AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಮೈಸೂರು-ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ(ಏಪ್ರಿಲ್ 30) ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ. ಅಲ್ಲದೇ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಮೈಸೂರು-ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದಿಲೀಪ್​, ಚೌಡಹಳ್ಳಿ
| Edited By: |

Updated on:Apr 29, 2024 | 5:16 PM

Share

ಮೈಸೂರು/ಚಾಮರಾನಗರ, (ಏಪ್ರಿಲ್ 29): ಚಾಮರಾನಗರ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್( Srinivas Prasad ) ನಿಧನರಾಗಿದ್ದರಿಂದ ನಾಳೆ (ಏಪ್ರಿಲ್ 30) ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ(Mysuru And Chamarajnagar Districts) ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ. ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024ರಂದು ರಜೆ ಘೋಷಣೆ(government holiday) ಮಾಡಲಾಗಿದೆ. ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ ಎಂದು  ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ  ವಿಜಯ್ ಕುಮಾರ್ ಹೆಚ್​.ಬಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮೃತರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಸಕಲ ಗೌರವಗೊಂದಿಗೆ ನಾಳೆ ಶ್ರೀನಿವಾಸ್ ಅಂತ್ಯಕ್ರಿಯೆ

ಅನಾರೋಗ್ಯದಿಂದ ಬಳಲುತ್ತಿದ್ದ 76 ವರ್ಷದ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್‌ (V Srinivas Prasad) ಭಾನುವಾರ ಮಧ್ಯರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆಮ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಭಾನುವಾರ ಮಧ್ಯರಾತ್ರಿಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ಇನ್ನು ನಾಳೆ (ಏಪ್ರಿಲ್ 30) ಮಧ್ಯಾಹ್ನದ ಬಳಿಕ ಮೈಸೂರಿನಲ್ಲೇ ಬೌದ್ಧಧರ್ಮದ ವಿಧಿವಿಧಾನದಂತೆ ಸಕಲ ಗೌರವಗಳೊಂದಿಗೆ ಶ್ರೀನಿವಾಸ ಪ್ರಸಾದ್​ ಅಂತ್ಯಕ್ರಿಯೆ (cremation) ನಡೆಯಲಿದೆ.

ಇದನ್ನೂ ಓದಿ: V Srinivas prasad Obituary: ಚಾಮರಾಜನಗರದಲ್ಲಿ ಕಮಲ ಅರಳಿಸಿದ ಶ್ರೀನಿವಾಸ ಪ್ರಸಾದ್ ರಾಜಕೀಯ ಪಯಣ ಇಲ್ಲಿದೆ

ರಾಜ್ಯ ಹಾಗೂ ಹೊರರಾಜ್ಯಗಳ ಬೌದ್ಧಭಿಕ್ಕುಗಳಿಂದ ಅಂತಿಮ ವಿಧಿವಿಧಾನ ಕಾರ್ಯಗಳು ನಡೆಯಲಿದ್ದು, ಎಂಟು ಬೌದ್ಧಭಿಕ್ಕುಗಳಿಂದ ಪಂಚಶೀಲತತ್ವ ಬೋಧನೆ, ತ್ರಿಸರಣ ಮೂಲಕ ಅಂತ್ಯಕ್ರಿಯೆ ನಡೆಯಲಿದೆ. ಬೌದ್ಧಧರ್ಮದ ಅನುಯಾಯಿ ಆಗಿದ್ದರಿಂದ ಅಹಿಂಸೆ, ಸತ್ಯದ ಸಂದೇಶದ ಮೂಲಕ ವಿಧಿವಿಧಾನ ನೆರವೇರಿಸಲಾಗುತ್ತೆ ಎಂದು ಟಿವಿ9ಗೆ ಅಂತಾರಾಷ್ಟ್ರೀಯ ಬುದ್ಧ ಭಿಕ್ಕು ಚಾರಿಟೇಬಲ್ ಟ್ರಸ್ಟ್​ ಮಾಹಿತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:14 pm, Mon, 29 April 24

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More