ಬಿಜೆಪಿ ಎಂಎಲ್ಎ ಟಿಕೆಟ್​​ ವಂಚನೆ: ಇದರಲ್ಲಿ 185 ಕೋಟಿ ರೂ. ವ್ಯವಹಾರ ಆಗಿದೆ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ

ಮೈಸೂರು ಭಾಗದಲ್ಲೂ ಇಬ್ಬರು ಹಣ ಕೊಟ್ಟು ಮೋಸಹೋಗಿದ್ದಾರೆ. 9 ಜನರ ತಂಡದಿಂದ ಮೋಸದ ಎಸಗಲಾಗಿದೆ. ಇವರೆಲ್ಲಾ ಬಿಜೆಪಿ ಹಾಗೂ ಆರ್​​ಎಸ್​​ಎಸ್​​ನ ಕಾರ್ಯಕರ್ತರು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆರೋಪಸಿದರು.

ಬಿಜೆಪಿ ಎಂಎಲ್ಎ ಟಿಕೆಟ್​​ ವಂಚನೆ: ಇದರಲ್ಲಿ 185 ಕೋಟಿ ರೂ. ವ್ಯವಹಾರ ಆಗಿದೆ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ
ಕೆಪಿಸಿಸಿ ವಕ್ತಾರ ಎಂ ಲಕ್ಣ್ಮಣ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on: Sep 19, 2023 | 2:20 PM

ಮೈಸೂರು ಸೆ.19: ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ (Chaitra Kundapura) ಪಕ್ರರಣಕ್ಕೆ ಸಂಬಂಧಿಸಿದಂತೆ ಇವರ ಹಿಂದೆ ಇರುವ ಗುಂಪು ಯಾವುದು?, ಎಷ್ಟು ಹಣ ಪಡೆದಿದ್ದಾರೆ, ಯಾರಿಗೆ ಕೊಟ್ಟಿದ್ದಾರೆ ಎಂಬುವುದರ ಬಗ್ಗೆ ಇನ್ನೂ ಎರಡು ದಿನದಲ್ಲಿ ಪೋಲೀಸರು ತಿಳಿಸುತ್ತಾರೆ. ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಜನಕ್ಕೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ. 40 ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. 185 ಕೋಟಿಯ ವ್ಯವಹಾರ ಇಲ್ಲಿ ಆಗಿದೆ. ಟಿಕೆಟ್ ನೀಡಿ ಕೋಟ್ಯಾಂತರ ಹಣ ಪಡೆಯಲಾಗಿದೆ ಎಂದು ಮೈಸೂರಿನಲ್ಲಿ ಕೆಪಿಸಿಸಿ (KPCC) ವಕ್ತಾರ ಎಂ ಲಕ್ಣ್ಮಣ (M Lakshman) ಸ್ಪೋಟಕ ಅಂಶ ಬಹಿರಂಗಪಡಿಸಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೈಸೂರು ಭಾಗದಲ್ಲೂ ಇಬ್ಬರು ಹಣ ಕೊಟ್ಟು ಮೋಸಹೋಗಿದ್ದಾರೆ. 9 ಜನರ ತಂಡದಿಂದ ಮೋಸದ ಎಸಗಲಾಗಿದೆ. ಇವರೆಲ್ಲಾ ಬಿಜೆಪಿ ಹಾಗೂ ಆರ್​​ಎಸ್​​ಎಸ್​​ನ ಕಾರ್ಯಕರ್ತರು. ಬಿಜೆಪಿ ಹರಿಶ್ಚಂದ್ರನ ಮೊಮ್ಮಕ್ಕಳು ಅನ್ನುತ್ತಾರೆ. ಇವರ ಯೋಗ್ಯತೆ ಏನು ಅನ್ನೋದು ಬಹಿರಂಗಪಡಿಸಬೇಕು ಎಂದು ವಾಗ್ದಾಳಿ ಮಾಡಿದರು.

ಚೈತ್ರಾ ಕುಂದಾಪುರಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ನೇರ ಸಂಪರ್ಕವಿದೆ. ಮಾಜಿ ಸಚಿವ ಸಿ.ಟಿ ರವಿ, ಮಾಜಿ ಸಿಎಂ ಬಿಎಸ್​ಯಡಿಯೂರಪ್ಪ, ಚಿಂತಕ ಚಕ್ರವರ್ತಿ ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಅನ್ನೋದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಪಿಎಸ್‌ಐ ಹಗರಣಕ್ಕೂ ಚೈತ್ರಾಗೂ ಸಂಬಂಧವಿದೆಯಾ ಎಂಬುವುದರ ಬಗ್ಗೆ ತನಿಖೆಯಾಗಬೇಕು. ಚೈತ್ರಾ ಕುಂದಾಪುರ ಪಿಎಸ್‌ಐ ಸೇರಿದಂತೆ ನಾಲ್ಕಕ್ಕೂ ಹೆಚ್ಚು ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ. ಚೈತ್ರಾ ಕುಂದಾಪುರಗೆ ಜೈಲಿನಲ್ಲಿರುವ ಕೆಲವರ ಸಂಪರ್ಕ ಇದೆ. ಈ ಬಗ್ಗೆ ನಮ್ಮ ಸರ್ಕಾರ ಪ್ರಾಮಾಣಿಕ ತನಿಖೆ ಮಾಡಿಸುತ್ತದೆ ಎಂದರು.

ಇದನ್ನೂ ಓದಿ: ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್, ದೊಡ್ಡವರ ಹೆಸರು ಹೊರಬರುತ್ತಾ?

ಲೋಕಸಭಾ ಚುನಾವಣೆ ಸಂಬಂಧ ಬಿಎಸ್​​ ಯಡಿಯೂರಪ್ಪ, ಕೆಎಸ್​​ ಈಶ್ವರಪ್ಪ ಮತ್ತು ಗೋವಿಂದ ಕಾರಜೋಳ ರಾಜ್ಯ ಪ್ರವಾಸ ಮಾಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು ಇದು ರಾಜಕೀಯ ನಿವೃತ್ತರ ಕಮಿಟಿ. ಇವರು ಡಿಕೆ ಶಿವಕುಮಾರ್ ವಿರುದ್ಧ ರಣಕಹಳೆ ಅಂತಿದ್ದಾರೆ. ಇದರಲ್ಲಿ ಇರುವವರೆಲ್ಲರೂ ಕಳಂಕಿತರೆ. ಬಿಎಸ್ ಯಡಿಯೂರಪ್ಪ ಚೆಕ್ ಮೂಲಕ ಹಣ ಪಡೆದವರು, ಕೆ ಎಸ್ ಈಶ್ವರಪ್ಪ ಗುತ್ತಿಗೆದಾರರಿಂದ ಹಣ ಪಡೆದ ಆರೋಪಿ, ಕಟ್ಟಾ ಸುಬ್ರಮಣ್ಯ ನಾಯ್ಡು ಮೇಲೂ ಭ್ರಷ್ಟಾಚಾರದ ಆರೋಪವಿದೆ. ರಾಜ್ಯದಲ್ಲಿ ಬರ ಇದೆ. ಬಿಎಸ್​ ಯಡಿಯೂರಪ್ಪ ಅವರಿಗೆ ಮಾನ ಮರ್ಯಾದೆ ಇದೆಯಾ? ಬಿಎಸ್​ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ಸೀನಿಯರ್. ನೀವು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ಹೊರಟಿದ್ದೀರಿ, ಬಿಜೆಪಿಯಲ್ಲಿ ಮೋದಿ ಬಿಟ್ಟು ಪ್ರಧಾನಿ ಆಗಲು ಬೇರೆ ಗಂಡಸರು ಇಲ್ಲವಾ? ಎಂದು ಪ್ರಶ್ನಿಸಿದರು.

ರಾಜ್ಯದ ಜಲಾಶಯದಲ್ಲಿ 42 ಟಿಎಂಸಿ ನೀರು ಇದೆ. ಇದರಲ್ಲಿ ಬೆಂಗಳೂರಿನ ಕುಡಿಯುವ ನೀರಿಗೆ 24 ಟಿಎಂಸಿ ಬೇಕಾಗಿದೆ. 25 ಟಿಎಂಸಿ ಮೈಸೂರು ಭಾಗಕ್ಕೆ ಬೇಕಾಗಿದೆ. 2024 ಜೂನ್‌ವರೆಗೂ ಇಷ್ಟು ನೀರು ಕುಡಿಯಲು ಬೇಕು. ನಾವು‌ ತಮಿಳುನಾಡಿಗೆ ನೀರು ಬಿಟ್ಟಿಲ್ಲ. ನಾವು ನೀರು ಬಿಟ್ಟಿರುವುದು ಗದ್ದೆಗಳಿಗೆ. ಸೆ.8 ರಂದೇ ನೀರು ಬಂದ್ ಮಾಡಲಾಗಿದೆ. ಈಗ ಬಿಟ್ಟಿರುವ ನೀರು ಕಾಲುವೆಗಳಿಗೆ ಹೋಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್