ರಾಜ್ಯದ ಮೂರು ರಾಜಕೀಯ ಪಕ್ಷಗಳಲ್ಲಿ ಭ್ರಷ್ಟರಿದ್ದಾರೆ: ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ರಾಜ್ಯದ ಮೂರು ರಾಜಕೀಯ ಪಕ್ಷಗಳಲ್ಲೂ ಭ್ರಷ್ಟರಿದ್ದು, ಮೂರು ಪಕ್ಷದವರು ಲೋಕಾಯುಕ್ತವನ್ನು ವಿರೋಧಿಯಾಗಿದ್ದಾರೆ ಎಂದು ಮೈಸೂರಿನಲ್ಲಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.

ರಾಜ್ಯದ ಮೂರು ರಾಜಕೀಯ ಪಕ್ಷಗಳಲ್ಲಿ ಭ್ರಷ್ಟರಿದ್ದಾರೆ: ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
ಲೋಕಾಯುಕ್ತ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 12, 2022 | 4:08 PM

ಮೈಸೂರು: ರಾಜ್ಯದ ಮೂರು ರಾಜಕೀಯ ಪಕ್ಷಗಳಲ್ಲಿ (Political Parties) ಭ್ರಷ್ಟರಿದ್ದು, ಮೂರು ಪಕ್ಷದವರು ಲೋಕಾಯುಕ್ತವನ್ನು (Lokayukta) ವಿರೋಧಿಯಾಗಿದ್ದಾರೆ ಎಂದು ಮೈಸೂರಿನಲ್ಲಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ (Santosh Hegde) ಹೇಳಿದ್ದಾರೆ.  ಚುನಾವಣೆಯ ಕಾರಣದಿಂದ ಇದೆಲ್ಲಾ ಗಿಮಿಕ್ ಮಾಡುತ್ತಿದ್ದಾರೆ. ‘ಸುಪ್ರೀಂ’ ಮೊರೆ ಹೋದರೆ ಅಧಿಕಾರ ಕಳೆದುಕೊಳ್ಳುವ ಭೀತಿ ಇದೆ. ಚುನಾವಣೆ ಸಮೀಪಿಸುತ್ತಿರುವ  ಹಿನ್ನೆಲೆ ನೇರವಾಗಿ ಅಪೀಲು ಹೋಗುತ್ತಿಲ್ಲ ಎಂದರು.

ಹಿಂಬಾಗಿಲ ಮೂಲಕ ‘ಸುಪ್ರೀಂ’ ಮೊರೆ ಹೋಗಲು ಅವಕಾಶ ಇದೆ. ಸದ್ಯಕ್ಕೆ ಚುನಾವಣೆ ಇರುವ ಕಾರಣ ಗೌಣವಾಗಿದ್ದಾರೆ. ರಾಜ್ಯದಲ್ಲಿ ಪ್ರವಾಹ ಉಂಟಾಗಿ ಸಾವಿರಾರು ಕೋಟಿ ನಷ್ಟವಾಗಿದೆ. 40% ಕಮಿಷನ್ ಆಸೆಗಾಗಿ ಜನಪ್ರತಿನಿಧಿಗಳು ಸೈಲೆಂಟ್ ಆಗಿದ್ದಾರೆ ಎಂದು ಹೇಳಿದರು.

ಜೈಲಿಗೆ ಹೋಗಿ ಬಂದವರಿಗೆ ಸೇಬಿನ ಹಾರ ಹಾಕುತ್ತಾರೆ. ಭ್ರಷ್ಟರಿಗೆ, ಭ್ರಷ್ಟಾಚಾರಿಗೆ ಜೈಕಾರ ಹಾಕುತ್ತಾರೆ. ಏರ್ಪೋರ್ಟ್ ಹೊರಗೆ ಹೋಗಿ ಸ್ವಾಗತ ಕೋರುತ್ತಾರೆ. ಸದ್ಯ ಜನರ ಮನಃಸ್ಥಿತಿ ಹಣ, ಅಧಿಕಾರದ ಹಿಂದೆ ಸಾಗಿದೆ ಅದಕ್ಕಾಗಿ ಹಂಬಲಿಸುತ್ತಾರೆ ಹಾತೋರೆಯುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದೆ ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ. ಮೂರು ಪಕ್ಷದವರು ಕೂಡ ಈ ತೀರ್ಪುನ್ನು ವಿರೋಧಿಸಬಹುದು. ಲೋಕಾಯುಕ್ತ ಇದ್ದ ವೇಳೆ ಸಾಕಷ್ಟು ಪ್ರಕರಣಗಳಲ್ಲಿ ಶಿಕ್ಷೆ ಆಗಿತ್ತು. ಎಸಿಬಿ ಬಂದ ಬಳಿಕ ಯಾವೊಬ್ಬ ರಾಜಕಾರಣಿ ಮೇಲೆ ಅಧಿಕಾರಿಯ ಮೇಲೆ ಕ್ರಮ ಜರುಗಿಸಿರಲಿಲ್ಲ. ಲೋಕಾಯುಕ್ತಕ್ಕೆ ಸ್ವಾತಂತ್ರ್ಯವಾದ ಅಧಿಕಾರ ಹಾಗೂ ಸವಲತ್ತುಗಳನ್ನು ನೀಡಬೇಕು. ಈ ಮೂಲಕ ಲೋಕಾಯುಕ್ತವನ್ನು ಬಲ ಪಡಿಸಬೇಕು ಎಂದರು.

ಎಸಿಬಿಯಲ್ಲಿ ಈ ವರಗೆ ಸಾವಿರಾರು ಕೇಸ್​ಗಳು ದಾಖಲಾಗಿವೆ ಆದರೆ ಯಾರಿಗೂ ಶಿಕ್ಷೆ ಆಗಿಲ್ಲ ಎಂಬುವುದೆ ಬೇಸರದ ಸಂಗತಿ. ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಶಿಕ್ಷೆಯೇ ಆಗಿಲ್ಲ. ಮಂತ್ರಿ ಇರಲಿ ಒಬ್ಬ ಶಾಸಕನನ್ನು ಕೂಡ ಎಸಿಬಿ ವಿಚಾರಣೆ ಮಾಡಿಲ್ಲ. ನಮ್ಮ ನಿಮ್ಮಂತವರು ತಪ್ಪು ಮಾಡಿದರೆ ಹೀಗೆ ನಡೆದುಕೊಳ್ಳುತ್ತಿದ್ದಾರಾ ? ಎಂದು ಪ್ರಶ್ನೆ ಮಾಡಿದರು.

ಸರ್ಕಾರಿ ಅಧಿಕಾರಿಗಳ ತನಿಖೆ ಮಾಡಬೇಕಾದರೆ ಸರ್ಕಾರದ ಅನುಮತಿ ಕೇಳುತ್ತಾರೆ. ಇದು ಬ್ರಿಟಿಷ್ ಆಡಳಿತದ ಕಾನೂನು. ಅಂದಿನ ಬ್ರಿಟಿಷರು ತಮ್ಮ ಪ್ರಬಲಕ್ಕಾಗಿ ಈ ನಿಯಮ ಜಾರಿಗೆ ತಂದಿದ್ದರು. ಆದರೆ ಇಂದು ನಮ್ಮದೇ ಸರ್ಕಾರ ಇರುವಾಗ ಸರ್ಕಾರದ ಅನುಮತಿ ಯಾಕೆ ಬೇಕು ? ಸಾಮಾನ್ಯ ಜನರನ್ನು ನೇರವಾಗಿ ತನಿಖೆ ಮಾಡುತ್ತಾರೆ. ಆದರೆ ಅಧಿಕಾರಿಗಳನ್ನು ತನಿಖೆ ಮಾಡಬೇಕಾದರೆ ಸರ್ಕಾರದ ಅನುಮತಿ ಏಕೆ ? ಎಂದು ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಇ ಇಲ್ಲಿ ಕ್ಲಿಕ್​ ಮಾಡಿ

Published On - 4:05 pm, Fri, 12 August 22