Crime News: ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ
ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಮತ್ತು ರಾಮ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ಈ ವೇಳೆ ಆರೋಪಿ ರಾಮ್ ಸುರೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ ಯುವಕನ ಬರ್ಬರ ಹತ್ಯೆಯಾಗಿದೆ. ರಾಜಸ್ಥಾನ ಮೂಲದ ಸುರೇಶ್(23) ಮೃತಪಟ್ಟ ದುರ್ದೈವಿ. ಅಂಗ್ರೇಜ್ ರಾಮ್ ಎಂಬ ಆರೋಪಿ ಕಟ್ಟಿಗೆಯಿಂದ ಹೊಡೆದು ಸುರೇಶ್ ಕೊಲೆ ಮಾಡಿದ್ದಾನೆ.
ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಮತ್ತು ರಾಮ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ಜಗಳ ಅತಿಯಾಗಿ ದಪ್ಪವಾದ ಮರದ ಪೀಸ್ ನಿಂದ ಸುರೇಶ್ ಮೇಲೆ ರಾಮ್ ಹಲ್ಲೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲೇ ಕುಸಿದುಬಿದ್ದ ಸುರೇಶ್ ಮೃತಪಟ್ಟಿದ್ದಾನೆ. ಸದ್ಯ ಆರೋಪಿ ಅಂಗ್ರೇಜ್ ರಾಮ್‌ನನ್ನ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷ
ಮೈಸೂರಿನ ಟಿ.ನರಸೀಪುರ ತಾಲೂಕಿನ ಕಾಳಬಸವನಹುಂಡಿ ಗ್ರಾಮದ ಬಳಿ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. 25 ವರ್ಷದ 12 ಕೆಜಿ ತೂಕದ ಮೊಸಳೆ ಕಂಡು ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆ ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: Bangalore: ಪಟಾಕಿ ಮೈಮೇಲೆ ಎಸೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂಳೆ ಮುರಿಯುವಂತೆ ಥಳಿಸಿದ ಗ್ಯಾಂಗ್
ಕೆರೆಯಲ್ಲಿ ಹಾವು ಕಚ್ಚಿ ಮಹಿಳೆ ಸಾವು
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಂಚಿ ಕೆರೆಯಲ್ಲಿ ಹಾವು ಕಚ್ಚಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಹೊಲಕ್ಕೆ ಜಮೀನಿನಲ್ಲಿ ಮೆಕ್ಕೆಜೋಳ ಮುರಿಯಲು ಹೋಗಿದ್ದಾಗ ಮಂಜುಳಾ(37) ಹಾವು ಕಚ್ಚಿದೆ. ತಕ್ಷಣವೇ ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ