ನವೆಂಬರ್​ನಲ್ಲಿ ಜಾತಿ ಜನಗಣತಿ ವರದಿ ನನ್ನ ಕೈ ಸೇರಬಹುದು: ಸಿದ್ದರಾಮಯ್ಯ

| Updated By: Rakesh Nayak Manchi

Updated on: Oct 07, 2023 | 12:50 PM

ಜಾತಿ ಗಣತಿ ವಿಚಾರವಾಗಿ ಮತ್ತೆ ಹೆಚ್​ಡಿ ಕುಮಾರಸ್ವಾಮಿ ಅವರತ್ತ ಬೊಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ, ಕಾಂತರಾಜು ಅಧ್ಯಕ್ಷರಾಗಿದ್ದಾಗ ಕುಮಾರಸ್ವಾಮಿ ಅವರಿಗೆ ವರದಿ ನೀಡಲಾಗಿತ್ತು. ಆದರೆ ಅವರು ಸ್ವೀಕರಿಸಿಲ್ಲ. ಹೀಗಾಗಿ ಹೊಸ ಅಧ್ಯಕ್ಷರಿಗೆ ಕಾಂತರಾಜು ವರದಿ ನೀಡಲು ಸೂಚಿಸಿದ್ದು, ನವೆಂಬರ್ ತಿಂಗಳಲ್ಲಿ ವರದಿ ನನ್ನ ಕೈ ಸೇರಬಹುದು ಎಂದಿದ್ದಾರೆ.

ನವೆಂಬರ್​ನಲ್ಲಿ ಜಾತಿ ಜನಗಣತಿ ವರದಿ ನನ್ನ ಕೈ ಸೇರಬಹುದು: ಸಿದ್ದರಾಮಯ್ಯ
ಜಾತಿ ಗಣತಿ ವಿಚಾರವಾಗಿ ಮತ್ತೆ ಹೆಚ್​ಡಿ ಕುಮಾರಸ್ವಾಮಿ ಅವರತ್ತ ಬೊಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ
Follow us on

ಮೈಸೂರು, ಅ.7: ಜಾತಿ ಜನಗಣತಿ (Caste Census) ವಿಚಾರವಾಗಿ ಮತ್ತೆ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರತ್ತ ಬೊಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಕಾಂತರಾಜು ಅಧ್ಯಕ್ಷರಾಗಿದ್ದಾಗ ಕುಮಾರಸ್ವಾಮಿ ಅವರಿಗೆ ವರದಿ ನೀಡಲಾಗಿತ್ತು. ಆದರೆ ಅವರು ಸ್ವೀಕರಿಸಿಲ್ಲ. ಹೀಗಾಗಿ ಹೊಸ ಅಧ್ಯಕ್ಷರಿಗೆ ಕಾಂತರಾಜು ವರದಿ ನೀಡಲು ಸೂಚಿಸಿದ್ದು, ನವೆಂಬರ್ ತಿಂಗಳಲ್ಲಿ ವರದಿ ನನ್ನ ಕೈ ಸೇರಬಹುದು ಎಂದಿದ್ದಾರೆ.

ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​ನಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಲಭ್ಯವಾದ ಬಳಿಕ ಪರಿಶೀಲಿಸಿ ತೀರ್ಮಾನ ಮಾಡಲಾಗುವುದು. ಸಮಿತಿ ಅಧ್ಯಕ್ಷರು ಬದಲಾಗಿದ್ದಾರೆ. ಕಾಂತರಾಜು ಅಧ್ಯಕ್ಷರಾಗಿದ್ದಾಗ ಕುಮಾರಸ್ವಾಮಿ ವರದಿ ನೀಡಿದ್ದರು. ಆದರೆ ಕುಮಾರಸ್ವಾಮಿ ಜಾತಿ ಗಣತಿ ವರದಿ ಸ್ವೀಕರಿಸಲಿಲ್ಲ ಎಂದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆ ವಿರೋಧಿಸಲು ವಿಪಕ್ಷ ಬಿಜೆಪಿ ಪ್ಲಾನ್

ಹೊಸ ಅಧ್ಯಕ್ಷರಿಗೆ ಕಾಂತರಾಜು ವರದಿ ನೀಡಲು ಸೂಚಿಸಿದ್ದೇನೆ. ಹೀಗಾಗಿ ಅವರು ನವೆಂಬರ್​ನಲ್ಲಿ ಜಾತಿ ಗಣತಿ ವರದಿ ಕೊಡುತ್ತಾರೆ. ಜಾತಿ ಗಣತಿ ಸಮಾಜಕ್ಕೆ ಮಾರಕವಲ್ಲ, ಅದು ಸಮಾಜವನ್ನು ವಿಭಜಿಸುವುದಿಲ್ಲ. ಯಾವ ಸಮುದಾಯ ಎಷ್ಟಿದೆ ಎಂಬುದು ಅಂಕಿ ಅಂಶಗಳು ಸರ್ಕಾರಕ್ಕೆ ಬೇಕು. ಯೋಜನೆಗಳನ್ನು ಸಿದ್ದಪಡಿಸಲು ಈ ಯೋಜನೆಗಳು ಅವಶ್ಯಕ. ಆರ್ಥಿಕಾವಾಗಿ ಹಿಂದುಳಿದವರಿಗೆ ಅಭಿವೃದ್ಧಿ ಮಾಡಲು ಜನಗಣತಿ ಅವಶ್ಯಕವಾಗಲಿದೆ ಎಂದರು.

4,500 ಕೋಟಿ ರೂ. ಬರ ಪರಿಹಾರ ಕೇಳಿದ್ದೇವೆ

ಹಲವು ಜಿಲ್ಲೆಗಳಲ್ಲಿ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಖುದ್ದು ಭೇಟಿ ಮಾಡಿ ಸಮಸ್ಯೆ ಆಲಿಸಿ ಅಂತಾ ಕೇಂದ್ರದ ಅಧಿಕಾರಿಗಳಿಗೆ ನಾನು ಕೇಳಿಕೊಂಡಿದ್ದೇನೆ. ಬರ ಪ್ರವಾಸದ ಬಗ್ಗೆ ಕೇಂದ್ರ ಅಧಿಕಾರಿಗಳೇ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆ ಕಡೆ ಬನ್ನಿ, ಈ ಕಡೆ ಬನ್ನಿ ಅಂತಾ ನಾನು ನಿರ್ದೇಶನ ಮಾಡಲು ಆಗಲ್ಲ ಎಂದರು.

ಕೇಂದ್ರದ ಬಳಿ 4,500 ಕೋಟಿ ರೂ. ಬರ ಪರಿಹಾರ ಕೇಳಿದ್ದೇವೆ. ಕೇಂದ್ರ ತಂಡದ ವರದಿ ಆಧರಿಸಿ ಪರಿಹಾರ ಬಗ್ಗೆ ತೀರ್ಮಾನ ಆಗುತ್ತದೆ. ಬರಕ್ಕೂ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಗೆ ಯಾವ ಸಂಬಂಧ ಇಲ್ಲ. ಬರದ ಪರಿಸ್ಥಿತಿ ಇದ್ದರೂ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಎಂದರು.

ಹೊಸದಾಗಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಿಲ್ಲ: ಸಿಎಂ

ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಹೊಸ ಬಾರ್​ ಲೈಸೆನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಡಿ.ಕೆ.ಶಿವಕುಮಾರ್ ಎಲ್ಲೂ ಹೊಸ ಲೈಸೆನ್ಸ್ ಕೊಡುತ್ತೇವೆ ಎಂದು ಹೇಳಿಲ್ಲ. ಹೊಸ ಬಾರ್​ ಓಪನ್​​ಗೆ ಲೈಸೆನ್ಸ್​ ಕೊಡುತ್ತಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತೇನೆ. ಸದ್ಯಕ್ಕೆ ಈ ವಿಚಾರ ಬಗ್ಗೆ ಚರ್ಚೆ ಆಗೋದು ಬೇಡ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ