ಮತದಾನ ಮಾಡಲು ಬಂದ ಶಾಸಕರ ಜೊತೆ ಪೊಲೀಸರ ಅನುಚಿತ ವರ್ತನೆ?
ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಮತದಾನ ಮಾಡಲು ಸ್ವಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರ ವಿರುದ್ಧ ಅನುಚಿತ ವರ್ತನೆ ಆರೋಪ ಕೇಳಿಬಂದಿದೆ. ಹುಣಸೂರು ಕ್ಷೇತ್ರದ ಹೊಸ ರಾಮೇನಹಳ್ಳಿಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಮತದಾನ ಮಾಡಿದ್ದಾರೆ. ಮತಗಟ್ಟೆಯಿಂದ ಹೊರಬಂದು ಕಾರ್ಯಕರ್ತರ ಜೊತೆ ಮಾತನಾಡುತ್ತಿದ್ದಾಗ ಶಾಸಕರೊಂದಿಗೆ ಎಸ್ಐ ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸರ್ಕಾರದಿಂದ ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಂಡಿದ್ದಾರೆ. ಶಾಸಕರೊಬ್ಬರು ಮತಗಟ್ಟೆಗೆ ಆಗಮಿಸಿದ್ರೂ ಮುಕ್ತ ಮತದಾನಕ್ಕೆ ಅವಕಾಶ ಕೊಟ್ಟಿಲ್ಲ. ನನ್ನ ಸ್ವಗ್ರಾಮದಲ್ಲೇ ಪೊಲೀಸರು ತಡೆ […]
ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಮತದಾನ ಮಾಡಲು ಸ್ವಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರ ವಿರುದ್ಧ ಅನುಚಿತ ವರ್ತನೆ ಆರೋಪ ಕೇಳಿಬಂದಿದೆ.
ಹುಣಸೂರು ಕ್ಷೇತ್ರದ ಹೊಸ ರಾಮೇನಹಳ್ಳಿಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಮತದಾನ ಮಾಡಿದ್ದಾರೆ. ಮತಗಟ್ಟೆಯಿಂದ ಹೊರಬಂದು ಕಾರ್ಯಕರ್ತರ ಜೊತೆ ಮಾತನಾಡುತ್ತಿದ್ದಾಗ ಶಾಸಕರೊಂದಿಗೆ ಎಸ್ಐ ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಸರ್ಕಾರದಿಂದ ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಂಡಿದ್ದಾರೆ. ಶಾಸಕರೊಬ್ಬರು ಮತಗಟ್ಟೆಗೆ ಆಗಮಿಸಿದ್ರೂ ಮುಕ್ತ ಮತದಾನಕ್ಕೆ ಅವಕಾಶ ಕೊಟ್ಟಿಲ್ಲ. ನನ್ನ ಸ್ವಗ್ರಾಮದಲ್ಲೇ ಪೊಲೀಸರು ತಡೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಪೊಲೀಸರ ವರ್ತನೆಗೆ ಶಾಸಕ ಅನಿಲ್ ಚಿಕ್ಕಮಾದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಘಟನೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.