Karnataka MLC Election: ಮುಗಿಯದ ಮೈತ್ರಿ ಮುನಿಸು, ಜೆಡಿಎಸ್​ನಿಂದ ವಿವೇಕಾನಂದಾಗೆ ಬಿ ಫಾರಂ ನೀಡಿದ ದೇವೇಗೌಡ

| Updated By: Ganapathi Sharma

Updated on: May 15, 2024 | 11:30 AM

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಗಳ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಬಿಜೆಪಿ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿದ್ದರೆ, ಇದೀಗ ಜೆಡಿಎಸ್ ಕೂಡ ಅಭ್ಯರ್ಥಿ ಘೋಷಣೆ ಮಾಡಿ ಬಿ ಫಾರಂ ನೀಡಿದೆ. ಇದು ಮೈತ್ರಿ ಮುನಿಸನ್ನು ಎಲ್ಲಿವರೆಗೆ ಒಯ್ಯಲಿದೆ ಎಂಬುದನ್ನು ಕಾದುನೋಡಬೇಕಿದೆ.

Karnataka MLC Election: ಮುಗಿಯದ ಮೈತ್ರಿ ಮುನಿಸು, ಜೆಡಿಎಸ್​ನಿಂದ ವಿವೇಕಾನಂದಾಗೆ ಬಿ ಫಾರಂ ನೀಡಿದ ದೇವೇಗೌಡ
ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿವೇಕಾನಂದಗೆ ಹೆಚ್​ಡಿ ದೇವೇಗೌಡ ಬಿ ಫಾರಂ ನೀಡಿದರು.
Follow us on

ಮೈಸೂರು, ಮೇ 15: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ (Karnataka MLC Election) ಜೆಡಿಎಸ್ (JDS), ಬಿಜೆಪಿ (BJP) ಮೈತ್ರಿಯ ನಡುವಣ ಮುಸುಕಿನ ಗುದ್ದಾಟ ಈಗ ಬಹಿರಂಗವಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ‌ ಇಸಿ ನಿಂಗರಾಜೇಗೌಡಗೆ ಟಿಕೆಟ್ ಫೈನಲ್ ಮಾಡಿ ಹೆಸರು ಘೋಷಣೆ ಮಾಡಿದ್ದರೂ ಜೆಡಿಎಸ್​​ ಕೂಡ ಅಭ್ಯರ್ಥಿ ಘೋಷಣೆ ಮಾಡಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಲಾಗಿದ್ದು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕರಾದ ಜಿಟಿ ದೇವಗೌಡರ ಸಮ್ಮುಖದಲ್ಲಿ ಪಕ್ಷದ ವರಿಷ್ಠ ಹೆಚ್​ಡಿ ದೇವೇಗೌಡ ಬಿ ಫಾರಂ ನೀಡಿದ್ದಾರೆ.

ಬಿಜೆಪಿ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ.

ಜೆಡಿಎಸ್‌ಗೆ ಈ ಕ್ಷೇತ್ರ ಬಿಟ್ಟುಕೊಡುವುದಾಗಿ ಬಿಜೆಪಿ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಮಾಜಿ ಶಾಸಕ ಸಾ.ರಾ. ಮಹೇಶ್ ಸುಳಿವು ನೀಡಿದ್ದರು. ಮೇ 15ಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸುವುದಾಗಿಯೂ ಹೇಳಿದ್ದರು. ಅದರಂತೆಯೇ ಇಂದು ಅಭ್ಯರ್ಥಿಗೆ ಬಿ ಫಾರಂ ನೀಡಲಾಗಿದೆ. ಹೀಗಾಗಿ ಇದೀಗ, ಬಿಜೆಪಿಯ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ.

ಸಾರಾ ಮಹೇಶ್ ಹೇಳಿದ್ದು ನಿಜವೇ ಆಗಿದ್ದಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಬಿಜೆಪಿ ಅಭ್ಯರ್ಥಿ ಘೋಷಣೆಯನ್ನು ವಾಪಸ್ ಪಡೆಯಲಿದೆಯೇ ಎಂಬ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮಧ್ಯೆ ಎಂಎಲ್​​ಸಿ ಚುನಾವಣೆ ಟಿಕೆಟ್ ಹಂಚಿಕೆ ಕಗ್ಗಂಟು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಟಿಕೆಟ್ ಹಂಚಿಕೆ ಗೊಂದಲ

ಒಂದು ವೇಳೆ ಬಿಜೆಪಿ ಹಾಗೂ ಜೆಡಿಎಸ್ ಪ್ರತ್ಯೇಕ ಸ್ಪರ್ಧೆ ನಡೆಸಿದರೆ ಕಾಂಗ್ರೆಸ್ ಪಕ್ಷಕ್ಕೆ ಪ್ರಯೋಜನವಾಗಲಿದೆಯೇ ಎಂಬ ಲೆಕ್ಕಾಚಾರವೂ ಈಗ ಶುರುವಾಗಿದೆ. ಅಂತಿಮವಾಗಿ ಇದು ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಯೂ ಸೃಷ್ಟಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ