
ಮೈಸೂರು: ಸಿಎಂ ತವರು ಜಿಲ್ಲೆ ಮೈಸೂರಿಗೆ ಬಜೆಟ್‌ನಲ್ಲಿ ಹೆಚ್ಚಿನ ಆಧ್ಯತೆ ನೀಡಲಾಗುತ್ತೆ ಎಂಬ ನಿರೀಕ್ಷೆ ಇತ್ತು. ಆದ್ರೆ ನಿರೀಕ್ಷೆಯಂತೆ ಬಜೆಟ್‌ನಲ್ಲಿ(Karnataka Budget 2023) ಹೆಚ್ಚಿನ ಆಧ್ಯತೆ ಸಿಕ್ಕಿಲ್ಲ ಎಂಬ ಅಸಮಾಧಾನದ ಕೂಗು ಕೇಳಿ ಬಂದಿದೆ. ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ ವಹಿಸಿದ್ದು, ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು ಸೇರಿದಂತೆ ಸಿಎಂ ಸಿದ್ದರಾಮಯ್ಯನವರು(Siddaramaiah) ಕೆಲವೊಂದು ಕೊಡುಗೆಗಳನ್ನು ನೀಡಿದ್ದಾರೆ. ಆದರೆ, ಬಹುದಿನಗಳಿಂದ ಇದ್ದ ಕೆಲವು ಪ್ರಸ್ತಾವನೆಗೆ ಈ ಬಾರಿಯೂ ಬಜೆಟ್ ನಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಇದು ಮೈಸೂರು ಜನರಿಗೆ ಕೊಂಚ ಬೇಸರ ತಂದಿದೆ.
ರಾಜ್ಯ ಬಜೆಟ್ ಮೈಸೂರು ಯೋಜನೆ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣ ಗೌಡ ಅಸಮಾಧಾನ ಹೊರ ಹಾಕಿದ್ದಾರೆ. 2023-24 ಬಜೆಟ್‌ನಲ್ಲಿ ಯಾವುದೇ ಹೊಸ ತೆರಿಗೆಗಳು ಇಲ್ಲ. ಜನಸಾಮಾನ್ಯನಿಗೆ ಸೇರಿದಂತೆ ಯಾರಿಗೂ ಹೊರೆಯಾಗದ ನೂತನ ಬಜೆಟ್ ಸ್ವಾಗತಾರ್ಹ. ಆದರೆ ಪ್ರವಾಸೋದ್ಯಮ ಕ್ಷೇತ್ರಕ್ಕೆ ಏನೂ ಅನುದಾನ ನೀಡದೆ ಕಡೆಗಣಿಸಿದ್ದಾರೆ ಎಂದು ನಾರಾಯಣ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ಅಭಿವೃದ್ದಿಗೆ ಆದ್ಯತೆ ಇಲ್ಲವೇ ಇಲ್ಲಂತಾಗಿದೆ. ಯಥಾಸ್ಥಿತಿ ಆಯವ್ಯಯ ಕಾಪಾಡಲಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣಗೌಡ ಬೇಸರ ಹೊರ ಹಾಕಿದ್ದಾರೆ.
ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ