AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ

ಡಿಸೆಂಬರ್ 30 ರಂದು ಪ್ರತಿಭಟನೆಗೆ ಕರೆ ನೀಡಿದ ರಾಜ್ಯ ರೈತ ಸಂಘ ಹೇಳಿಕೆ ನೀಡಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಡೇರಿಗಳಲ್ಲಿ ಕಚ್ಚಾ ಹಾಲು ಮಾರಾಟ ನಿಷೇಧಕ್ಕೂ ವಿರೋಧ ವ್ಯಕ್ತವಾಗಿದೆ.

ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 28, 2021 | 6:05 PM

Share

ಮೈಸೂರು: ಜಿಲ್ಲೆಯಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಡಿಸೆಂಬರ್ 30 ರಂದು ಪ್ರತಿಭಟನೆಗೆ ಕರೆ ನೀಡಿದ ರಾಜ್ಯ ರೈತ ಸಂಘ ಹೇಳಿಕೆ ನೀಡಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಡೇರಿಗಳಲ್ಲಿ ಕಚ್ಚಾ ಹಾಲು ಮಾರಾಟ ನಿಷೇಧಕ್ಕೂ ವಿರೋಧ ವ್ಯಕ್ತವಾಗಿದೆ.

ನಂದಿನಿ ತುಪ್ಪ ಕಲಬೆರಕೆ ಆಗಿರೋದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಹಗರಣದಲ್ಲಿ ಹಲವು ಮೈಮುಲ್ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ಇದೆ. ಕೂಡಲೇ ಈ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಅಲ್ಲದೆ ಜನವರಿ 1 ರಿಂದ ಡೈರಿಗಳಲ್ಲಿ ಸ್ಥಳೀಯ ಕಚ್ಚಾ ಹಾಲು ಮಾರಾಟಕ್ಕೆ ನಿಷೇಧ ಮಾಡಿರುವುದು ಖಂಡನೀಯ. ಇದರಿಂದ ಹಾಲು ಉತ್ಪಾದಕರಿಗೆ ಹೊಡೆತ ಬೀಳಲಿದೆ. ಈ ಎಲ್ಲಾ ವಿಚಾರಗಳ ಕುರಿತು ಧರಣಿ ಸತ್ಯಾಗ್ರಹ ನಡೆಸಲು ಮೈಸೂರಿನ ಜಲದರ್ಶಿನಿಯಲ್ಲಿ ನಡೆದ ರೈತ ಸಂಘದ ಮುಖಂಡರ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಹೇಳಿಕೆ ನೀಡಿದ್ದಾರೆ. ಪ್ರಕರಣ ಸಂಬಂಧ DySP ಸುಮಿತ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ನಾಲ್ವರ ಪೈಕಿ ಇಬ್ಬರ ಹೆಸರು ಎಫ್ಐಆರ್​ನಲ್ಲಿ ಉಲ್ಲೇಖ ಮಾಡಲಾಗಿದೆ. ಆರೋಪಿಗಳ ಮಾಹಿತಿ ಆಧರಿಸಿ ಮುಂದಿನ ಕ್ರಮ ಕೈಗೊಳ್ತೇವೆ. ದಾಳಿ ವೇಳೆ 10 ಟನ್ ನಕಲಿ ನಂದಿನಿ ತುಪ್ಪ ಪತ್ತೆಯಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ತುಪ್ಪ ಜಾಲ ಪತ್ತೆ ಪ್ರಕರಣ; ಬೆಂಗಳೂರಿನ ಗೋಡೌನ್‌ ಮೇಲೆ ಮಾದನಾಯಕನಹಳ್ಳಿ ಪೊಲೀಸರು ದಾಳಿ

ಇದನ್ನೂ ಓದಿ: Crime Update: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ, ಬೆಂಗಳೂರಿನಲ್ಲಿ ಮಾದಕ ಹ್ಯಾಶ್​ ಆಯಿಲ್ ವಶಕ್ಕೆ