ದಸರಾ ಆನೆಗಳೊಂದಿಗೆ ಫೋಟೋ ಶೂಟ್, ರೀಲ್ಸ್‌ಗೆ ಬ್ರೇಕ್‌: ಅಧಿಕಾರಿಗಳಿಗೆ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ

ಮೈಸೂರು ಅರಮನೆ ಆವರಣದಲ್ಲಿ ಧನಂಜಯ ಹಾಗೂ ಕಂಜನ್‌ ಆನೆಗಳ ಕಾದಾಟವಾಗಿದ್ದು, ಇದು ಆತಂಕಕ್ಕೆ ಕಾರಣವಾಗಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ದಸರಾ ಆನೆಗಳೊಂದಿಗೆ ಫೋಟೋ ಶೂಟ್‌ ಹಾಗೂ ವಿಡಿಯೋ, ರೀಲ್ಸ್​​ ಮಾಡದಂತೆ ಈಶ್ವರ ಖಂಡ್ರೆ ಖಡಕ್​ ಸೂಚನೆ ನೀಡಿದ್ದಾರೆ.

ದಸರಾ ಆನೆಗಳೊಂದಿಗೆ ಫೋಟೋ ಶೂಟ್, ರೀಲ್ಸ್‌ಗೆ ಬ್ರೇಕ್‌: ಅಧಿಕಾರಿಗಳಿಗೆ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ
ಮೈಸೂರು ದಸರಾ ಆನೆಗಳು
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Sep 23, 2024 | 5:35 PM

ಮೈಸೂರು, (ಸೆಪ್ಟೆಂಬರ್ 23): ಮೂರು ದಿನದ ಹಿಂದೆ ಮೈಸೂರು ದಸರಾ ಆನೆಗಳಾದ ಧನಂಜಯ ಹಾಗೂ ಕಂಜನ್‌ ಆನೆಯ ಕಾದಾಟದ ನಂತರ ಎಚ್ಚೆತ್ತುಕೊಂಡಿರುವ ಕರ್ನಾಟಕ ಅರಣ್ಯ ಇಲಾಖೆ, ಆನೆಗಳ ಬಳಿ ಫೋಟೋ ಶೂಟ್‌, ರೀಲ್ಸ್‌ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೆ ಸಾರ್ವಜನಿಕರು ಆನೆಗಳ ಬಳಿ ದಂತ ಹಿಡಿದುಕೊಂಡು ಫೋಟೋ ಶೂಟ್‌ ಮಾಡಿಸುವುದು, ವಿಡಿಯೋ ಮಾಡಿಕೊಂಡು ರೀಲ್ಸ್‌ಗೆ ಮುಂದಾಗುವಂತ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.

ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದನಾಡಿಗೆ ಬಂದು ಪ್ರಸ್ತುತ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಸಾಕಾನೆಗಳ ಬಳಿ ಫೋಟೋ ಶೂಟ್‌ ಹಾಗೂ ರೀಲ್ಸ್‌ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳೇ ಅವಕಾಶ ನೀಡಿದ್ದಾರೆ. ಇದರಿಂದ ಆನೆಗಳು ವಿಚರಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಂಜನ್‌ ಹಾಗೂ ಧನಂಜನ್‌ ಎನ್ನುವ ಆನೆಗಳ ನಡುವೆ ಕಾದಾಟ ಆಗಲು ಇದೂ ಒಂದು ಕಾರಣವಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪಿಸಿಸಿಎಫ್‌ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮೈಸೂರು ಅರಮನೆ ಆವರಣದಲ್ಲಿ ಗಜ ಗಲಾಟೆ: ನಿಜಕ್ಕೂ ನಡೆದಿದ್ದೇನು? ಇಲ್ಲಿದೆ ಸ್ವಾರಸ್ಯಕರ ಮಾಹಿತಿ

ಅಧಿಕಾರಿಗಳೇ ರೀಲ್ಸ್​ಗೆ ಅವಕಾಶ ನೀಡ್ತಿದ್ದಾರೆ ಎಂಬ ಆರೋಪ ಇದೆ . ಇದರಿಂದ ಆನೆಗಳು ವಿಚಲಿತಗೊಂಡು ಅನುಚಿತವಾಗಿ ವರ್ತಿಸುತ್ತಿವೆ. ಕಾಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟ ಬಗ್ಗೆ ವರದಿಯಿಂದ ತಿಳಿದುಬಂದಿದೆ. ಕಾಂಜನ್​, ಧನಂಜಯ ಆನೆಗಳು ಕಾದಾಟ ಆಗಲು ಇದೂ ಕಾರಣ. ಆನೆಯ ದಂತ, ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿಕೊಳ್ತಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ತಂದಿರುವ ಅನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡಬೇಕು. ಅಲ್ಲಿಯ ತನಕ ಯಾವುದೇ ಅನಾಹುತ ಆಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.

ಸಚಿವ ಈಶ್ವರ್​ ಖಂಡ್ರೆ ಖಡಕ್ ಎಚ್ಚರಿಕೆ

ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದನಾಡಿಗೆ ಬಂದು ಪ್ರಸ್ತುತ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಸಾಕಾನೆಗಳ ಬಳಿ ಫೋಟೋ ಶೂಟ್‌ ಹಾಗೂ ರೀಲ್ಸ್‌ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳೇ ಅವಕಾಶ ನೀಡಿದ್ದಾರೆ. ಇದರಿಂದ ಆನೆಗಳು ವಿಚರಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಂಜನ್‌ ಹಾಗೂ ಧನಂಜನ್‌ ಎನ್ನುವ ಆನೆಗಳ ನಡುವೆ ಕಾದಾಟ ಆಗಲು ಇದೂ ಒಂದು ಕಾರಣವಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪಿಸಿಸಿಎಫ್‌ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ,

ಇದನ್ನೂ ಓದಿ: ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು, ವಿಡಿಯೋ ವೈರಲ್​

ಕೆಲವರು ಆನೆಗಳ ದಂತಗಳನ್ನು ಹಿಡಿದುಕೊಂಡು, ಮತ್ತ ಕೆಲವರು ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿರುವ ಚಿತ್ರಗಳೂ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ಆನೆಗಳನ್ನು ತಂದ ನಂತರ ಸುರಕ್ಷಿತವಾಗಿ ಅವುಗಳನ್ನು ಶಿಬಿರಕ್ಕೆ ಬಿಡುವವರೆಗೂ ಯಾವುದೇ ಅನಾಹುತ ಆಗದಂತೆ ಎಚ್ಚರ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರೀಲ್ಸ್‌ಮಾಡಲು ಅವಕಾಶ ನೀಡಿ ನಿರ್ಲಕ್ಷ್ಯ ತೋರಿರುವ ಅಧಿಕಾರಿ ಹಾಗು ಸಿಬ್ಬಂದಿಗೆ ಸ್ಪಷ್ಟನೆ ನೀಡಬೇಕು. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ