AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ, ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್​ಗೆ ಸೇರುವೆ, ಈಮುನ್ನವೇ ಬಿಜೆಪಿ ಸೇರಿ ಡಿಸಿಎಂ ಆಗಬಹುದಿತ್ತು: ಶಾಸಕ ಜಿ.ಟಿ.ದೇವೇಗೌಡ

ನಾನು ಯಾವಾಗಲೂ ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಬಿಎಸ್ ಯಡಿಯೂರಪ್ಪನವರು ಐದು ಟಿಕೇಟ್ ಕೊಡ್ತೀನಿ, ಐದು ಸ್ಥಳ ಆಯ್ಕೆ ಮಾಡಿಕೊಳ್ಳಿ ಅಂದಿದ್ದರು. ಆದರೆ ನಾನು ಯಾವತ್ತೂ ಅಧಿಕಾರಕ್ಕೆ ಆಸೆಪಟ್ಟವನಲ್ಲ. ನನಗೆ ಜನರ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಅವರು ತಿಳಿಸಿದರು.

ನನಗೆ, ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್​ಗೆ ಸೇರುವೆ, ಈಮುನ್ನವೇ ಬಿಜೆಪಿ ಸೇರಿ ಡಿಸಿಎಂ ಆಗಬಹುದಿತ್ತು: ಶಾಸಕ ಜಿ.ಟಿ.ದೇವೇಗೌಡ
ಜಿ.ಟಿ.ದೇವೇಗೌಡ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 30, 2021 | 7:40 PM

Share

ಮೈಸೂರು: ನನಗೆ, ನನ್ನ ಮಗನಿಗೆ ಟಿಕೆಟ್ ಖಚಿತ ಪಡಿಸಿದರೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅಧಿಕಾರಕ್ಕೆ ಆಸೆಪಟ್ಟಿದ್ದರೆ ಬಿಜೆಪಿಗೆ ಸೇರಿ ಉಪ ಮುಖ್ಯಮಂತ್ರಿಯಾಗುತ್ತಿದ್ದೆ. ಹದಿನೇಳು ಜನರು ಬಿಜೆಪಿಗೆ ಸೇರಿದಾಗ ಆ ಲಿಸ್ಟ್​ನಲ್ಲಿ ನನ್ನ ಹೆಸರೇ ಮೊದಲಿತ್ತು. ನಾನು ಯಾವಾಗಲೂ ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಬಿಎಸ್ ಯಡಿಯೂರಪ್ಪನವರು ಐದು ಟಿಕೇಟ್ ಕೊಡ್ತೀನಿ, ಐದು ಸ್ಥಳ ಆಯ್ಕೆ ಮಾಡಿಕೊಳ್ಳಿ ಅಂದಿದ್ದರು. ಆದರೆ ನಾನು ಯಾವತ್ತೂ ಅಧಿಕಾರಕ್ಕೆ ಆಸೆಪಟ್ಟವನಲ್ಲ. ನನಗೆ ಜನರ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗೂ ಮುನ್ನ ಟಿಕೆಟ್ ಸಿಗುವುದು ಖಚಿತವಾದಲ್ಲಿ ಪುತ್ರ ಹರೀಶ್‌ ಗೌಡ ಕಾಂಗ್ರೆಸ್ ಸೇರಲಿದ್ದಾರೆ. ಆ ಬಳಿಕ ನಾನು ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ. ನಾನು ಈಗ ಕಾಂಗ್ರೆಸ್ ಸೇರುತ್ತೇನೆಂದು ಹೇಳಿಲ್ಲ. ಸದ್ಯಕ್ಕೆ ನಾನು ತಟಸ್ಥವಾಗಿ ಇರುತ್ತೇನೆ ಎಂದು ಅವರು ತಿಳಿಸಿದರು. ಎಲ್ಲೂ ಅವಕಾಶ ಸಿಗದಿದ್ದರೆ ಜೆಡಿಎಸ್‌ಗೆ ಬರುತ್ತಾರೆ ಎಂದ ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ದೇವಿಯ ಕೃಪೆ ಏನಿದೆಯೋ ಅದೇ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಯಾರನ್ನೂ ಬಿಡುವುದಿಲ್ಲ; ಸುದ್ದಿಗೋಷ್ಠಿ ವೇಳೆ ಕಮಲ್ ಪಂತ್ ಹೇಳಿಕೆ 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ

(JDS MLA GT DeveGowda says will joins Congress if confirm ticket to me and my son)

Published On - 5:13 pm, Mon, 30 August 21

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ