ಮೈಸೂರು, ಮೇ.03: ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿದೆ. ಅದರಂತೆ ಇದೀಗ ರೇವಣ್ಣ ಪತ್ನಿ ಭವಾನಿ ರೇವಣ್ಣ ಸಂಬಂಧಿಯಾದ ಸತೀಶ್ ಬಾಬುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೌದು, ಈ ಘಟನೆಗೆ ಸಂಬಂಧಪಟ್ಟಂತೆ ವಿಡಿಯೋದಲ್ಲಿನ ಸಂತ್ರಸ್ತ ಮಹಿಳೆಯಾದ ನನ್ನ ತಾಯಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ರೇವಣ್ಣ, ಸತೀಶ್ ಬಾಬು ವಿರುದ್ದ ಸಂತ್ರಸ್ತೆ ಮಗ ದೂರು ನೀಡಿದ್ದರು. ಈ ಕುರಿತು ಮೈಸೂರು ಜಿಲ್ಲೆ K.R.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿಸಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ದ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದ ಸಂತ್ರಸ್ತೆ, ಅಪರಾಧ ತನಿಖಾ ಇಲಾಖೆಗೆ (CID) ದೂರು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.ಇನ್ನು ಘಟನೆ ಕುರಿತು ಸಂತ್ರಸ್ತೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಜನಪ್ರತಿನಿಧಿಯಾಗಿರುವ ಮಹಿಳೆ, ಶಾಸಕರು ಹಾಗೂ ಸಂಸದರ ಬಳಿ ಕ್ಷೇತ್ರದ ಅಭಿವೃದ್ಧಿ ಕೆಲಸದ ಬಗ್ಗೆ ಚರ್ಚಿಸಲು ಹೋಗಿದ್ದಾಗ ಆರೋಪಿ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಅರೆಸ್ಟ್ ಮಾಡಿಕೊಂಡು ಬರುತ್ತೇವೆ: ಸಿದ್ದರಾಮಯ್ಯ, ಸಿಎಂ
ಹಾಸನ ಮೂಲದ ಮಹಿಳೆ ಪ್ರಜ್ವಲ್ ರೇವಣ್ಣ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಎಸ್ಐಟಿಗೆ ಹೇಳಿಕೆ ನೀಡಿದ್ದರು. ಎಸ್ಐಟಿ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು,ಇದರ ಬೆನ್ನಲೇ ಇದೀಗ ಸಂತ್ರಸ್ತೆ ಪತಿ ಸಿಐಡಿಗೆ ದೂರು ನೀಡಿರುವುದು ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಜಾಸ್ತಿಯಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್ಐಟಿ ನೋಟಿಸ್ ನೀಡಿದೆ. ಆದರೆ ಎಸ್ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ತೆಲೆನೋವಾಗಿದೆ. ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರವೇ ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:22 pm, Fri, 3 May 24