AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ ಕೆಂಪೇಗೌಡ ನಿಧನ

ಖ್ಯಾತ ಕನ್ನಡ ಭಾಷಾವಿಜ್ಞಾನಿ ಡಾ. ಕೆ. ಕೆಂಪೇಗೌಡರು ನಿಧನರಾಗಿದ್ದಾರೆ. ಅವರು ಭಾಷಾ ವಿಜ್ಞಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಮತ್ತು ಡಿ.ಲಿಟ್ ಪದವಿ ಪಡೆದಿದ್ದ ಅವರು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ ಮತ್ತು ಅನೇಕ ಲೇಖನಗಳನ್ನು ಬರೆದಿದ್ದಾರೆ. ಅವರ ನಿಧನವು ಕನ್ನಡ ಭಾಷಾ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ.

ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ ಕೆಂಪೇಗೌಡ ನಿಧನ
ಭಾಷಾವಿಜ್ಞಾನಿ ಡಾ. ಕೆ.ಕೆಂಪೆಗೌಡ
ರಾಮ್​, ಮೈಸೂರು
| Edited By: |

Updated on:Feb 26, 2025 | 3:59 PM

Share

ಮೈಸೂರು, ಫೆಬ್ರವರಿ 26: ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ ಕೆಂಪೇಗೌಡ (K Kempegowda) ನಿಧನರಾಗಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿರುವ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚನ್ನಪಟ್ಟಣದ ಹೆಚ್ ಬ್ಯಾಡ್ರಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ಹಿರಿಯ ಲೇಖಕ ಕೆ. ಕೆಂಪೇಗೌಡ ಅವರು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದವರು. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಶೆಟ್ಟಿಹಳ್ಳಿಯಲ್ಲಿ ಮಾಧ್ಯಮಿಕ ಮತ್ತು ಚನ್ನಪಟ್ಟಣದಲ್ಲಿ ಹೈಯರ್ ಸೆಕೆಂಡರಿ ಶಿಕ್ಷಣ ಪಡೆದರು. ಮೈಸೂರು ವಿಶ್ವವಿದ್ಯಾಲಯದಿಂದ ಹಿಂದಿ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಭಾಷಾ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. (ಸಂಶೋಧನೆ ಮತ್ತು ಗ್ರಂಥರಚನೆಗೆ ಅನುವಾದ A Descriptive Analysis of Irula Dialect) ಈ ವಿಷಯ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ.ಪದವಿ ಪಡೆದರು. ಸಾಮಾನ್ಯ ಭಾಷಾ ವಿಜ್ಞಾನ ಕೃತಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದರು.

ಭಾಷಾ ವಿಜ್ಞಾನ ಕೋಶ, ಧ್ವನಿಮಾ ವಿಜ್ಞಾನ, ಸಾಮಾನ್ಯ ಭಾಷಾ ವಿಜ್ಞಾನ, ಕನ್ನಡ ಭಾಷಾ ಚರಿತ್ರೆ, ತೌಲನಿಕ ದ್ರಾವಿಡ ಭಾಷಾ ವಿಜ್ಞಾನ, ಕನ್ನಡ ಭಾಷ ಸ್ವರೂಪ, ಕನ್ನಡ ಉಪಭಾಷೆಗಳ ಅಧ್ಯಯನ ಸೇರಿದಂತೆ ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದ ಅನೇಕ ಲೇಖನಗಳನ್ನು ಕನ್ನಡಕ್ಕೆ ಕೊಡುಗೆಯಾಗಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Wed, 26 February 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್