ರೌಡಿ ಶೀಟರ್ಗೆ ಸಿಕ್ತು ರಾಜ್ಯೋತ್ಸವ ಪ್ರಶಸ್ತಿ; ಕುತೂಹಲ ಸೃಷ್ಟಿಸಿದ ಮೈಸೂರು ಜಿಲ್ಲಾಡಳಿತದ ನಿರ್ಧಾರ
ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರೌಡಿ ಶೀಟರ್ಗೆ ನೀಡಿ ಗೌರವಿಸಲಾಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿದ್ದಾರ ಎಂಬ ಅನುಮಾನ ಹುಟ್ಟಿಕೊಂಡಿದೆ.
ಮೈಸೂರು, ನ.20: ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ ಗುರುತಿಸಿಕೊಂಡವರು, ರಾಜ್ಯಕ್ಕೆ ಉತ್ತಮ ಕೊಡುಗೆ ನೀಡಿದವರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ನೀಡಲಾಗುತ್ತೆ. ಆದರೆ ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರೌಡಿ ಶೀಟರ್ಗೆ (Rowdy Sheeter) ನೀಡಿ ಗೌರವಿಸಲಾಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿದ್ದಾರ ಎಂಬ ಅನುಮಾನ ಹುಟ್ಟಿಕೊಂಡಿದೆ.
ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ರೌಡಿ ಶೀಟರ್ ಅಶೋಕ್ಗೆ ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಆದರೆ ಕಾಂಗ್ರೆಸ್ ಮುಖಂಡನಾಗಿರುವ ಅಶೋಕ್ ಅಲಿಯಾಸ್ ಕುಳ್ಳ ಅಶೋಕ್, ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾರೆ. ಇತ್ತೀಜೆಗೆ ಅಶೋಕ್ ಪುತ್ರ ನೇವಲ್ ಅಶೋಕ್ ಪುಂಡಾಟ ನಡೆಸಿದ್ದ. ಈ ಪ್ರಕರಣ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ಅಶೋಕ್ನ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಅಶೋಕ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಿಂದಿಂದೆ ಓಡಾಡುತ್ತಿದ್ದಾರೆ. ಸಿಎಂ ಹಾಗೂ ಡಿಸಿಎಂ ಹಿಂಬಾಲಕ ಎಂಬ ಕಾರಣಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆಯಾ? ಅಥವಾ ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿದ್ದಾರ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಕ್ರಿಮಿನಲ್ ಹಿನ್ನೆಲೆ ಕಾರಣಕ್ಕೆ ರಾಜ್ಯ ಸರ್ಕಾರ ಹಲವರನ್ನು ಪ್ರಶಸ್ತಿಗೆ ಪರಿಗಣಿಸದೆ ಕೈ ಬಿಟ್ಟಿದೆ. ಆದರೆ ಅಶೋಕ್ಗೆ ಪ್ರಶಕ್ತಿ ಸಿಕ್ಕಿದ್ದು ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ.
ಇದನ್ನೂ ಓದಿ: ಮೈಸೂರು: ಕನ್ನಡ ರಾಜ್ಯೋತ್ಸವ ದಿನ ಅನ್ನದಾನ ವಿಚಾರವಾಗಿ ಗಲಾಟೆ; ಪುರಸಭೆ ಸದಸ್ಯನ ಮೇಲೆ ಹಲ್ಲೆ
ಮೈಸೂರಿನಲ್ಲಿ ನ. 1ರಂದು ಸಂಜೆ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಿಲ್ಲಾಡಳಿತದ ವತಿಯಿಂದ ನಗರದ ಓವೆಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ 52 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ 17 ಮಂದಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:45 am, Mon, 20 November 23