Karnataka Rains: ರಣ ಮಳೆಗೆ ಮೈಸೂರಿನಲ್ಲಿ ಇಬ್ಬರು ಬಲಿ, 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಮೈಸೂರಿನಲ್ಲಿ ಸುರಿದ ಮಳೆಗೆ ಭಾರೀ ಅನಾಹುತಗಳು ಸಂಭವಿಸಿವೆ. ಇಬ್ಬರು ಮಳೆಗೆ ಬಲಿಯಾಗಿದ್ದು ಬಿರುಗಾಳಿ ಸಹಿತ ಮಳೆಗೆ ಹಲವೆಡೆ ಹಾನಿಯಾಗಿದೆ.

Follow us
ಆಯೇಷಾ ಬಾನು
|

Updated on:May 22, 2023 | 7:57 AM

ಮೈಸೂರು: ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗಿದ್ದು ಭಾರೀ ಅನಾಹುತಗಳು ಸಂಭವಿಸಿವೆ(Karnataka Rain). ಮೈಸೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ಹಲವೆಡೆ ಹಾನಿಯಾಗಿದೆ(Mysuru Rain). ಹಾಗೂ ರಸ್ತೆಯಲ್ಲಿ ಕಡಿದು ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಯುವಕ ಮೃತಪಟ್ಟಿದ್ದಾನೆ(Rain Death). ಮತ್ತೊಂದೆಡೆ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾನೆ. ಹೀಗೆ ಮೈಸೂರಿನಲ್ಲಿ ಮಳೆಯಿಂದ ಭಾರೀ ಅನಾಹುತಗಳು ಸಂಭವಿಸಿವೆ.

ಮಳೆಗೆ ಇಬ್ಬರು ಬಲಿ

ಪಿರಿಯಾಪಟ್ಟಣ ತಾಲೂಕಿನ ಬಾರಸೆ ಗ್ರಾಮದಲ್ಲಿ ರಸ್ತೆಯಲ್ಲಿ ಕಡಿದು ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಸ್ವಾಮಿ(18) ಎಂಬ ಯುವಕ ಸಾವನ್ನಪ್ಪಿದ್ದು ಹರೀಶ್ ಹಾಗೂ ಸಂಜಯ್‌ ಎಂಬ ಇಬ್ಬರಿಗೆ ಗಾಯಗಳಾಗಿವೆ. ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮತ್ತೊಂದೆಡೆ ಹುಣಸೂರು ತಾಲೂಕಿನ ಮಂಟಿಕೊಪ್ಪಲು ಗ್ರಾಮದಲ್ಲಿ ಸಿಡಿಲು ಬಡಿದು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಹರೀಶ್ (42) ಮೃತಪಟ್ಟಿದ್ದಾರೆ. ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗಿದ್ದು ಜಮೀನಿನಲ್ಲಿದ್ದ ಗುಡಿಸಲಿನ ಬಳಿ ರೈತ ಹರೀಶ್ ಆಶ್ರಯ ಪಡೆದಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೆಲವೇ ಗಂಟೆ ಸುರಿದ ಮಳೆಗೆ ಬೆಂಗಳೂರು ತತ್ತರ; ಎಲ್ಲೆಲ್ಲಿ ಎಷ್ಟು ಪ್ರಮಾಣ ಮಳೆ ಸುರಿದಿದೆ? ಇಲ್ಲಿದೆ ವಿವರ

ಮಳೆಗೆ 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಹುಣಸೂರು ತಾಲೂಕಿನಲ್ಲಿ ಗಾಳಿ ಮಳೆಗೆ 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಸಂಭವಿಸಿದೆ. ಗಾಳಿಗೆ ಮನೆಯ ಮೇಲ್ಚಾವಣಿಗೆ ಹಾಕಿದ್ದ ಶೀಟ್​​ಗಳು ಹಾರಿ ಹೋಗಿವೆ. ಗಾಳಿ ಮಳೆಗೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಮರಗಳು ಧರೆಗುರುಳಿದ ಪರಿಣಾಮ ವಿದ್ಯುತ್, ರಸ್ತೆ​ ಸಂಪರ್ಕ ಬಂದ್​ ಆಗಿದೆ. ಹನಗೋಡು ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹನಗೋಡು ಮುಖ್ಯ ರಸ್ತೆಯಲ್ಲಿ ಮರಗಳು ಬಿದ್ದು ರಸ್ತೆ ಸಂಚಾರ ಬಂದ್​ ಆಗಿದೆ. ಹೊಸಕೋಟೆ ಗೇಟ್ ಬಳಿ ಬೃಹತ್ ಮರ ಉರುಳಿ ಸಂಚಾರ ಬಂದ್ ಆಗಿದೆ. ಹನಗೋಡು-ಕಿರಂಗೂರು ಹರಳಹಳ್ಳಿ ರಸ್ತೆ ಜಲಾವೃತಗೊಂಡಿದ್ದು ಸಂಚಾರ ಸ್ಥಗಿತಗೊಂಡಿದೆ. ಕಿರಂಗೂರಿನಲ್ಲಿ ಮಳೆಯಿಂದಾಗಿ 4 ಎಕರೆಯಲ್ಲಿ ಬೆಳೆದಿದ್ದ ಜೋಳ ನಾಶವಾಗಿದೆ. ಹಿಂಡಗುಡ್ಲುವಿನಲ್ಲಿ ಮನೆಗೆ ನೀರು ನುಗ್ಗಿ ದವಸ, ಧಾನ್ಯ, ವಸ್ತುಗಳು ನಾಶವಾಗಿವೆ. ಚನ್ನಸೋಗೆ ಗ್ರಾಮದಲ್ಲಿ ಮೇಲ್ಚಾವಣಿಗಳು ಹಾರಿಹೋಗಿ ಮನೆಗಳಿಗೆ ಹಾನಿಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:43 am, Mon, 22 May 23

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​