಜನೆಗಳ ಬಗ್ಗೆ ಜನರಲ್ಲಿ ಹೇಳುತ್ತೇನೆ. ಮನೆಗೆ ಒಬ್ಬರಿಗೆ ಉದ್ಯೋಗ ನೀಡುವುದು. ಎಲ್ಲರಿಗೂ ಸೂರು ನೀಡುತ್ತೇನೆ. ಉಚಿತವಾಗಿ ಉತ್ತಮ ಶಿಕ್ಷಣ. ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆ. ರೈತರು ಸುಸ್ಥಿರವಾಗಿ ಜೀವನ ಕಟ್ಟಿಕೊಳ್ಳುವ ಯೋಜನೆ ತರುತ್ತೇನೆ ಎಂದು ಪಂಚರತ್ನ ಯೋಜನೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಒಬ್ಬಳು ಹೆಣ್ಣು ಮಗಳು ಸಿಕ್ಕಿದ್ದಳು. ಇಷ್ಟು ವರ್ಷ ಕುಮಾರಣ್ಣ ಕುಮಾರಣ್ಣ ಅಂತಾ ಓಟು ಹಾಕಿದೆ. ನಮಗೆ ಏನು ಮಾಡಿದೆ ಅಂತಾ ಹೆಣ್ಣು ಮಗಳು ಕೇಳಿದ್ಲು. ನಾನು ಸ್ವತಂತ್ರ ಸರ್ಕಾರ ಮಾಡಲಿಲ್ಲ. ಬೇರೆಯವರ ಜೊತೆ ಸೇರಿ ಸರ್ಕಾರ ಮಾಡಿದ್ದು. ಕೆಲಸ ಮಾಡಲು ಅವರು ಬಿಡಲಿಲ್ಲ. ನಾನು ಏನು ಮಾಡಲಿ ತಾಯಿ ಎಂದೆ. ಈ ಘಟನೆ ನೆನಪಿಸಿಕೊಂಡು ದಯವಿಟ್ಟು ಬಡತನ ನಿರ್ಮೂಲನೆಗೆ ನನಗೊಂದು‌ ಅವಕಾಶ ನೀಡಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಮುಂದಿನ ಅಭ್ಯರ್ಥಿ ಯಾರು ಎಂಬ ಸುಳಿವು ಕೊಟ್ಟ ಕುಮಾರಸ್ವಾಮಿ ನಾನು, ದೇವೇಗೌಡರು ಯಾರಿಗೂ ಅನ್ಯಾಯ ಮಾಡಿಲ್ಲ. ದೇವೇಗೌಡರೆಂದರ ಚಿಕ್ಕ ದೇವೇಗೌಡರು ಅಲ್ಲ. ದೊಡ್ಡ ದೇವೇಗೌಡರು ಎಂದು ಹೇಳಿದೆ ಎಂದು ಕುಮಾರಸ್ವಾಮಿ ಜಿ.ಟಿ.ದೇವೇಗೌಡ ಕಾಲೆಳೆದಿದ್ದಾರೆ. ಜೆಡಿಎಸ್​ನಲ್ಲಿ ಬೆಳೆದು ಈಗ ಅದನ್ನೇ ನಾಶ ಆಗುತ್ತೆ ಎನ್ನುತ್ತಿದ್ದಾರೆ. ಎಲ್ಲವನ್ನೂ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದು ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಚಾಮುಂಡೇಶ್ವರಿ ಕ್ಷೇತ್ರದ ಮುಂದಿನ ಜೆಡಿಎಸ್ ಅಭ್ಯರ್ಥಿ ಬಗ್ಗೆ ಹೆಚ್​ಡಿಕೆ ಸುಳಿವು ನೀಡಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಅಭ್ಯರ್ಥಿಯ ಸುಳಿವು ನೀಡಿದ್ದಾರೆ. ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಮುಂದಿನ ಅಭ್ಯರ್ಥಿ ಎಂಬ ಸುಳಿವು ನೀಡಿದ್ದಾರೆ. ಶಿವಮೂರ್ತಿಗೆ ಹಲವು ನೋವು ಆಗಿದೆ. ಅವರು ಬೆಳೆದುಬಂದಿದ್ದು ಸಣ್ಣನೌಕರನಾಗಿ. ತುಂಬಾ ವಿದ್ಯಾವಂತರಲ್ಲ. ಆದರೆ, ಈ ಭಾಗದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಎಲ್ಲರೂ ಶಿವಮೂರ್ತಿಯ ಜೊತೆ ಇರಿ ಎನ್ನುವ ಮೂಲಕ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಕೊರೊನಾದಿಂದ ರಾಜ್ಯದ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರ ಸಿಗದೆ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ಆದರೆ ರಾಜ್ಯ ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ. ರಾಜ್ಯ ಸರ್ಕಾರ ಜಾಹೀರಾತಿನಲ್ಲಿಯೂ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ. ನಿನ್ನೆ ಐದು ಜನ ಸೈನಿಕರು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಇದು ಪ್ರಧಾನಿ ಮೋದಿ ಅವರು ನೀಡುತ್ತಿರುವ ಕೊಡುಗೆ ಎಂದು ಕೇಂದ್ರ ಸರ್ಕಾರವನ್ನು ಕೂಡ ಟೀಕಿಸಿದ್ದಾರೆ.

ಇದನ್ನೂ ಓದಿ: ನೆಗ್ಲೆಕ್ಟ್ ಮಾಡ್ತೀನಿ ಅನ್ನುತ್ತಾ ಕುಮಾರಸ್ವಾಮಿ ಸುತ್ತಲೇ ಯಾಕೆ ಗಿರಕಿ ಹೊಡೆಯುತ್ತೀರಿ? ಸಿದ್ದರಾಮಯ್ಯಗೆ ಹೆಚ್​ಡಿಕೆ ಪ್ರಶ್ನೆ

ಇದನ್ನೂ ಓದಿ: ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ನಿಂದಿಸುತ್ತಿದ್ದಾರೆ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಸರಣಿ ಟ್ವೀಟ್

Published On - 3:15 pm, Tue, 12 October 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ