ಗುಣಮಟ್ಟದ ಶಿಕ್ಷಣ ನೀಡುವುದೇ ಬಿಜೆಪಿಯ ಹಿಡನ್ ಅಜೆಂಡಾ: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಮೈಸೂರು ವಿಶ್ವವಿದ್ಯಾಲಯದ ಆಫ್ಘನ್ ವಿದ್ಯಾರ್ಥಿಗಳ ವೀಸಾ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ಬೆಂಬಲಕ್ಕೆ ನಾವು ಸಿದ್ಧರಿದ್ದೇವೆ. ಅಗತ್ಯ ನೆರವು ನೀಡಲು ನಾವು ಸಿದ್ಧ ಎಂದು ತಿಳಿಸಿದರು.

ಗುಣಮಟ್ಟದ ಶಿಕ್ಷಣ ನೀಡುವುದೇ ಬಿಜೆಪಿಯ ಹಿಡನ್ ಅಜೆಂಡಾ: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ
ಡಾ. ಸಿ ಎನ್ ಅಶ್ವತ್ಥ ನಾರಾಯಣ
Follow us
TV9 Web
| Updated By: guruganesh bhat

Updated on: Aug 20, 2021 | 7:49 PM

ಮೈಸೂರು: ಗುಣಮಟ್ಟದ ಶಿಕ್ಷಣ ನೀಡುವುದೇ ಬಿಜೆಪಿಯ ಹಿಡನ್ ಅಜೆಂಡಾ. ಆ ಅಜೆಂಡಾ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (NEP 2020) ಅಳವಡಿಕೆಯಾಗಿದೆ. ಇದಕ್ಕೆ ಕಾಂಗ್ರೆಸ್ ನಾಯಕರು ವಿರೋಧಿಸಿದರೆ ವಿರೋಧಿಸಲಿ. ಕಾಂಗ್ರೆಸ್​ ಪಕ್ಷದವರು ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ ಮಾಡಿದರೆ ನಮ್ಮದೇನೂ ತಕರಾರಿಲ್ಲ. ಬಹಳ ವರ್ಷಗಳ ಬಳಿಕ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ. ಕೆಲವು ಮಾರ್ಪಾಡುಗಳೊಂದಿಗೆ ಕೌಶಲ್ಯಯುತವಾಗಿ ಬದಲಾಗುತ್ತಿವೆ. ಆ ಬದಲಾವಣೆಗಳು ಯುವ ಪೀಳಿಗೆಗೆ ಬಹಳ ಸಹಾಯವಾಗಿವೆ. ತಜ್ಞರ ಅಭಿಪ್ರಾಯ ಸಂಗ್ರಹಿಸಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ (Dr. CN Ashwath Narayan) ತಿಳಿಸಿದರು.

ಮಾನವೀಯತೆ ದೃಷ್ಟಿಯಿಂದ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ನೆರವು ನೀಡುತ್ತೇವೆ ಎಂದು ಮೈಸೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು. ಮೈಸೂರು ವಿಶ್ವವಿದ್ಯಾಲಯದ ಆಫ್ಘನ್ ವಿದ್ಯಾರ್ಥಿಗಳ ವೀಸಾ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ಬೆಂಬಲಕ್ಕೆ ನಾವು ಸಿದ್ಧರಿದ್ದೇವೆ. ಅಗತ್ಯ ನೆರವು ನೀಡಲು ನಾವು ಸಿದ್ಧ ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯಕ್ಕೆ ಬೋಧಕರ ನೇಮಕ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಮುಂದಿನ ದಿನಗಳಲ್ಲಿ ಬೋಧಕರ ನೇಮಕ ಮಾಡಲಾಗುವುದು. ಅತ್ಯಂತ ಪಾರದರ್ಶಕವಾಗಿ ಬೋಧಕರನ್ನು ನೇಮಿಸುತ್ತೇವೆ. ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ ಅತಿಥಿ, ಅರೆಕಾಲಿಕ ಉಪನ್ಯಾಸಕರ ನೇಮಕಕ್ಕೆ ಕ್ರಮಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಉನ್ನತ ಶಿಕ್ಷಣ ವ್ಯವಸ್ಥೆ ಧ್ವಂಸ, ಜಾರಿ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಈ ಕ್ಷಣವೇ ಹಿಂಪಡೆದು ವಿಸ್ತೃತ ಚರ್ಚೆ ನಡೆಸಿದ ಬಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ (Siddaramaiah)  ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವುದೇ ಚರ್ಚೆ ನಡೆಸದೆ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು, ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಾಡಿನ ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP 2020) ತರಾತುರಿಯಲ್ಲಿ ರಾಜ್ಯದ ಮೇಲೆ ಹೇರಬೇಡಿ, ಸಂಬಂಧಿಸಿದ ವಲಯಗಳ ಜನರ ಜೊತೆಗೆ ವಿಸ್ತೃತ ಚರ್ಚೆ ನಡೆಸಿ, ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರ ತೀರ್ಮಾನಿಸಿ ಎಂದು‌ ಹೇಳಿದ್ದೆವು.

ಹಾಗೆ ಮಾಡದೇ ಈ ಅನಾಹುತಕಾರಿ ನೀತಿಯನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೆ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ. ಈ ಆದೇಶದಲ್ಲಿ ಹಲವಾರು ಅಪಾಯಕಾರಿಯಾದ ಅಂಶಗಳಿವೆ; ಬಡವರ, ಮಧ್ಯಮ ವರ್ಗದವರ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯುವ ಕನಸಿಗೆ ನೇರವಾಗಿ ಬೆಂಕಿ ಇಡುವ ಪ್ರಕ್ರಿಯೆಯ ಭಾಗವಾಗಿ ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹೊರಡಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದನ್ನೂ ಓದಿ: 

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಉನ್ನತ ಶಿಕ್ಷಣ ವ್ಯವಸ್ಥೆ ಧ್ವಂಸ, ಜಾರಿ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

NEP: ಅಧಿಕಾರ ಸ್ವೀಕರಿಸಿದ ದಿನವೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅಂಕಿತ ಹಾಕಿದ ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ; ಇಲ್ಲಿದೆ ವಿವರ

(Karnataka Higher Education Minister says Providing Quality Education is the BJPs hidden agenda)

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ