Mysuru News: ಮೈಸೂರಿನಲ್ಲಿ ಝೀರೋ ಟ್ರಾಫಿಕ್ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ

|

Updated on: Jun 10, 2023 | 5:47 PM

ಏಕೆ ಝೀರೋ ಟ್ರಾಫಿಕ್‌ ಮಾಡಿದ್ದೀರಿ? ನಿಮಗೆ ಗೊತ್ತಿದೆಯಾ? ಝೀರೋ ಟ್ರಾಫಿಕ್‌ ಬೇಡ ಅಂತಾ ಹೇಳಿದ್ದೆ. ಡೋಂಟ್‌ ಡೂ ದಟ್‌ ಎಂದು ಬಾನೋತ್‌ ಹಾಗೂ ಡಿಸಿಪಿ ಮುತ್ತುರಾಜ್‌ ಉದ್ದೇಶಿಸಿ ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಬಾನೋತ್‌ ಅವರು ಸುಮ್ಮನೆ ಏನೂ ಮಾತನಾಡದೆ ನಿಂತಿದ್ದರು.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸ್ವಕ್ಷೇತ್ರ ವರುಣಾ ಸೇರಿದಂತೆ ಮೈಸೂರಿನ ಹಲವೆಡೆ ಶನಿವಾರ ಪ್ರವಾಸ ಮಾಡಿದ್ದಾರೆ. ಇದೇ ವೇಳೆ ಮೈಸೂರಿನಲ್ಲಿ ಝೀರೋ ಟ್ರಾಫಿಕ್‌ (Zero Traffic) ವ್ಯವಸ್ಥೆ ಕಲ್ಪಿಸಿದ್ದಕ್ಕೆ ಅವರು ಕೋಪಗೊಂಡರು. ಮೈಸೂರು ಏರ್‌ಪೋರ್ಟ್‌ನಿಂದ ಜಿಲ್ಲಾ ಪಂಚಾಯತ್ ಆವರಣಕ್ಕೆ ಬಂದಿದ್ದ ಮುಖ್ಯಮಂತ್ರಿಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಕ್ಕೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್‌ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಏಕೆ ಝೀರೋ ಟ್ರಾಫಿಕ್‌ ಮಾಡಿದ್ದೀರಿ? ನಿಮಗೆ ಗೊತ್ತಿದೆಯಾ? ಝೀರೋ ಟ್ರಾಫಿಕ್‌ ಬೇಡ ಅಂತಾ ಹೇಳಿದ್ದೆ. ಡೋಂಟ್‌ ಡೂ ದಟ್‌ ಎಂದು ಬಾನೋತ್‌ ಹಾಗೂ ಡಿಸಿಪಿ ಮುತ್ತುರಾಜ್‌ ಉದ್ದೇಶಿಸಿ ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಬಾನೋತ್‌ ಅವರು ಸುಮ್ಮನೆ ಏನೂ ಮಾತನಾಡದೆ ನಿಂತಿದ್ದರು.

ಕಾಂಗ್ರೆಸ್ ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಗೆ ತಮ್ಮಿಂದಾಗು ಕಿರಿಕಿರಿಗಳನ್ನು ತಪ್ಪಿಸಲು ಬೆಂಗಳೂರು ನಗರದೊಳಗೆ ಸಂಚಾರ ಮಾಡುವ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಬೇಡ ಎಂದು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ: Zero Traffic: ಬೆಂಗಳೂರಿನಲ್ಲಿ ತಮಗೆ ಜೀರೋ ಟ್ರಾಫಿಕ್ ಬೇಡ ಎಂದ ಸಿದ್ದರಾಮಯ್ಯ

ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ