Karnataka Band: ಸೆ.27ಕ್ಕೆ ಕರ್ನಾಟಕ ಬಂದ್! ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಬೆಂಬಲ

ದೇಶದಲ್ಲಿ ಆಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಜನಸಾಮಾನ್ಯರ ಜೀವನದ ಮೇಲೆ ಹೊಡೆತ ಬಿದ್ದಿದೆ. ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಬೇಕೆಂದರ ಆಗ್ರಹಿಸಿ ಪ್ರತಿಭಟನೆ ನಡೆಸುತ್ತೇವೆ.

Karnataka Band: ಸೆ.27ಕ್ಕೆ ಕರ್ನಾಟಕ ಬಂದ್! ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಬೆಂಬಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Sep 11, 2021 | 1:00 PM

ಮೈಸೂರು: ಸೆಪ್ಟೆಂಬರ್ 27ಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್​ಗೆ (Karnataka Band) ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಬೆಂಬಲ ನೀಡುತ್ತಿದೆ. ಕೇಂದ್ರದ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು(Farm Laws) ವಿರೋಧಿಸಿ ಸೆ.27ಕ್ಕೆ ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್, ದೇಶದಲ್ಲಿ ಆಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಜನಸಾಮಾನ್ಯರ ಜೀವನದ ಮೇಲೆ ಹೊಡೆತ ಬಿದ್ದಿದೆ. ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಬೇಕು. ಕಬ್ಬು ಬೆಳೆಗಾರಿಗೆ ನ್ಯಾಯ ಸಿಗಬೇಕು. ಕಬ್ಬಿನ ಬೆಲೆ ಪರಿಷ್ಕರಣೆ ಆಗಬೇಕಿದೆ. ಈ ರೀತಿ ಎಲ್ಲಾ ವಿಚಾರಗಳಿಂದ ಬಂದ್​ಗೆ ಬೆಂಬಲ ನೀಡಲಾಗುತ್ತಿದೆ. ಆನೇಕ ಸಂಘಟನೆಗಳು ಬಂದ್​ಗೆ ಬೆಂಬಲ‌ ನೀಡಿವೆ ಎಂದು ಕುರುಬೂರು ಶಾಂತಕುಮಾರ್ ಹೇಳಿಕೆ ನೀಡಿದ್ದಾರೆ.

ಇನ್ನು ಸೆಪ್ಟೆಂಬರ್ 13ರಂದು ರೈತರಿಂದ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಸೆಪ್ಟೆಂಬರ್ 6ಕ್ಕೆ ಪ್ರಕಟಿಸಿದ್ದಾರೆ. ಈಗಾಗಲೇ ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಯ ಬಗ್ಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯನ್ನು ತಡೆಹಿಡಿಯುವಂತೆ ನಿರ್ದೇಶನ ನೀಡಿದೆ. ಹೀಗಾಗಿ ಕರ್ನಾಟಕ ಸರ್ಕಾರ ಇದನ್ನು ಪಾಲನೆ ಮಾಡಬೇಕು. ರಾಜ್ಯ ಜಾರಿಗೊಳಿಸಿರುವ ಭೂ ಸುಧಾರಣಾ ಕಾಯ್ದೆ, ಕೃಷಿ ಮಾರುಕಟ್ಟೆ ಕಾಯ್ದೆ ಭೂಸ್ವಾಧೀನ ಕಾಯ್ದೆ ಕಾನೂನು ತಡೆಹಿಡಿಯಬೇಕು ಅಂತಾ ಆಗ್ರಹಿಸಿ ಕೋಡಿಹಳ್ಳಿ ನೇತೃತ್ವದಲ್ಲಿ ರೈತ ಸಂಘ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದೆ.

ರೈತರ ಹೆಸರಿನಲ್ಲಿ ಮೋಸ ಮಾಡಿರೋದು ಇಡೀ ದೇಶದಲ್ಲಿ ಕರ್ನಾಟಕ ಸರ್ಕಾರ ಮಾತ್ರ ಎಂದು ಕಿಡಿಕಾರಿರುವ ಕೋಡಿಹಳ್ಳಿ ಚಂದ್ರಶೇಖರ್, ಬೊಮ್ಮಾಯಿಯವರು ಬಿಎಸ್ ಯಡಿಯೂರಪ್ಪ ಅವರಂತೆ ಧೋರಣೆ ಮುಂದುವರೆಸಿದರೆ ನಮ್ಮ ಹೋರಾಟ ಎದುರಿಸಬೇಕಾಗುತ್ತದೆ. ಸೆಪ್ಟೆಂಬರ್ 27 ಭಾರತ್ ಬಂದ್ ಇದೆ. ಆ ದಿನ ನಾವು ಕರ್ನಾಟಕ ಬಂದ್ ಮಾಡುತ್ತೀವಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಕಲಬುರಗಿ: ಜೆಡಿಎಸ್​​ ಮನವೊಲಿಸುವ ಜವಾಬ್ದಾರಿ ಸಿಎಂ ಬೊಮ್ಮಾಯಿ ಹೆಗಲಿಗೆ; ಪಾಲಿಕೆ ಕೈ ತಪ್ಪುವ ಆತಂಕದಲ್ಲಿ ಕಾಂಗ್ರೆಸ್​

ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತೆ, ಹೀಗಾಗಿ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ; ಬಿ ಸಿ ನಾಗೇಶ್

(Karnataka Band which is to be held on September 27th Supported by Karnataka State Farmers Union)

Published On - 12:48 pm, Sat, 11 September 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ