AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!

ಮೇ 16 ರಂದು ಕರ್ನಾಟಕದ ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸಿಡಿಲು ಬಡಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಪಿರಿಯಾಪಟ್ಟಣದ ರೈತ ಮಹಿಳೆ ವಿನೋದಾ ಮತ್ತು ಬಳ್ಳಾರಿಯ ಯುವಕ ಗಾದಿಲಿಂಗಪ್ಪ ಕೃಷಿ ಕೆಲಸ ಮಾಡುತ್ತಿದ್ದಾಗ ದುರಂತಕ್ಕೀಡಾಗಿದ್ದಾರೆ. ಹವಾಮಾನ ಇಲಾಖೆ ಭಾರೀ ಮಳೆ ಮತ್ತು ಗುಡುಗು ಮುನ್ಸೂಚನೆ ನೀಡಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕಂದಾಯ ಇಲಾಖೆ ಮನವಿ ಮಾಡಿದೆ.

ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!
ಸಿಡಿಲಿಗೆ ಮಹಿಳೆ ಸಾವು
ಅಕ್ಷಯ್​ ಪಲ್ಲಮಜಲು​​
|

Updated on: May 16, 2026 | 8:19 PM

Share

ಮೈಸೂರು, ಮೇ.16: ರಾಜ್ಯಾದ್ಯಂತ ಹವಾಮಾನ ವೈಪರೀತ್ಯದ ಬೆನ್ನಲ್ಲೇ ಮಳೆರಾಯನ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಇಂದು (ಮೇ.16) ಸಂಜೆ ಸಂಭವಿಸಿದ ಪ್ರತ್ಯೇಕ ಸಿಡಿಲು ಬಡಿತದ ದುರಂತಗಳಲ್ಲಿ ಓರ್ವ ರೈತ ಮಹಿಳೆ ಹಾಗೂ ಯುವಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಸಿಡಿಲು ಬಡಿದು ಆಲನಹಳ್ಳಿ ನಿವಾಸಿಯಾದ ವಿನೋದಾ ಎಂಬ ರೈತ ಮಹಿಳೆ ಮೃತಪಟ್ಟಿದ್ದಾರೆ. ಇಂದು ಸಂಜೆ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುಗಳನ್ನು ಮಳೆಯಿಂದಾಗಿ ವಾಪಸ್ ಮನೆಗೆ ಕರೆತರಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಸಿಡಿಲಿನ ತೀವ್ರತೆಗೆ ವಿನೋದಾ ಮಾತ್ರವಲ್ಲದೆ ಅವರಿಗೆ ಸೇರಿದ ಎರಡು ಹಸುಗಳು ಕೂಡ ಸ್ಥಳದಲ್ಲೇ ಜೀವ ಕಳೆದುಕೊಂಡಿವೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ: ಆಲಿಕಲ್ಲು ಮಳೆ , ಬಿರುಗಾಳಿಯ ಮುನ್ನೆಚ್ಚರಿಕೆ!

ಸಪೋಟ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ದುರ್ಮರಣ

ಬಳ್ಳಾರಿ ತಾಲೂಕಿನ ಡಿ. ನಾಗನಹಳ್ಳಿ ಗ್ರಾಮದಲ್ಲಿ ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಸಿಡಿಲಿಗೆ ಬಲಿಯಾಗಿದ್ದಾನೆ. ಗಾದಿಲಿಂಗಪ್ಪ (32) ಮೃತಪಟ್ಟ ದುರ್ದೈವಿ. ಇಂದು ಸಂಜೆ ಸಪೋಟ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ಹೊಡೆತಕ್ಕೆ ಸಿಕ್ಕು ಗಾದಿಲಿಂಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹವಾಮಾನ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ನೀಡಿರುವುದರಿಂದ, ಸಾರ್ವಜನಿಕರು ಮಳೆ ಮತ್ತು ಗುಡುಗು ಮುನ್ಸೂಚನೆ ಇರುವಾಗ ಜಮೀನು, ತೋಟ ಅಥವಾ ಮುಕ್ತ ಪ್ರದೇಶಗಳಿಗೆ ಹೋಗದೆ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!